ರಾಯಚೂರು | ಎಸ್‌ಟಿ ನಕಲಿ ಪ್ರಮಾಣಪತ್ರ ತಡೆಗೆ ಆಯೋಗ ರಚಿಸಿ; ವಾಲ್ಮೀಕಿ ನಾಯಕ ಸಂಘ ಆಗ್ರಹ

Date:

ಹಿಂದುಳಿದ ವರ್ಗದಲ್ಲಿ ಬರುವ ತಳವಾರ ಮತ್ತು ಪರಿವಾರ ಎಸ್‌ಟಿ ಸಮುದಾಯದ ನಕಲಿ ಪ್ರಮಾಣ ಪತ್ರ ಹಾವಳಿ ತಡೆಯುವುದಕ್ಕೆ ಆಯೋಗ ರಚನೆ ಮಾಡಬೇಕು ಎಂದು ಹೈದರಾಬಾದ್ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕ ಸಂಘದ ವಿಭಾಗೀಯ ಕಾರ್ಯದರ್ಶಿ ಎನ್ ರಘುವೀರ್ ನಾಯಕ ಆಗ್ರಹಿಸಿದರು.

ನಗರದಲ್ಲಿ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, “ಪರಿಶಿಷ್ಠ ಪಂಗಡದ ತಳವಾರ ಮತ್ತು ಪರಿವಾರ ಹೆಸರಿನ ಮೇಲೆ ಹಿಂದುಳಿದ ವರ್ಗದಲ್ಲಿ ಬರುವ ಇತರೆ ಸಮುದಾಯದವರು ಎಸ್‌ಟಿ (ಪ.ಪಂಗಡ) ಪ್ರಮಾಣ ಪತ್ರ ಪಡೆದು ನೈಜ ಫಲಾನುಭವಿಗಳಿಗೆ ಸಿಗಬೇಕಾದ ಸೌಲಭ್ಯಗಳನ್ನು ಕಸಿಯುತ್ತಿದ್ದಾರೆ. ಮುಖ್ಯವಾಗಿ ನಾಡಕಚೇರಿ ತತ್ರಾಂಶದಲ್ಲಿ ಇರುವ ದೋಷವೇ ಎಲ್ಲಾ ನಕಲಿ ಪ್ರಮಾಣ ಪತ್ರಗಳು ವಿತರಣೆಯಾಗಲು ಕಾರಣವಾಗಿದೆ” ಎಂದು ಆರೋಪಿಸಿದರು.

“ಹಿಂದುಳಿದ ವರ್ಗದಲ್ಲಿ ಬರುವ ಯಾರಾದರೂ ತಳವಾರ ಎಂದು ಅರ್ಜಿ ಸಲ್ಲಿಸಿದರೆ ಅವರಿಗೆ ಎಸ್‌ಟಿ ಪ್ರಮಾಣಪತ್ರಗಳು ವಿತರಣೆಯಾಗುತ್ತಿವೆ. ಇದರಿಂದ ಎರಡು ಸಮುದಾಯಗಳಿಗೆ ಅನ್ಯಾಯವಾಗುತ್ತಿದೆ. ಕೂಡಲೇ ಸರ್ಕಾರ ಇದಕ್ಕೆ ಕಡಿವಾಣ ಹಾಕಲು ನಾಡಕಚೇರಿ ತತ್ರಾಂಶದಲ್ಲಿ ಹಿಂದುಳಿದ ವರ್ಗದಲ್ಲಿ ಬರುವ ತಳವಾರ ಎನ್ನುವ ಪದವನ್ನು ಅಲ್ಲಿಯೇ ಸೇರಿಸುವ ಮೂಲಕ ಎರಡು ಸಮುದಾಯಗಳಿಗೆ ನ್ಯಾಯ ಒದಗಿಸಬೇಕು” ಎಂದು ಆಗ್ರಹಿಸಿದರು.

“ಈಗಾಗಲೇ ವಿತರಣೆ ಆಗಿರುವ ನಕಲಿ ಪ್ರಮಾಣ ಪತ್ರಗಳನ್ನು ಹಿಂಪಡೆಯಲು ಆಯೋಗ ರಚನೆ ಮಾಡಿ, ಎಸ್‌ಟಿಗೆ ಸೇರದ ಇತರೆ ಸಮುದಾಯದವರು ಸರ್ಕಾರದ ಅಧಿಸೂಚನೆ ಮೇರೆಗೆ ನಾಯ್ಕಡ, ನಾಯಕ ಜಾತಿ ಹೆಸರಿನಲ್ಲಿ ಪಡೆದ ಎಸ್‌ಟಿ ಜಾತಿ ಪ್ರಮಾಣ ಪತ್ರಗಳನ್ನು ರದ್ದುಗೊಳಿಸಬೇಕು. ಬದಲಿಗೆ ಆಯಾ ಜಾತಿ ಪ್ರಮಾಣಪತ್ರಗಳನ್ನು ವಿತರಿಸಬೇಕು” ಎಂದು ಒತ್ತಾಯಿಸಿದರು.

- Advertisement -

ಈ ಸುದ್ದಿ ಓದಿದ್ದೀರಾ?: ರಾಯಚೂರು | ʼಮಾದಕ ವ್ಯಸನದಿಂದ ಯುವಕರ ರಕ್ಷಣೆಗೆ ಪೊಲೀಸ್ ಇಲಾಖೆ ಮುಂದಾಗಬೇಕುʼ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ವೇಳೆ ಮಲ್ಲಿಕಾರ್ಜುನ ನಾಯಕ, ರಮೇಶ ನಾಯಕ, ರಾಮು ನಾಯಕ ಹಾಗೂ ನರೇಂದ್ರ ನಾಯಕ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...