ರಾಯಚೂರು | ಇಂಧನ ಬೆಲೆ ಹೆಚ್ಚಳ – ಸರ್ಕಾರದ ಆತುರದ ನಿರ್ಧಾರ: ಚಾಮರಸ ಮಾಲಿಪಾಟೀಲ್

Date:

ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಹೆಚ್ಚಿಸುವ ಮೂಲಕ ರಾಜ್ಯ ಸರ್ಕಾರ ಆತುರದ ನಿರ್ಧಾರ ಕೈಗೊಂಡಿದೆ. ಸರ್ಕಾರ ತನ್ನ ನಿರ್ಧಾರವನ್ನು ಮರು ಪರಿಶೀಲಿಸಬೇಕು ಎಂದು ಸರ್ವೋದಯ ಕರ್ನಾಟಕ ಪಕ್ಷದ ರಾಜ್ಯಾಧ್ಯಕ್ಷ ಚಾಮರಸ ಮಾಲಿಪಾಟೀಲ್ ಒತ್ತಾಯಿಸಿದ್ದಾರೆ.

- Advertisement -

ರಾಯಚೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ಇಂಧನ ಬೆಲೆ ಏರಿಕೆಯು ರೈತರಿಗೆ ನೇರವಾಗಿ ಹೊರೆಯಾಗುತ್ತಿದೆ. ಕೇಂದ್ರ ಸರ್ಕಾರ ಇಂಧನ ಬೆಲೆ ಹೆಚ್ಚಿಸಿದ್ದನ್ನು ವಿರೋಧಿಸಿದ್ದ ಕಾಂಗ್ರೆಸ್, ಈಗ ಇಂಧನ ಬೆಲೆ ಹೆಚ್ಚಿಸಲು ನಿರ್ಧಸಿದೆ. ಈಗಾಗಲೇ ಬೀಜ, ರಸಗೊಬ್ಬರ ಬೆಲೆ ಹೆಚ್ಚಾಗಿದೆ. ಈಗ ಇಂಧನ ಬೆಲೆ ಹೆಚ್ಚಳದಿಂದ ಉಳುಮೆ, ಕಟಾವು, ಸಾಗಾಣೆ ಬೆಲೆ ಹೆಚ್ಚಳವಾಗಲಿದೆ. ಕೃಷಿ ನಿರ್ವಹಣೆ ಹೆಚ್ಚು ಹೊರೆಯಾಗುತ್ತದೆ. ಕೂಡಲೇ ಆದೇಶವನ್ನು ಮರುಪರಿಶೀಲಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

“ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ 187 ಕೋಟಿ ರೂ. ಅವ್ಯವಹಾರ ನಡೆದಿದ್ದು, ತನಿಖೆ ನಡೆಯುತ್ತಿದೆ. ಭೂ ಒಡೆತನ ಯೋಜನೆಯಡಿ ಭೂಮಿ ಮಾರಿರುವ ಹಾಗೂ ಖರೀದಿಸಿರುವವರಿಗೆ ಅನುದಾನ ನೀಡಲು ಹಣವೇ ಇಲ್ಲ ಎಂದು ಹೇಳುತ್ತಿದ್ದ ನಿಗಮ, ಇಷ್ಟೊಂದು ದೊಡ್ಡ ಮೊತ್ತ ಉಳಿಸಿಕೊಂಡಿದ್ದು ಯಾಕಾಗಿ” ಎಂದು ಪ್ರಶ್ನಿಸಿದರು.

