ರಾಯಚೂರು | ಬಜೆಟ್‌ನಲ್ಲಿ ಅತಿಥಿ ಶಿಕ್ಷಕರ ಗೌರವಧನ ಹೆಚ್ಚಳಕ್ಕೆ ಒತ್ತಾಯ

Date:

ಪ್ರಸ್ತುತ ರಾಜ್ಯ ಬಜೆಟ್‌ನಲ್ಲಿ ಅತಿಥಿ ಶಿಕ್ಷಕರ ಗೌರವಧನ ಹೆಚ್ಚಿಸಬೇಕು ಎಂದು ಒತ್ತಾಯಿಸಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘ ರಾಯಚೂರು ಜಿಲ್ಲಾ ಘಟಕದ ಪದಾಧಿಕಾರಿಗಳು ಗುರುವಾರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿ ಪ್ರತಿಭಟನೆ ನಡೆಸಿದರು.

- Advertisement -

“ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ 27,000 ಮಂದಿ ಪ್ರಾಥಮಿಕ ಶಾಲಾ ಶಿಕ್ಷಕರು ಹಾಗೂ 800 ಮಂದಿ ಪ್ರೌಢಶಾಲಾ ಅತಿಥಿ ಶಿಕ್ಷಕರ ನೇಮಕ ಪ್ರಕ್ರಿಯೆಗೆ ಚಾಲನೆ ನೀಡಿದ್ದು ಶ್ಲಾಘನೀಯ. ಅತಿಥಿ ಶಿಕ್ಷಕರಿಗೆ ಖಾಯಂ ನೇಮಕ ಮಾಡಿ ಕನಿಷ್ಠ ವೇತನ, ಸಿಎಲ್ ರಜೆ ನೀಡಬೇಕು. ಅತಿಥಿ ಶಿಕ್ಷಕರ ನೇಮಕಾತಿಯಲ್ಲಿ ಸೇವಾ ಹಿರಿತನ ಪರಿಗಣಿಸಿ ಮೊದಲ ಆದ್ಯತೆ ನೀಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಶಿಕ್ಷಕರ ವರ್ಗಾವಣೆ ಹಾಗೂ ಖಾಯಂ ನೇಮಕವಾದ ಸಂದರ್ಭದಲ್ಲಿ ಅತಿಥಿ ಶಿಕ್ಷಕರನ್ನು ಕೈಬಿಡುವ ಬದಲು ಶಿಕ್ಷಕರ ಕೊರತೆ ಇರುವ ಶಾಲೆಗೆ ವರ್ಗಾಯಿಸಬೇಕು. ಅತಿಥಿ ಶಿಕ್ಷಕರ ನೇಮಕಾತಿಯಲ್ಲಿ ಸೇವಾ ಹಿರಿತನದ ಆಧಾರದ ಮೇಲೆ ವಾರ್ಷಿಕ ಶೇ.5ರಷ್ಟು ಕೃಪಾಂಕ ನೀಡಬೇಕು. ಜೊತೆಗೆ ಪ್ರತಿ ತಿಂಗಳು ವೇತನ ನೀಡಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನೇಮಕಾತಿ ಆದೇಶಕ್ಕೆ ಸಹಾಯಕ ಪ್ರಾಧ್ಯಾಪಕ ಅಭ್ಯರ್ಥಿಗಳ ಮನವಿ

ಪ್ರತಿಭಟನೆಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಜೆ ಕೆ ನಾಗರಾಜ, ಉಪಾಧ್ಯಕ್ಷೆ ಸಲ್ಮಾ ಖಾನಂ, ರಾಮಲಿಂಗಮ್ಮ, ಶಿವಲೀಲಾ, ವಿದ್ಯಾಲಕ್ಷ್ಮಿ ಇದ್ದರು.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...