ರಾಯಚೂರು | ಮೈಕ್ರೋ ಫೈನಾನ್ಸ್ ರಿಕವರಿ ಏಜೆಂಟ್ ಹೆಸರಿನಲ್ಲಿ ವಂಚನೆ; ನಾಲ್ವರ‌ ಬಂಧನ

Date:

ಮೈಕ್ರೋ ಫೈನಾನ್ಸ್ ಹೆಸರಿನಲ್ಲಿ ರೈತನಿಂದ ಹಣ ವಸೂಲಿ ಮಾಡಲು ತೊಡಗಿದ್ದ ಆರೋಪದ ಮೇಲೆ ರಾಯಚೂರು ಗ್ರಾಮೀಣ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

- Advertisement -

ಬಂಧಿಸಿದ ಆರೋಪಿಗಳನ್ನು ಫಯಾಜ್, ಶೇಖ್ ಎಂ ಡಿ ಆಯುಬ್, ಸೈಯದ್ ಶಹಬಾಜ್ ಅಹ್ಮದ್, ಅರೋನ್ ರಶೀದ್ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಆರೋಪಿಗಳ ಪೈಕಿ ಓರ್ವ ಬಜಾಜ್ ಫೈನಾನ್ಸ್ ರಿಕವರಿ ಸಿಬ್ಬಂದಿಯಾಗಿರುವ ಶೇಕ್ ಎಂ ಡಿ ಅಯುಬ್ ಮೂರು ಜನರೊಂದಿಗೆ ಸೇರಿ ಮೊಬೈಲ್ ಆ್ಯಪ್‌ನಲ್ಲಿ ಫೈನಾನ್ಸ್‌ಗಳ ಸಾಲ ಬಾಕಿ ಇರುವವರನ್ನು ಗುರುತಿಸಿ, ಟಾರ್ಗೆಟ್ ಮಾಡುತ್ತಿದ್ದರು. ರಸ್ತೆ ಮಧ್ಯದಲ್ಲೇ ಬೈಕ್, ವಾಹನಗಳನ್ನು ಅಡ್ಡಗಟ್ಟಿ ಸಾಲ ತೀರಿಸುವಂತೆ ಬೆದರಿಕೆ ಹಾಕುತ್ತಿದ್ದರು ಎಂದು ಹೇಳಲಾಗಿದೆ.

1001882473

ಪ್ರಕರಣದ ಹಿನ್ನೆಲೆ: ದೂರುದಾರ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುಂಡ್ಲೂರು ಗ್ರಾಮದ ಫಯಾಜ್ ಜನವರಿ 17ರಂದು ರಾಯಚೂರಿನ ಮಾರುಕಟ್ಟೆಯಲ್ಲಿ ಹತ್ತಿ ಮಾರಾಟ ಮಾಡಿ ಊರಿಗೆ ಹೋಗುವಾಗ ಯರಮರಸ್ ಸಮೀಪ‌ ಮಹೇಂದ್ರ ಪಿಕಪ್‌ ಗಾಡಿಯನ್ನು ಅಡ್ಡಗಟ್ಟಿದ ಆರೋಪಿಗಳು, ʼನಿಮ್ಮ ಫೈನಾನ್ಸ್ ಹಣ ಬಾಕಿ ಇದೆ ಕಟ್ಟಿ ಗಾಡಿ ವಾಪಸ್ ತಗೊಂಡು ಹೋಗಿʼ ಎಂದು ಮಹೇಂದ್ರ ಪಿಕಪ್ ತೆಗೆದುಕೊಂಡು ಹೋಗಿದ್ದಾರೆ.

1001882561

ಫಯಾಜ್ ಅವರು ತಮ್ಮ ಊರಿಗೆ ಹೋಗಿ‌ ಶಹಪುರದಲ್ಲಿನ ಕನಕದುರ್ಗ ಫೈನಾನ್ಸ್ ಕಂಪನಿಗೆ ಜನವರಿ 21ರಂದು ತಮ್ಮ ಲೋನ್ ಬಾಕಿ ಹಣ ₹56,750 ಕಟ್ಟಿ ಮರಳಿ ರಾಯಚೂರಿಗೆ ಬಂದಿದ್ದಾರೆ. ರಾಯಚೂರಿನ ಚಂದ್ರಬಂಡಾ ರಸ್ತೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಬಳಿ ನಿಂತ ಆರೋಪಿಗಳು ಮಹೇಂದ್ರ ಪಿಕಪ್ ನೀಡದೆ ಫಯಾಜ್ ಅವರಿಗೆ ಜೀವಬೆದರಿಕೆ ಹಾಕಿ ₹12,000 ಕೇಳಿ ಬೆದರಿಕೆ ಹಾಕಿದ್ದಾರೆ. ಜನವರಿ 22ರಂದು ಫಯಾಜ್ ಅವರು ರಾಯಚೂರು ಗ್ರಾಮೀಣ‌ ಪೊಲೀಸ್ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ಪಿಎಸ್ಐ ಪ್ರಕಾಶ ಡಂಬಲ ನೇತೃತ್ವದ ತಂಡ ತನಿಖೆ ನಡೆಸಿ ಜನವರಿ 23ರಂದು ಆರೋಪಿಗಳನ್ನು ಬಂಧಿಸಿದ್ದಾರೆ.

ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಒಂದೆಡೆಯಾದರೆ, ಇನ್ನೊಂದು ಕಡೆ ನಕಲಿ ಸಾಲ ರಿಕವರಿ ತಂಡ ವಸೂಲಿ ದಂಧೆ ನಡೆಸಿರುವುದು ಬೆಳಕಿಗೆ ಬಂದಿದೆ. ಫೈನಾನ್ಸ್ ಸಾಲ ರಿಕವರಿ ತಂಡದ ಹೆಸರಲ್ಲಿ ಕಿರುಕುಳ ನೀಡುತ್ತಿದ್ದ ನಾಲ್ವರು ಆರೋಪಿಗಳನ್ನು ರಾಯಚೂರು ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

1001882477
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...