“ನಿಗಮದ ಅಧ್ಯಕ್ಷ ಬಸನಗೌಡ ದದ್ದಲ ಅಕ್ರಮ ಕುರಿತು ನನಗೇನೂ ಗೊತ್ತಿಲ್ಲ ಎನ್ನುತ್ತಿದ್ದಾರೆ. ನಿಗಮದ ಅಧ್ಯಕ್ಷರಾಗಿ ನಿಗಮದಲ್ಲಿ ಏನುನಡೆಯುತ್ತಿದೆ ಎಂಬುದು ಗೋತ್ತಿಲ್ಲದೇ ಇರುವದಿಲ್ಲ. ಎಸ್‌ಟಿ ಮೀಸಲಾತಿಯಿಂದಲೇ ಶಾಸಕರಾಗಿ, ಅಧ್ಯಕ್ಷರಾಗಿದ್ದು, ಅದೇ ಸಮುದಾಯಕ್ಕೆ ಅನ್ಯಾಯ ಮಾಡಿದ್ದರೂ ಸಮ್ಮನಿದ್ದಾರೆ. ಕೂಡಲೇ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಅವರು ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದರು.

ಕೃಷಿ ಇಲಾಖೆಯಲ್ಲಿ ಅನೇಕ ಅಕ್ರಮಗಳು ನಡೆಯುತ್ತಿವೆ. ಲಿಖಿತವಾಗಿ, ಮೌಖಿಕವಾಗಿ ಅನೇಕ ದೂರುಗಳನ್ನು ಕೊಟ್ಟರೂ ಯಾವುದೇ ಕ್ರಮ ಕೈಗೊಂಡಿಲ್ಲ. ಇಲಾಖೆ ಸಚಿವರು, ಕಾರ್ಯದರ್ಶಿಗಳು ಶಾಮೀಲಾಗಿರುವ ಶಂಕೆಯಿದ್ದು, ಕೂಡಲೇ ಮುಖ್ಯಮಂತ್ರಿಗಳು ಕೃಷಿ ಸಚಿವ ಚಲುವರಾಯಸ್ವಾಮಿ ಅವರನ್ನು ಸಂಪುಟದಿಂದ ಕೈಬಿಡಬೇಕು” ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಭಾಕರ ಪಾಟೀಲ್ ಇಂಗಳಧಾಳ, ಬೂದೆಯ್ಯ ಸ್ವಾಮಿ ಗಬ್ಬೂರು, ದೇವರಾಜನಾಯಕ, ಮಲ್ಲನಗೌಡ ದಿನ್ನಿ, ವೀರೇಶ ಪಾಟೀಲ್, ಅಮರೇಶ, ಹೊನ್ನಪ್ಪ ,ಷಣ್ಮೂಖ ಉಪಸ್ಥಿತರಿದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಲ್ಪೆಯಲ್ಲಿ ಆಂಧ್ರಪ್ರದೇಶ ಮೂಲದ ವ್ಯಕ್ತಿ ಕೊಲೆ

ಆಂಧ್ರಪ್ರದೇಶ ಮೂಲದ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಲ್ಪೆಯಲ್ಲಿ ಮಂಗಳವಾರ ಬೆಳಗ್ಗೆ...

ಗ್ರಾಮೀಣ ಬದುಕು, ಕೃಷಿ ಸಂಸ್ಕೃತಿ ಪ್ರವಾಸಿಗರಿಗೆ ಪರಿಚಯಿಸಲು ಹೊಸ ಪ್ರವಾಸೋದ್ಯಮ ಪ್ಯಾಕೇಜ್‌ಗಳ ಚಿಂತನೆ

ಉಡುಪಿ ಜಿಲ್ಲೆಯ ನೈಸರ್ಗಿಕ ಸೌಂದರ್ಯ, ಧಾರ್ಮಿಕ ಕ್ಷೇತ್ರಗಳು ಹಾಗೂ ಕಡಲತೀರಗಳೊಂದಿಗೆ ಗ್ರಾಮೀಣ...

ವಿಜಯಪುರ | ಬರ ಪರಿಹಾರ ಹೆಚ್ಚಳ, ಸಾಲಮನ್ನಾಕ್ಕೆ ರಾಜ್ಯ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯಲ್ಲಿ ಮಳೆ ಕೈಕೊಟ್ಟು ಕೃಷಿ ಚಟುವಟಿಕೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿರುವ...