ರಾಯಚೂರು | ಕನ್ನಡ ಬಗ್ಗೆ ಅವಹೇಳನ ಹೇಳಿಕೆ;ಕಮಲ್ ಹಾಸನ್ ವಿರುದ್ದ ಕರವೇ ಪ್ರತಿಭಟನೆ

Date:

ಕನ್ನಡ ತಮಿಳಿನಿಂದ ಹುಟ್ಟಿರುವುದು ಎಂದು ಹೇಳಿಕ ನೀಡಿದ ಚಿತ್ರನಟ ಕಮಲ್ ಹಾಸನ್ ಕೂಡಲೇ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಕರವೇ ಹಾಗೂ ಕನ್ನಡಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಅಂಬೇಡ್ಕರ್ ವೃತ್ತದಲ್ಲಿ ಕಮಲ್ ಹಾಸನ್ ಅವರ ಭಾವಚಿತ್ರಕ್ಕೆ ಬೂಟ್‌ನಿಂದ ಹೊಡೆದು ಆಕ್ರೋಶ ಹೊರ ಹಾಕಿ ತಕ್ಷಣ ತಮ್ಮ ಹೇಳಿಕೆಗೆ ತಪ್ಪಾಗಿದೆ ಎಂದು ಕನ್ನಡಿಗರಿಗೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಕಮಲ್ ಹಾಸನ್ ಅನೇಕ ಕನ್ನಡ ಚಿತ್ರಗಳಲ್ಲೂ ನಟಿಸಿದ್ದಾರೆ.ನಟನ ಹೇಳಿಕೆಯಿಂದ ಕನ್ನಡಿಗರು ಹಾಗೂ ತಮಿಳರ ನಡುವೆ ದ್ವೇಷ ಹುಟ್ಟುವಂತೆ ಮಾಡಿದ್ದಾರೆ.ಕನ್ನಡ ಭಾಷೆಯ ಬಗ್ಗೆ ಹಗುರವಾಗಿ ಮಾತನಾಡಿ ಅವಮಾನ ಮಾಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಕನ್ನಡ ಪರ ಸಂಘಟನೆ ಮುಖಂಡ ಬಸವರಾಜ ಕಳಸ ಮಾತನಾಡಿ, ಬೆಂಗಳೂರಿಗೆ ಪ್ರಚಾರ ಕಾರ್ಯಕ್ಕೆ ಆಗಮಿಸಿದ ಕಮಲ್ ಹಾಸನ್ ಅವರು ತಮಿಳ್‌ನಿಂದ ಕನ್ನಡ ಹುಟ್ಟಿಕೊಂಡಿದೆ ಎಂದು ಮಾತನಾಡಿದ್ದು, ಅಲ್ಲಿಯೇ ಇದ್ದ ನಟ ಶಿವರಾಜ್ ಕುಮಾರ ಅವರು ಖಂಡಿಸಬೇಕಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದರು.

2 ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಗೆ ಕರ್ನಾಟಕದಲ್ಲಿರುವ 6 ಸಾವಿರ ಕೋಟಿ ಜನರಿಗೆ ಬೆಂಕಿ ಕೆಂಡವಾಗಿದೆ. ಕನ್ನಡದ ಬಗ್ಗೆ ಹಗುರವಾಗಿ ಮಾತನಾಡಿದ್ದು, ನಾಡಿಗೆ ದ್ರೋಹ ಬಗೆದಂತೆ, ಕನ್ನಡದಲ್ಲಿಯೇ ಸಾಕಷ್ಟು ಸಿನಿಮಾ ಮಾಡಿದ್ದು ಭಾಷಾ ವಿರೋಧಿಯಾಗಿದ್ದಾರೆ ಎಂದು ಕಿಡಿ ಕಾರಿದರು.

- Advertisement -

ಈ ಸುದ್ದಿ ಓದಿದ್ದೀರಾ? ರಾಯಚೂರು | ಡ್ರಗ್ಸ್ ಸೇವನೆ ಆರೋಗ್ಯಕ್ಕೆ ಮಾರಕ;ಎಸ್ ಪಿ ಎಂ.ಪುಟ್ಟಮಾದಯ್ಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕಮಲ ಹಾಸನ್ ಅವರು ಕನ್ನಡ ಜನತೆಗೆ ಬೇಷರತ್ತಾಗಿ ಕ್ಷಮೆಯಾಚಿಸಬೇಕು, ರಾಜ್ಯದಲ್ಲಿ ಕಮಲ್ ಹಾಸನ್ ಹಾಗೂ ತಮಿಳ್ ಸಿನಿಮಾಗಳ ಪ್ರದರ್ಶನ ರದ್ದುಪಡಿಸಬೇಕು.ಕನ್ನಡ ಚಲನಚಿತ್ರ ಮಂಡಳಿಗೆ ಈ ಬಗ್ಗೆ ದೂರು ನೀಡಲಾಗುವುದು. ಭಾಷಾ ವಿರೋಧಿ ದೂರು ದಾಖಲಿಸಬೇಕು ಎಂದು ಒತ್ತಾಯಿಸಿದರು.

ನಂತರ ಮಾತನಾಡಿದ ಅಶೋಕ ಕುಮಾರ ಸಿಕೆ ಜೈನ್ ಮಾತನಾಡಿ, ಕಮಲ್ ಹಾಸನ ಅವರು ರಾಜ್ಯಕ್ಕೆ ಬಂದು ಕನ್ನಡ ತಮಿಳನಿಂದ ಬಂದಿದೆ ಎಂದು ಹೇಳುವ ಮೂಲಕ ಕನ್ನಡಿಗರನ್ನು ರೊಚ್ಚಿಗೆಳುವಂತೆ ಮಾಡಿದ್ದಾರೆ.ನಾಡು ನುಡಿಗೆ ಹೆಸರಾದ ಕರ್ನಾಟಕ, ಕನ್ನಡ ಭಾಷೆಯ ಬಗ್ಗೆ ಹಗುರವಾಗಿ ಮಾತನಾಡಿದನ್ನು ಖಂಡಿಸಿದರು.ರಾಜ್ಯದಲ್ಲಿ ತಮಿಳ್ ಸಿನಿಮಾಗಳ ಪ್ರದರ್ಶನ ರದ್ದು ಮಾಡಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಕೆ.ಇ. ಕುಮಾರ, ಬಷೀರ ಅಹಮದ್ ಹೊಸಮನಿ, ಸರೋಜಾ ಸಂಘ, ಕಲ್ಲೂರುಕರ್, ಜಗದೀಶ ಪಾಟೀಲ್ ವಿಶ್ವನಾಥ ಪಟ್ಟಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ...

ಧಾರವಾಡ | ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗಾಂಧಿ‌ ಜಯಂತಿ‌ ಆಚರಣೆ

ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ರಾಷ್ಟ್ರಪತಿ ಮಹಾತ್ಮಾ ಗಾಂಧೀಜಿ ಹಾಗೂ ...

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...