ಗೋಕಾಕ್ ಚಳುವಳಿ ಹಿನ್ನೋಟ ಮತ್ತು ಮುನ್ನೋಟ ಕಾರ್ಯಕ್ರಮವು ಅ.5ಕ್ಕೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೀಶ್ ಕೆ. ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅ.5ರಂದು ಗೋಕಾಕ ಚಳುವಳಿ ಹಿನ್ನೋಟ ಮತ್ತು ಮುನ್ನೋಟದ ಕಾರ್ಯಕ್ರಮ ಕೃಷಿ ವಿವಿ ಆವರಣದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಸಿಎಂ ಅವರು ಉದ್ಘಾಟಿಸಲಿದ್ದಾರೆ. ಮೆರವಣಿಗೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ ಪಾಟೀಲ್ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.
ಮೆರವಣಿಗೆ ಬಸವೇಶ್ವರ ವೃತ್ತದಿಂದ ಕೃಷಿ ವಿವಿವರೆಗೆ ನಡೆಯಲಿದೆ, ವಿವಿಧ ಕಲಾ ತಂಡಗಳು ಭಾಗವಹಿಸಲಿವೆ. ಈ ಕಾರ್ಯಕ್ರಮಕ್ಕೆ 1 ಕೋಟಿ ಖರ್ಚು ಮಾಡುತ್ತಿದ್ದು, ಸರ್ಕಾರದಿಂದ 70 ಲಕ್ಷ ಹಾಗೂ ನಗರಸಭೆ, ನಗರಾಭಿವೃದ್ಧಿ ಪ್ರಾಧಿಕಾರಿಂದ 30 ಲಕ್ಷ ಒಟ್ಟು 1 ಕೋಟಿ ವೆಚ್ಚದಲ್ಲಿ ಕಾರ್ಯಕ್ರಮ ಮಾಡಲಾಗುತ್ತದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಜನರಿಗೆ ಊಟ, ಹಾಗೂ ವಸತಿ ವ್ಯವಸ್ಥೆ ಒದಗಿಸಲಾಗುತ್ತದೆ ಎಂದರು.
ಇದನ್ನು ಓದಿದ್ದೀರಾ? ಮೈಸೂರು | ನಾಡಪ್ರಭು ಕೆಂಪೇಗೌಡ ಪ್ರಶಸ್ತಿಗೆ ಆರು ಮಂದಿ ಗಣ್ಯ ಸಾಧಕರು ಆಯ್ಕೆ
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಶಿವರಾಜ ತಂಗಡಗಿ, ಜಿಲ್ಲಾ ಉಸ್ತುವಾರಿ ಸಚಿವ ಶರಣ ಪ್ರಕಾಶ್ ಪಾಟೀಲ್, ಸಚಿವ ಎನ್ ಎಸ್ ಬೋಸರಾಜು ಸೇರಿ ಶಾಸಕರು, ಸ್ಥಳೀಯ ಜನ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದರು.
