ರಾಯಚೂರು | ಉತ್ತರ ಕರ್ನಾಟಕದ ಭಾಗದಲ್ಲಿ ಗಮಕ ಕಾವ್ಯವನ್ನು ಉಳಿಸಿ ಬೆಳೆಸುವ ಕಾರ್ಯವಾಗಬೇಕು: ಡಾ ಎ ವಿ ಪ್ರಸನ್ನ

Date:

ಉತ್ತರ ಕರ್ನಾಟಕದ ಭಾಗದಲ್ಲಿ ಹುಟ್ಟಿಕೊಂಡಿದ್ದ ಗಮಕ ಕಾವ್ಯ ಇಂದು ದಕ್ಷಿಣ ಕರ್ನಾಟಕದಲ್ಲಿ ಬೆಳೆಯುತ್ತಿದೆ. ಈ ಭಾಗದಲ್ಲಿಯೇ ಪಂಪ, ಕುಮಾರವ್ಯಾಸರು ಕಾವ್ಯ ರಚನೆ ಮಾಡಿದ್ದು, ಈ ಭಾಗದಲ್ಲಿ ಗಮಕ ಕಾವ್ಯ ಬೆಳಕಿಗೆ ಬರುತ್ತಿಲ್ಲ. ಹಾಗಾಗಿ ಈ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಗಮಕ ಕಾವ್ಯವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಕರ್ನಾಟಕ ಗಮಕ ಕಲಾ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ ಎ ವಿ ಪ್ರಸನ್ನ ಹೇಳಿದರು.

- Advertisement -

ರಾಯಚೂರು ನಗರದ ಕರ್ನಾಟಕ ಸಂಘದಲ್ಲಿ ಕರ್ನಾಟಕ ಗಮಕ ಕಲಾ ಪರಿಷತ್ತು ಬೆಂಗಳೂರು ಮತ್ತು ಜಿಲ್ಲಾ ಘಟಕ ಸಂಯುಕ್ತ ಆಶ್ರಯದಲ್ಲಿ ಗಮಕ ವಾಚನ ವ್ಯಾಖ್ಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಗಮಕವನ್ನು ಹಿಂದಿನಿಂದಲೂ ಕಟ್ಟಿ ಬೆಳೆಸಿ ಉಳಿಸಿಕೊಂಡು ಬರಲಾಗುತ್ತಿದೆ. ಗಮಕ ಕಾವ್ಯವನ್ನು ಎತ್ತರಕ್ಕೆ ಬೆಳೆಸುವ ಕೆಲಸ ನಿರಂತರವಾಗಿ ಬೆಳೆಯಬೇಕಿದೆ. ಆದರೆ ಇಂದು ಗಮಕವನ್ನು ಯಾರು ಕೇಳುತ್ತಿದ್ದಾರೆಂದು ಪ್ರಶ್ನೆ ಮಾಡುತ್ತಿದ್ದಾರೆ. ಈ ಭಾಗದ ಕವಿಗಳಾದ ಪಂಪ, ಕುಮಾರವ್ಯಾಸರಿಂದ ಹುಟ್ಟಿಕೊಂಡಿದ್ದ ಗಮಕವನ್ನು ದಕ್ಷಿಣ ಕರ್ನಾಟಕ ಭಾಗದಲ್ಲಿ ಪ್ರತಿದಿನ ಕುಮಾರವ್ಯಾಸರ ಕುರಿತು ಉಪನ್ಯಾಸ ಕಾರ್ಯಕ್ರಮ ಸೇರಿದಂತೆ ಹಲವು ಕಾರ್ಯಕ್ರಮ ನಡೆಸಲಾಗುತ್ತಿದೆ. ಆದರೆ ಈ ಭಾಗದಲ್ಲಿ ಮಾತ್ರ ಗಮಕ ಹೆಸರಿಗೆ ಎಂಬುದಾಗಿವೆ” ಎಂದರು.

