ಕೃಷಿ ವಿಶ್ವವಿದ್ಯಾಲಯವು ಸಂಶೋಧನೆ ಮತ್ತು ಗುಣಮಟ್ಟದ ಶಿಕ್ಷಣದಿಂದ ಬೆಳೆಯಲು ಸಾಧ್ಯವಾಗಿದೆ. ಜೊತೆಗೆ ವಿಜ್ಞಾನಗಳ ಯಶಸ್ಸುನಿಂದ ವಿಶ್ವವಿದ್ಯಾಲಯವು ಮುನ್ನಡೆಯುತ್ತಿದೆ ಎಂಧು ತೋಟಗಾರಿಕೆ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಸಿ ವಾಸುದೇವಪ್ಪ ಹೇಳಿದ್ದಾರೆ.
ರಾಯಚೂರಿನ ಕೃಷಿ ವಿಶ್ವವಿದ್ಯಾಲಯದ ಪ್ರೇಕ್ಷಾ ಗೃಹದಲ್ಲಿ ನಡೆದ 15ನೇ ಸಂಸ್ಥಾಪನಾ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. “ರಾಯಚೂರು ಕೃಷಿ ವಿಶ್ವವಿದ್ಯಾಲಯವು ಈ ಹಿಂದೆ ಧಾರವಾಡ ವಿಶ್ವವಿದ್ಯಾಲಯಕ್ಕೆ ಒಳಪಟ್ಟಿತು. ಅಂದಿನ ಸಂದರ್ಭದಲ್ಲಿ ಕೃಷಿ ವಿಶ್ವವಿದ್ಯಾಲಯ ಸಾಕಷ್ಟು ಸಂಶೋಧನೆ ಮಾಡಿದೆ. ಜೊತೆಗೆ ಗುಣಮಟ್ಟದ ಶಿಕ್ಷಣ ಒದಗಿಸಿದೆ. 2005ರಲ್ಲಿ ಧಾರವಾಡ ವಿಶ್ವವಿದ್ಯಾಲಯದಿಂದ ಬೇರ್ಪಟ್ಟು ಪ್ರತೇಕ ವಿಶ್ವವಿದ್ಯಾಲಯವಾಗಿ ಸಾಕಷ್ಟು ಸಾಧನೆಗಳನ್ನು ಮಾಡಿದೆ” ಎಂದರು.
“ಕೃಷಿ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಸಾಕಷ್ಟು ಸಂಶೋಧನೆ ನಡೆಸಿದ್ದು, ದೇಶದಲ್ಲಿ ಗುರುತಿಸಿಕೊಂಡಿದೆ. ಇಲ್ಲಿ ಅಭ್ಯಾಸ ಮಾಡಿದವರು ಅನೇಕ ಕ್ಷೇತ್ರದಲ್ಲಿ ಬೆಳೆಯಲು ಬುನಾದಿ ಹಾಕಿಕೊಟ್ಟಿದೆ. ಅದರಲ್ಲಿ ವಿಜಯನಗರ ಜಿಲ್ಲಾಧಿಕಾರಿ ದಿವಾಕರ ಕೂಡ ಒಬ್ಬರಾಗಿದ್ದಾರೆ” ಎಂದು ಅವರು ತಿಳಿಸಿದರು.
ವಿಜಯನಗರ ಜಿಲ್ಲಾಧಿಕಾರಿ ಎಮ್ ಎಸ್ ದಿವಾಕರ ಮಾತನಾಡಿ, “ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಯಾಗಿದ್ದ ಸಂದರ್ಭದಲ್ಲಿ ಸಾಕಷ್ಟು ಕಲಿತಿದ್ದೇನೆ. ಇಲ್ಲಿನ ಅಧ್ಯಾಪಕರ ಪ್ರೋತ್ಸಾಹದಿಂದ ಕೃಷಿ ಇಲಾಖೆ ಸಹಾಯಕ ಕೃಷಿ ಅಧಿಕಾರಿಯಾಗಿ, ಜಂಟಿ ಕೃಷಿ ಅಧಿಕಾರಿಯಾಗಿದ್ದ ಕೆಲಸ ಮಾಡಿದ್ದೇನೆ. ಇದೀಗ ಐಎಎಸ್ ಮುಗಿಸಿ ಜಿಲ್ಲಾಧಿಕಾರಿಯಾಗಿದ್ದೇನೆ” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕುಲಪತಿ ಡಾ.ಎಂ ಹನುಮಂತಪ್ಪ, ಮಾಜಿ ಶಾಸಕ ಬಸನಗೌಡ ಬ್ಯಾಗವಾಟ್, ವಿಶ್ರಾಂತ ಕುಲಪತಿ ಬಿವಿ ಪಾಟೀಲ್, ಎಸ್‌ಕೆ ಮೇಟಿ, ಮಲ್ಲಿಕಾರ್ಜುನ ಡಿ, ತ್ರಿವಿಕ್ರಮ ಜೋಷಿ, ಕೊಟ್ರೇಶಪ್ಪ ಕೊರಿ, ಶ್ರೀಧರ ಕೆಸರಟ್ಟಿ, ಸುನಿಲ್, ನೇಮಿಚಂದ್ರಪ್ಪ, ವಿಶ್ವನಾಥ, ಗೌಡಪ್ಪ ಸೇರಿದಂತೆ, ಪ್ರಾದ್ಯಾಪಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವರದಿ : ಹಫೀಜುಲ್ಲ