ನೈತಿಕತೆಯೇ ಸ್ವಾತಂತ್ರ್ಯ ಎಂಬ ಧ್ಯೇಯವಾಕ್ಯದಡಿ ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ಮಹಿಳಾ ಘಟಕದ ವತಿಯಿಂದ ಅಭಿಯಾನವನ್ನು ಆಯೋಜಿಸಲಾಗಿದೆ ಎಂದು ಜಮಾಅತೆ ಇಸ್ಲಾಂ ಹಿಂದ್ ತಾಲೂಕು ಘಟಕದ ಅಧ್ಯಕ್ಷೆ ಅರ್ಷಿಯಾ ಬೇಗಂ ಹೇಳಿದರು.
ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಜಾಗೃತಿ ಮೂಡಿಸಲಿಕ್ಕಾಗಿ ಮತ್ತು ಪ್ರಸಕ್ತ ಸ್ಥಿತಿಯಲ್ಲಿ ಸುಧಾರಣೆ ತರಲಿಕ್ಕಾಗಿ ಜಮಾಅತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗವು ‘ನೈತಿಕತೆಯೇ ಸ್ವಾತಂತ್ರ್ಯ’ ಎಂಬ ಧ್ಯೇಯ ವಾಕ್ಯದಡಿ ರಾಜ್ಯಾದ್ಯಂತ ಅಭಿಯಾನವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಪ್ರಸಕ್ತ ಕಾಲದಲ್ಲಿ ನಮ್ಮ ಸಮಾಜವು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸವಾಲುಗಳು ಬಹಳ ಕಳವಳಕಾರಿಯಾಗಿದೆ. ಜೊತೆಗೆ ಹೆಚ್ಚುತ್ತಿರುವ ನಗ್ನತೆ, ಜೂಜು, ಮದ್ಯಪಾನ, ಮಾದಕ ವ್ಯಸನ, ಲಿವಿಂಗ್ ರಿಲೇಶನ್ಶಿಪ್, ಸಲಿಂಗಕಾಮ ಹಾಗೂ ವೇಶ್ಯಾವಾಟಿಕೆಗಳಂತಹ ಕೆಡುಕುಗಳು ಸಮಾಜದ ಹದಗೆಡುತ್ತಿರುವ ನೈತಿಕ ಮಟ್ಟಕ್ಕೆ ಕೈಗನ್ನಡಿಯಾಗಿದೆ. ಇನ್ನೊಂದೆಡೆ ನೈತಿಕ ಸಾಮಾಜಿಕ ಮತ್ತು ಜೈವಿಕಮಟ್ಟದಲ್ಲಿ ಅಸಂಖ್ಯ ಸಮಸ್ಯೆಗಳನ್ನು ಹುಟ್ಟು ಹಾಕಿವೆ ಎಂದು ತಿಳಿಸಿದರು.
ಸಮಾಜದಲ್ಲಿ ವಿನಮ್ರತೆ ಪರಿಶುದ್ಧತೆ ಮತ್ತು ನಿಷ್ಠೆ ಅಂತ ಮೌಲ್ಯಗಳನ್ನು ತೀವ್ರವಾಗಿ ಹಾನಿಗೊಳಿಸಿದೆ. ಲೈಂಗಿಕ ನೈತಿಕತೆ ಮತ್ತು ಕುಟುಂಬ ವ್ಯವಸ್ಥೆ ಮೇಲೆ ಅದು ಕೆಟ್ಟ ಪರಿಣಾಮ ಬೀರಿದೆ. ಮಾನವ ಸಂಬಂಧಗಳ ಪಾವಿತ್ರ್ಯವನ್ನು ಉಲ್ಲಂಘಿಸಲಾಗುತ್ತಿದೆ. ನಾಗರಿಕತೆಯ ಸೋಗಿನಲ್ಲಿರುವ ಅನಾಗರಿಕತೆ ಮತ್ತು ನೈತಿಕ ಅವನತಿಯ ಬಿರುಗಾಳಿಯನ್ನು ತಡೆಯಲು ನಾವೆಲ್ಲರೂ ಒಗ್ಗೂಡಬೇಕಿದೆ. ಶಾಂತಿ ಮತ್ತು ಸಮೃದ್ಧಿಯನ್ನು ಖಾತ್ರಿಪಡಿಸುವ ಮಾರ್ಗದ ಕಡೆಗೆ ಜನರಿಗೆ ಮಾರ್ಗ ತೋರಿಸಬೇಕುದೆ ಎಂದು ತಿಳಿಸಿದರು.
ಇದನ್ನು ಓದಿದ್ದೀರಾ? ರಾಯಚೂರು | ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ
ಜಮಾಅತೆ ಇಸ್ಲಾಮೀ ಹಿಂದ್ ತಾಲೂಕು ಘಟಕ ಕಾರ್ಯದರ್ಶಿ ಫರ್ಹಾದಿಬಾ, ಸಬೀಹಾ ಬೇಗಂ, ಸುಮೇರಾ, ಉಮ್ಮುಸಲ್ಮಾ, ಪರ್ವೀನ್ ಬೇಗಂ, ಅಮ್ಜದ್ ಅಲಿ ಇನ್ನಿತರರು ಹಾಜರಿದ್ದರು.
