ರಾಯಚೂರು | ಕಸ ವಿಲೇವಾರಿ ಘಟಕದಿಂದ ಗ್ರಾಮಸ್ಥರಿಗೆ ಸಮಸ್ಯೆ; ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಬಸನಗೌಡ ಬಾದರ್ಲಿ

Date:

ಸಿಂಧನೂರು ನಗರದ ಹೊರವಲಯದಲ್ಲಿರುವ ನಗರಸಭೆಯ ಕಸವಿಲೇವಾರಿ ಸಂಗ್ರಹ ಘಟಕಕ್ಕೆ ವಿಧಾನ ಪರಿಷತ್ ಶಾಸಕ ಬಸನಗೌಡ ಬಾದರ್ಲಿ ಭೇಟಿ ನೀಡಿ, ಬೇಜವಾಬ್ದಾರಿಯಿಂದ ಕೆಲಸ ಮಾಡುತ್ತಿರುವ ನಗರಸಭೆ ಅಧಿಕಾರಿ, ಸಿಬ್ಬಂದಿಗಳಿಗೆ ತರಾಟೆ ತೆಗೆದುಕೊಂಡರು.

ನಗರದಲ್ಲಿ ಸಂಗ್ರಹಿಸಿದ ಕಸ ವೈಜ್ಞಾನಿಕವಾಗಿ ಸಂಸ್ಕರಣೆ ಮಾಡುವ ಮೂಲಕ ಜನರ ಆರೋಗ್ಯ ರಕ್ಷಣೆಗೆ ಮುಂದಾಗಬೇಕು. ಕಸಕ್ಕೆ ಬೆಂಕಿ ಹಚ್ಚಿ ಸುಡುವುದರಿಂದ ನಗರದ ನಾಗರಿಕರು ಹಾಗೂ ಕಸ ಸಂಗ್ರಹ ಘಟಕದ ಹತ್ತಿರ ಇರುವ ಹಳ್ಳಿಗಳ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಗಳಿವೆ. ನಗರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹಾಜರಾಗಿ ಸರ್ಕಾರಿ ನೀಡುವ ಸಂಬಳಕ್ಕೆ ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು ಎಂದು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡರು.

ವಿಲೇವಾರಿ ಘಟಕದ ವ್ಯವಸ್ಥಾಪಕ ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹಾಜರಾಗಿಲ್ಲದಿರುವುದು ಆಕ್ರೋಶಗೊಂಡ ಬಸನಗೌಡ ಬಾದರ್ಲಿ ದೂರವಾಣಿ ಮೂಲಕ ಕರೆ ಮಾಡಿ, ತರಾಟೆ ತೆಗೆದುಕೊಂಡರು. ನಗರಸಭೆ ಪೌರಾಯುಕ್ತರಿಗೆ ಕರೆ ಮಾಡಿ ಅಸಡ್ಡೆ ತೋರಿದ ಸಿಬ್ಬಂದಿ ವಿರುದ್ಧ ಕ್ರಮಕೈಗೊಳ್ಳಲು ಶಿಫಾರಸು ಮಾಡಿ ಎಂದು ತಿಳಿಸಿದರು.

ಮಲ್ಲಾಪುರ ಸೇರಿದಂತೆ ಇತರೆ ಸುತ್ತಮುತ್ತಲಿನ ಗ್ರಾಮಸ್ಥರು ಕಸ ವಿಲೇವಾರಿ ಘಟಕ ಬೇರೆಡೆಗೆ ಸ್ಥಳಾಂತರಿಸಲು ಕ್ರಮಕೈಗೊಳ್ಳಲು ಬಸನಗೌಡ ಬಾದರ್ಲಿ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ವೀರೇಶ ರಾರಾವಿ, ಪ್ರಭುದೇವರಗುಡಿ, ಪರಶುರಾಮ್ ಮಲ್ಲಾಪುರ ಸೇರಿದಂತೆ ಹಲವರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಗಾಂಧೀಜಿ ಆದರ್ಶಗಳು ಯುವಕರಿಗೆ ದಾರಿದೀಪ: ಪವನಕುಮಾರ ವಳಕೇರಿ

ಬ್ರಿಟಿಷರ ವಿರುದ್ಧ ಶಾಂತಿ, ಅಹಿಂಸೆ ಹಾಗೂ ತಾಳ್ಮೆಯ ಮಾರ್ಗದಲ್ಲಿ ಹೋರಾಡಿ ದೇಶಕ್ಕೆ...

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...