ರಾಯಚೂರು ಗ್ರಾಮೀಣ ಬ್ಯಾಂಕ್‌ಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ ಹಾಗೂ ಗುತ್ತಿಗೆ ನೌಕರರನ್ನು ಖಾಯಂಗೊಳಿಸುವದು ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕೆಜಿಬಿ ಪ್ರಾದೇಶಿಕ ಕಚೇರಿ ಮುಂದೆ ನೌಕರರ ಪ್ರತಿಭಟನೆ ನಡೆಸಿದ್ದಾರೆ.
ಕರ್ನಾಟಕ ಗ್ರಾಮೀಣ ನೌಕರರ ಸಂಘ ಮತ್ತು ಕರ್ನಾಟಕ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳ ಸಂಘ, ಸಮನ್ವಯ ಮತ್ತು ಜಂಟಿ ಕ್ರಿಯಾ ಸಮಿತಿಗಳ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಎಲ್ಲಾ ಗ್ರಾಮೀಣ ಬ್ಯಾಂಕ್‌ಗಳನ್ನು ಒಗ್ಗೂಡಿಸಿ ರಾಷ್ಟ್ರಮಟ್ಟದಲ್ಲಿ ಬ್ಯಾಂಕ್ ಸ್ಥಾಪನೆ ಹಾಗೂ ಖಾಲಿಯಿರುವ ಹುದ್ದೆಗಳನ್ನು ಭರ್ತಿಮಾಡಿ, ಕೆಲಸ ಒತ್ತಡ ತಡೆಯುವಂತೆ ಪ್ರತಿಭಟನಾನಿರತ ನೌಕರರು ಆಗ್ರಹಿಸಿದರು.
ನೌಕರರ ಸಂಘದ ಮುಖಂಡ ಎಂ.ಡಿ. ಯೂನಸ್ ಮಾತನಾಡಿ, ರಾಷ್ಟ್ರೀಯ ಬ್ಯಾಂಕ್ ವಿಲೀನ ಮಾದರಿಯಲ್ಲಿಯೇ ಎಲ್ಲಾ ಗ್ರಾಮೀಣ ಬ್ಯಾಂಕ್‌ಗಳನ್ನು ಒಗ್ಗೂಡಿಸಿ ರಾಷ್ಟ್ರೀಯ ಬ್ಯಾಂಕ್ ಸ್ಥಾಪಿಸಬೇಕಿದೆ. ಗ್ರಾಮೀಣ ಬ್ಯಾಂಕ್‌ಗಳಲ್ಲಿ 2 ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿಯಿವೆ. ಭರ್ತಿ ಮಾಡದೇ ಇರುವದರಿಂದ ನೌಕರರು ಒತ್ತಡದಲ್ಲಿ ಕೆಲಸ ಮಾಡುವಂತಾಗಿದೆ. ಕೂಡಲೇ ಭರ್ತಿಗೆ ಮುಂದಾಗಬೇಕು ಎಂದರು.
ಅಲ್ಲದೇ ಬ್ಯಾಂಕ್‌ಗಳಲ್ಲಿ ಕಳೆದ ಹತ್ತಾರು ವರ್ಷಗಳಿಂದ ಕೆಲಸ ಮಾಡುತ್ತಿರುವ ಗುತ್ತಗೆ ನೌಕರರನ್ನು ಖಾಯಂಗೊಳಿಸುವಂತೆ ಕಾರ್ಮಿಕ ನ್ಯಾಯಾಲಯ ಆದೇಶ ನೀಡಿದೆ. ಆದರೆ, ಆಡಳಿತ ಮಂಡಳಿ ಹೈಕೋರ್ಟನಲ್ಲಿ ಆಕ್ಷೇಪಣಾ ಅರ್ಜಿ ಸಲ್ಲಿಸಿದ್ದು ಕೂಡಲೇಹಿಂಪಡೆದು ಖಾಯಂಗೊಳಿಸುವಂತೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಪವನ, ರಮೇಶಬಾಬು, ಮಂಜುನಾಥ, ಸತ್ಯನಾರಾಯಣ, ಕೃಪಾ ಜೋಷಿ ಸೇರಿದಂತೆ ಸಂಘಗಳ ಪದಾಧಿಕಾರಿಗಳು, ನೌಕರರು ಭಾಗಿಯಾದರು.