ವಿಷಾಹಾರ ಸೇವಿಸಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇನ್ನೋರ್ವ ಯುವತಿ ಬುಧವಾರ ಸಾವನ್ನಪ್ಪಿದ್ದಾರೆ.
ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಕಳೆದ ವಾರ ವಿಷ ಆಹಾರ ಸೇವಿಸಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದರು. ತೀವ್ರ ಅಸ್ವಸ್ಥರಾಗಿದ್ದ ಮಲ್ಲಮ್ಮ ಎಂಬ ಯುವತಿಯನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತಪಟ್ಟಿದ್ದಾಳೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಬಳಿಕ ಕುಟುಂಬಸ್ಥರಿಗೆ ಒಪ್ಪಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಬೀಡಾಡಿ ದನಗಳ ಹಾವಳಿ; ಸ್ಥಳೀಯರಿಗೆ ಕಿರಿಕಿರಿ
ಆಗಸ್ಟ್ 1 ರಂದು ಮನೆಯಲ್ಲಿ ಮಾಂಸಾಹಾರ ಸೇವಿಸಿ ಅಸ್ವಸ್ಥಗೊಂಡಿದ್ದ ಭೀಮಣ್ಣ, ಈರಮ್ಮ, ಮಲ್ಲೇಶ, ಪಾರ್ವತಿ ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದರು. ಇದೀಗ ಮಲ್ಲಮ್ಮ ಕೂಡಾ ಮೃತಪಟ್ಟಿದ್ದು, ಸಾವಿನ ಸಂಖ್ಯೆ 5ಕ್ಕೆ ಏರಿದೆ.