ರಾಯಚೂರು | ಗೌರಿ ಹಂತಕರಿಗೆ ಸನ್ಮಾನ ಮಾಡಿರುವ ಸಂಘಟನೆಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Date:

ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಆರೋಪಿಗಳಿಗೆ ಸನ್ಮಾನ ಮಾಡಿರುವ ಘಟನೆ ಖಂಡಿಸಿ ಗೌರಿ ಸ್ಮಾರಕ ಟ್ರಸ್ಟ್ ಹಾಗೂ ಗೌರಿ ಬಳಗ ವತಿಯಿಂದ ನಗರದ ಟಿಪ್ಪುಸುಲ್ತಾನ್ ಉದ್ಯಾನದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಕರ್ನಾಟಕದ ದೀನ ದಲಿತರ ಧ್ವನಿಯಾಗಿದ್ದ ಗೌರಿ ಲಂಕೇಶ್ ಅವರನ್ನು ಕೊಲೆಗೈದ ಆರೋಪಿಗಳನ್ನು ಸಂಘಪರಿವಾರ ಸಂಘಟನೆಗಳ ಮುಖಂಡರು ಸನ್ಮಾನಿಸುವ ಮೂಲಕ ಈ ನಾಡಿಗೆ ಪರಂಪರೆಗೆ, ಈ ನೆಲ ಪೋಷಿಸಿಕೊಂಡು ಬರುತ್ತಿರುವ ಮಾನವೀಯ ಮೌಲ್ಯಗಳಿಗೆ ಮಾಡಿದ ದೊಡ್ಡ ಕಳಂಕ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಮಹಾರಾಷ್ಟ್ರ ಮೂಲದ ಗೌರಿ ಹಂತಕ ಶ್ರೀಕಾಂತ್ ಹೊಂಗರಕರ್ ಜಾಮೀನಿನ ಮೇಲೆ ಹೊರಬಂದ ಕೂಡಲೇ ಮಹಾರಾಷ್ಟ್ರದ ಚುನಾವಣೆಯಲ್ಲಿ ಸಕ್ರಿಯ ಪಾತ್ರ ನಿರ್ವಹಿಸುತ್ತಿರುವುದನ್ನು ಅಲ್ಲಿಯ ರಾಜಕೀಯ ಪಕ್ಷಗಳು ಆತನನ್ನು ಆಹ್ವಾನಿಸಿರುವುದನ್ನು ನೋಡಿದರೆ ಪ್ರಜಾಪ್ರಭುತ್ವ ವ್ಯವಸ್ಥೆ ಎಲ್ಲಿಗೆ ತಲುಪಿದೆ ಎಂದು ಬೇಸರವಾಗುತ್ತಿದೆ ಎಂದು ತಿಳಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ

ಗೃಹ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು. ಗೌರಿ ಹಂತಕರಿಗೆ ಸನ್ಮಾನ ಮಾಡಿರುವ ವ್ಯಕ್ತಿಗಳ ಹಾಗೂ ಕೋಮುವಾದಿ ಸಂಘಟನೆಗಳ ಮೇಲೆ ಕ್ರಮ ಜರುಗಿಸಬೇಕು. ಗೌರಿ ಕೊಲೆಯ ವಿಚಾರಣೆಯನ್ನು ತ್ವರಿತಗೊಳಿಸಿ ಹಂತಕರಿಗೆ ಶೀಘ್ರವೇ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಡಳಿತದ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಕುಮಾರ್ ಸಮತಳ, ಖಾಜಾ ಅಸ್ಲಾಂ, ಶ್ರೀನಿವಾಸ ಕಲವಲದೊಡ್ಡಿ, ವಕೀಲ ಎಸ್.ಮಾರೆಪ್ಪ, ಜಿ.ಅಮರೇಶ, ಕೆ.ಜಿ.ವೀರೇಶ, ಶ್ರೀನಿವಾಸ ಕೊಪ್ಪರ್, ಜಾನ್ ವೆಸ್ಲಿ , ಎಂ ಆರ್ ಬೇರಿ, ಮಾರೆಪ್ಪ ಹರವಿ, ಲಕ್ಷ್ಮಣ ಮಂಡಲಗೇರ, ಆಂಜನೇಯ ಕುರುಬದೊಡ್ಡಿ ಪಾಲ್ಗೊಂಡಿದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಬೆಳೆ ಖರೀದಿ ಕೇಂದ್ರ ಸ್ಥಾಪಿಸಿ, ವೈಜ್ಞಾನಿಕ ಬೆಲೆ ನಿಗದಿಪಡಿಸಿ: ರೈತ ಸಂಘ ಆಗ್ರಹ

ಮುಂಗಾರ ಬೆಳೆಗಳಾದ ಹತ್ತಿ, ಭತ್ತ, ತೊಗರಿಗಳಿಗೆ ಖರೀದಿ ಕೇಂದ್ರ ತೆಗೆದು ವೈಜ್ಞಾನಿಕ...

ಚಿಕ್ಕಮಗಳೂರು | ಹದಗೆಟ್ಟ ರಸ್ತೆಗಳು; ಕ್ಷೇತ್ರದ ಶಾಸಕರ ವಿರುದ್ಧ ಗ್ರಾಮಸ್ಥರ ಆಕ್ರೋಶ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಬಸರೀಕಟ್ಟೆ ಕೊಗ್ರೆ ಮುಖ್ಯರಸ್ತೆ ಪಿಡಬ್ಲ್ಯೂಡಿ ಇಲಾಖೆಯ...

ಮೈಸೂರು | ದಸರಾ ಗೊಂಬೆ ಕೂರಿಸುವ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ

ಮೈಸೂರು ನಗರದ ರಾಮಾನುಜ ರಸ್ತೆಯಲ್ಲಿರುವ ನಮೋ ಯೋಗ ಭವನದಲ್ಲಿ ಶ್ರೀ ದುರ್ಗಾ...

ಮಂಡ್ಯ | ಜಾತಿ ಜನಗಣತಿ ವರದಿ ಅಂಗೀಕರಿಸಿ, ಶೀಘ್ರ ಅನುಷ್ಠಾನಗೂಳಿಸಿ: ಗುರುಪ್ರಸಾದ್ ಕೆರಗೋಡು ಆಗ್ರಹ

ರಾಜ್ಯ ಸರ್ಕಾರವು ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ, ಹಿಂದುಳಿದ ವರ್ಗಗಳ...