ರಾಯಚೂರು | ಬರ ಪ್ರದೇಶಗಳ ಘೋಷಣೆಗೆ ಸರ್ಕಾರ ಮೀನಾಮೇಷ; ರೈತಸಂಘ ಕಿಡಿ

Date:

Advertisements

ರಾಜ್ಯದಲ್ಲಿ ಸಮರ್ಪಕವಾಗಿ ಮಳೆಯಾಗದೇ ಇರುವುದರಿಂದ ಬೆಳೆ ನಷ್ಟವಾಗಿದೆ. 130 ತಾಲೂಕುಗಳಲ್ಲಿ ಬರ ಎದುರಾಗಿದೆ. ಬರ ಪ್ರದೇಶಗಳ ಘೊಷಣೆಗೆ ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಜೊತೆಗೆ ಬರಗಾಲದ ನಷ್ಟ ಪರಿಹಾರ ನೀಡಲು ಒಬಿರಾಯನ ಕಾಲದ ಎನ್‌ಡಿಆರ್‌ಎಫ್ ನಿಯಮಗಳನ್ನು ಮುಂದುವರೆಸಿಕೊಂಡು ಬಂದಿದ್ದಾರೆ. ಅವುಗಳನ್ನು ಬದಲಾವಣೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದರು.

ರಾಯಚೂರಿನಲ್ಲಿ ನಡೆದ ರೈತ ಸಂಘದ ಕಲ್ಯಾಣ ಕರ್ನಾಟಕ ವಿಭಾಗೀಯ ಮಟ್ಟದ ಕಾರ್ಯಾಗಾರ ಮತ್ತು ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. “ರಾಜ್ಯದಲ್ಲಿ ಮಳೆನಂಬಿ ರೈತರು ಬೆಳೆ ಬೆಳೆದಿದ್ದು, ಮಳೆಯಾಗದೇ ಇರುವುದರಿಂದ ಬೆಳೆ ನಷ್ಟವಾಗಿದೆ. ರಾಜ್ಯದಲ್ಲಿ 130ಕ್ಕೂ ಅಧಿಕ ತಾಲೂಕುಗಳಲ್ಲಿ ಬರಗಾಲ ಆವರಿಸಿದೆ. ಸರ್ಕಾರ ಬರಗಾಲ ಪ್ರದೇಶವೆಂದು ಘೋಷಣೆ ಮಾಡಿ ಬೆಳೆನಷ್ಟ ಪರಿಹಾರ ನೀಡಬೇಕು” ಎಂದರು.

“ಕೇಂದ್ರ ಸರ್ಕಾರವು ರಾಜ್ಯಕ್ಕೆ ಅನುದಾನ ಬಿಡುಗಡೆ ಮಾಡಬೇಕು. ಪರಿಹಾರಕ್ಕಾಗಿ ಎನ್‌ಡಿಆರ್‌ಎಫ್ ನಿಮಯಗಳನ್ನು ಬದಲಿಸಿ, ಹೊಸ ಮಾನದಂಡಗಳನ್ನು ಅಳವಡಿಸಿಕೊಳ್ಳಬೇಕು. ಬರಕ್ಕಾಗಿ ಮತ್ತು ಅತಿವೃಷ್ಠಿಗಾಗಿ, ಪರಿಹಾರಕ್ಕಾಗಿ ಅನುದಾನ ಬಿಡುಗಡೆ ಮಾಡಬೇಕು” ಎಂದರು.

