ರಾಯಚೂರು | ಮನೆ ಮುಂದೆ ಪಟಾಕಿ ಹಚ್ಚುವ ವಿಚಾರಕ್ಕೆ ಜಗಳ; ಯುವಕನ ಕೊಲೆ

Date:

ರಾಯಚೂರು ನಗರದ ರಾಗಿಮಾನಗಡ್ಡದಲ್ಲಿ ಮನೆ ಮುಂದೆ ಪಟಾಕಿ ಹಚ್ಚುವ ವಿಚಾರಕ್ಕೆ ಬಡಾವಣೆಯ ಯುವಕರ ಮಧ್ಯೆ ಜಗಳವಾಗಿ ಓರ್ವ ಕೊಲೆಗೀಡಾದ ಘಟನೆ ನಡೆದಿದೆ.

- Advertisement -

ನರಸಿಂಹಲು (32) ಎಂಬ ಯುವಕನ ಕೊಲೆಯಲ್ಲಿ ಈ ಜಗಳ ಅಂತ್ಯಗೊಂಡಿದೆ. ಮನೆ ಮುಂದೆ ಪಟಾಕಿ ಹಚ್ಚುತ್ತಿರುವ ಕಾರಣಕ್ಕೆ ನರಸಿಂಹಲು ಹಾಗೂ ಬಡಾವಣೆಯ ಇತರರ ನಡುವೆ ಗಲಾಟೆಯಾಗಿದೆ. ನರಸಿಂಹಲು ನಮ್ಮ ಮನೆ ಮುಂದೆ ಪಟಾಕಿ ಹಚ್ಚಬೇಡಿ ಎಂದು ಆಕ್ಷೇಪ ಮಾಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಯುವಕರು ಮಾತು ಕೇಳದಿದ್ದಾಗ ಗುಂಪಿನಲ್ಲಿದ್ದ ಪ್ರವೀಣ ಎಂಬ ಯುವಕನನ್ನು ಹಲ್ಲೆ ಮಾಡಲು ಮುಂದಾಗಿದ್ದಾನೆ. ಇದರಿಂದ ತಪ್ಪಿಸಿಕೊಂಡ ಪ್ರವೀಣ ತನ್ನ ಸ್ನೇಹಿತ ಈಶ್ವರ, ವಿ ನರೇಶ ಸೇರಿ ಕಟ್ಟಿಗೆ, ಬಲ್ಲಿಸ್ ನಿಂದ ಮೈಕೈ, ತಲೆಗೆ ಹೊಡೆದಿದ್ದಾರೆ.

ಗುಂಪಿನಲ್ಲಿದ್ದ ರೋಹನ ಎಂಬ ಯುವಕ ಕೆಳಗೆ ಬಿದ್ದಿದ್ದ ನರಸಿಂಹಲು ಕುತ್ತಿಗೆ ಮೇಲೆ ಕಾಲಿಟ್ಟದ್ದರಿಂದ ಮೂರ್ಛೆ ಹೋಗಿದ್ದ. ಘಟನೆಯ ಬಳಿಕ ಕುಟುಂಬಸ್ಥರು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದೇಹದ ಹಲವೆಡೆ ಬಲವಾದ ಗಾಯಗೊಂಡಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ಎಫ್ಐಆರ್‌ನಲ್ಲಿ ಮಾಹಿತಿ ದಾಖಲಾಗಿದೆ.

ಇದನ್ನು ಓದಿದ್ದೀರಾ? ಗ್ರೌಂಡ್ ರಿಪೋರ್ಟ್‌ | ಕಡಕೋಳ ಗಲಭೆ: ಗ್ರಾಮವನ್ನೇ ತೊರೆದ 70ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳು!

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಐವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ರಾಯಚೂರು ನಗರದ ಪಶ್ಚಿಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...