“ಕನ್ನಡ ಭಾಷೆಗೆ 8 ಜ್ಞಾನಪೀಠ ಪ್ರಶಸ್ತಿಗಳು, ಸರಸ್ವತಿ ಸಮ್ಮಾನ್ ಪ್ರಶಸ್ತಿಗಳು ಲಭಿಸಿವೆ. ಪಂಪ, ಕುಮಾರವ್ಯಾಸರ ಕಾಲದಲ್ಲಿ ಪ್ರಶಸ್ತಿಗಳು ಇದ್ದಿದ್ದರೆ ಅವರಿಗೆ ಲಭಿಸುತ್ತಿದ್ದವು. ಹಾಗಾಗಿ ಈಗಿನ ಈ ಪ್ರಶಸ್ತಿಗಳು ಅವರಿಗೆ ಸಲ್ಲುತ್ತವೆ. ಈ ಭಾಗದಲ್ಲಿ ಅನೇಕ ದಾಳಿ ನಡೆದ ಸಂದರ್ಭದಲ್ಲಿಯೂ ತಾಳೆಗರಿಗಳ ಗ್ರಂಥಗಳನ್ನು ಕಾಪಾಡಿಕೊಂಡು ಬಂದಿದೆ. ಗಮಕವನ್ನು ಉಳಿಸಿ ಬೆಳೆಸಬೇಕಾಗಿದೆ” ಎಂದರು.

“ಗಮಕವನ್ನು ಉಳಿಸಿ ಬೆಳೆಸುವ ಕೆಲಸ ಸರ್ಕಾರ ಮತ್ತು ವಿಶ್ವ ವಿದ್ಯಾಲಯಗಳು ಮಾಡಬೇಕು. ಆದರೆ, ಕೆಲಸ ಮಾಡುತ್ತಿಲ್ಲ. ನಾವು ನೀವೆಲ್ಲರೂ ಉಳಿಸಬೇಕಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಪೆಟ್ರೋಲ್ ಡಿಸೇಲ್ ದರ ಹೆಚ್ಚಳ; ದರ ಇಳಿಕೆಗೆ ಡಿವೈಎಫ್‌ಐ ಆಗ್ರಹ

ಈ ಸಂದರ್ಭದಲ್ಲಿ ದಾಸ ಸಾಹಿತ್ಯ ವಿದ್ವಾಂಸರು ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಡಾ ಜಯಲಕ್ಷ್ಮಿ ಮಂಗಳಮೂರ್ತಿ, ಅಂತರಾಷ್ಟ್ರೀಯ ಕ್ಲಾರಿಯೋನೆಟ್ ವಾದಕ ಡಾ. ನರಸಿಂಹಲು ವಡವಾಟಿ, ಕನ್ನಡ ಸಂಘದ ಅಧ್ಯಕ್ಷ ಪಲಗುಲು ನಾಗರಾಜ, ಗಮಕ ಕಲಾ ಪರಿಷತ್ ಕಾರ್ಯದರ್ಶಿ ದಕ್ಷಿಣ ಮೂರ್ತಿ, ಹೊಸಪೇಟೆ ಗಮಕ ಕಲಾ ಜಿಲ್ಲಾ‌ಧ್ಯಕ್ಷ ಪಲ್ಲವಿ ಭಟ್, ಅರುಣಾ ಹಿರೇಮಠ, ವೆಂಕಟೇಶ ನವಲಿ, ಸಾಹಿತಿ ವೀರ ಹನುಮಾನ್, ಪ್ರಾಣೇಶ ಕುಲಕರ್ಣಿ ವಿಜತರಾಜೇಂದ್ರ, ಕೊಪ್ರೇಶ ದೇಸಾಯಿ, ಮಂಜುನಾಥ, ಗಾಯತ್ರಿ ಸಲವಾಡಿ ಸೇರಿದಂತೆ ಬಹುತೇಕರು ಇದ್ದರು.

ವರದಿ : ಹಫಿಜುಲ್ಲ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...