Advertisements

“ಬರಗಾಲ ಘೋಷಣೆ ನಂತರ ಮೇವು ಒದಗಿಸುವುದು, ಗಂಜಿ ಕೇಂದ್ರ ಮಾಡುವುದು, ಪರಿಹಾರ ನೀಡುವುದು ಸೇರಿದಂತೆ ಶಾಶ್ವತ ಪರಿಹಾರಕ್ಕೂ ಸಂಬಂಧಿಸಿದಂತೆ ಸರ್ಕಾರಕ್ಕೆ ಸಲಹೆಗಳನ್ನು ನೀಡಲಾಗಿದೆ. ಅವುಗಳ ಅವಲೋಕನ ಮಾಡಿ ಜಾರಿಗೆ ಮುಂದಾಬೇಕಿದೆ. ಸರ್ಕಾರ ಸಣ್ಣ ನೀರಾವರಿವರಿಗೆ ಹೆಚ್ಚಿನ ಒತ್ತು ನೀಡಬೇಕು. ಕೆರೆ ಕಟ್ಟೆಗಳು ನಂಬಿ ರೈತರು ಜೀವನ ಮಾಡಬೇಕು ಎಂಬುದಾಗಬೇಕು, ಇದು ಬರಕ್ಕೆ ಪರಿಹಾರ ಕಂಡು ಕೊಳ್ಳಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?: ಕಲಬುರಗಿ | ಬರಗಾಲ ಪರಿಹಾರಕ್ಕೆ ಆಗ್ರಹಿಸಿ ರೈತಸಂಘ ಜಾಥಾ

“ಉದ್ಯೋಗ ಖಾತ್ರಿ ಯೋಜನೆ 200 ದಿನಕ್ಕೆ ವಿಸ್ತರಣೆ ಮಾಡಬೇಕು. ಫಸಲ ವಿಮಾ ಯೋಜನೆಯಡಿ ಸಾಕಷ್ಟು ಅವ್ಯವಹಾರ ವಾಗಿದೆ, ವಿಮೆ ಕಟ್ಟದ ರೈತರಿಗೆ ಪರಿಹಾರ ನೀಡಿದೆ. ಆ ಬಗ್ಗೆ ಮರು ತನಿಖೆಗೆ ಮುಂದಾಗಬೇಕು” ಎಂದು ಆಗ್ರಹಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲೀ ಪಾಟೀಲ್ ಮಾತನಾಡಿ, “ರಾಜ್ಯದಲ್ಲಿ ರೈತರ ಸಮಸ್ಯೆಗಳು ಸಾಕಷ್ಟಿವೆ. ಸಮಸ್ಯೆಗಳಿಗೆ ರೈತರು ಒಗ್ಗೂಡಿ ಪರಿಹಾರ ಕಂಡುಕೊಳ್ಳಬೇಕಾಗಿದೆ, ರೈತ ಸಂಘಟನೆ ಬಲಪಡಿಸಬೇಕಾಗಿದೆ, ಈ ನಿಟ್ಟಿನಲ್ಲಿ ಪ್ರತಿಯೊಂದು ಗ್ರಾಮದಲ್ಲಿ ರೈತ ಸಂಘಟನೆ ಹುಟ್ಟಿಕೊಂಡು ರೈತರ ಸಮಸ್ಯೆ ಬಗೆಹರಿಸಿಕೊಳ್ಳಲು ರೈತರೇ ಮುಂದಾಗಬೇಕು” ಎಂದರು.

ಕಾರ್ಯಾಗಾರದಲ್ಲಿ ರಾಜ್ಯ ಕಾರ್ಯದರ್ಶಿ ಗೋಪಾಲ, ಸತ್ಯಂಪೇಟೆ ಮಲ್ಲಿಕಾರ್ಜುನ, ಮಹಿಳಾ ರಾಜ್ಯಾದ್ಯಕ್ಷೆ ನಾಗರತ್ನಮ್ಮ, ಯಶೋಧ, ರವಿ ಕಿರಣ, ದೊಡ್ಡ ಬಸನಗೌಡ, ಗೋಣೆ ಬಸಪ್ಪ, ಸೂಗುರಯ್ಯ ಆರ್‌ಎಸ್ ಮಠ, ಯಂಕಪ್ಪ ಕಾರಿಬಾರಿ ಸೇರಿದಂತೆ ವಿವಿಧ ಜಿಲ್ಲೆಗಳಿಂದ ರೈತರು ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X