ರಾಯಚೂರು | ಸಮಾಜದಲ್ಲಿ ಸುಧಾರಣೆ ತರಲಿಕ್ಕಾಗಿ ನೈತಿಕತೆಯ ಸ್ವಾತಂತ್ರ್ಯ ಅಭಿಯಾನ: ಅರ್ಷಿಯಾ ಬೇಗಂ

Date:

ನೈತಿಕತೆಯೇ ಸ್ವಾತಂತ್ರ್ಯ ಎಂಬ ಧ್ಯೇಯವಾಕ್ಯದಡಿ ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ಮಹಿಳಾ ಘಟಕದ ವತಿಯಿಂದ ಅಭಿಯಾನವನ್ನು ಆಯೋಜಿಸಲಾಗಿದೆ ಎಂದು ಜಮಾಅತೆ ಇಸ್ಲಾಂ ಹಿಂದ್ ತಾಲೂಕು ಘಟಕದ ಅಧ್ಯಕ್ಷೆ‌ ಅರ್ಷಿಯಾ ಬೇಗಂ ಹೇಳಿದರು.

- Advertisement -

ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಜಾಗೃತಿ ಮೂಡಿಸಲಿಕ್ಕಾಗಿ ಮತ್ತು ಪ್ರಸಕ್ತ ಸ್ಥಿತಿಯಲ್ಲಿ ಸುಧಾರಣೆ ತರಲಿಕ್ಕಾಗಿ ಜಮಾಅತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗವು ‘ನೈತಿಕತೆಯೇ ಸ್ವಾತಂತ್ರ್ಯ’ ಎಂಬ ಧ್ಯೇಯ ವಾಕ್ಯದಡಿ ರಾಜ್ಯಾದ್ಯಂತ ಅಭಿಯಾನವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಪ್ರಸಕ್ತ ಕಾಲದಲ್ಲಿ ನಮ್ಮ ಸಮಾಜವು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸವಾಲುಗಳು ಬಹಳ ಕಳವಳಕಾರಿಯಾಗಿದೆ. ಜೊತೆಗೆ ಹೆಚ್ಚುತ್ತಿರುವ ನಗ್ನತೆ, ಜೂಜು, ಮದ್ಯಪಾನ, ಮಾದಕ ವ್ಯಸನ, ಲಿವಿಂಗ್ ರಿಲೇಶನ್ಶಿಪ್, ಸಲಿಂಗಕಾಮ ಹಾಗೂ ವೇಶ್ಯಾವಾಟಿಕೆಗಳಂತಹ ಕೆಡುಕುಗಳು ಸಮಾಜದ ಹದಗೆಡುತ್ತಿರುವ ನೈತಿಕ ಮಟ್ಟಕ್ಕೆ ಕೈಗನ್ನಡಿಯಾಗಿದೆ. ಇನ್ನೊಂದೆಡೆ ನೈತಿಕ ಸಾಮಾಜಿಕ ಮತ್ತು ಜೈವಿಕಮಟ್ಟದಲ್ಲಿ ಅಸಂಖ್ಯ ಸಮಸ್ಯೆಗಳನ್ನು ಹುಟ್ಟು ಹಾಕಿವೆ ಎಂದು ತಿಳಿಸಿದರು.

ಸಮಾಜದಲ್ಲಿ ವಿನಮ್ರತೆ ಪರಿಶುದ್ಧತೆ ಮತ್ತು ನಿಷ್ಠೆ ಅಂತ ಮೌಲ್ಯಗಳನ್ನು ತೀವ್ರವಾಗಿ ಹಾನಿಗೊಳಿಸಿದೆ. ಲೈಂಗಿಕ ನೈತಿಕತೆ ಮತ್ತು ಕುಟುಂಬ ವ್ಯವಸ್ಥೆ ಮೇಲೆ ಅದು ಕೆಟ್ಟ ಪರಿಣಾಮ ಬೀರಿದೆ. ಮಾನವ ಸಂಬಂಧಗಳ ಪಾವಿತ್ರ್ಯವನ್ನು ಉಲ್ಲಂಘಿಸಲಾಗುತ್ತಿದೆ. ನಾಗರಿಕತೆಯ ಸೋಗಿನಲ್ಲಿರುವ ಅನಾಗರಿಕತೆ ಮತ್ತು ನೈತಿಕ ಅವನತಿಯ ಬಿರುಗಾಳಿಯನ್ನು ತಡೆಯಲು ನಾವೆಲ್ಲರೂ ಒಗ್ಗೂಡಬೇಕಿದೆ. ಶಾಂತಿ ಮತ್ತು ಸಮೃದ್ಧಿಯನ್ನು ಖಾತ್ರಿಪಡಿಸುವ ಮಾರ್ಗದ ಕಡೆಗೆ ಜನರಿಗೆ ಮಾರ್ಗ ತೋರಿಸಬೇಕುದೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ರಾಯಚೂರು | ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ

ಜಮಾಅತೆ ಇಸ್ಲಾಮೀ ಹಿಂದ್‌ ತಾಲೂಕು ಘಟಕ ಕಾರ್ಯದರ್ಶಿ ಫರ್ಹಾದಿಬಾ, ಸಬೀಹಾ ಬೇಗಂ, ಸುಮೇರಾ, ಉಮ್ಮುಸಲ್ಮಾ, ಪರ್ವೀನ್ ಬೇಗಂ, ಅಮ್ಜದ್‌ ಅಲಿ ಇನ್ನಿತರರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...