ಗ್ರಾನೈಟ್ ಗಣಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಸುವ ವೇಳೆ ಸಿಡಿಮದ್ದು ಸ್ಫೋಟ ಸಂಭವಿಸಿ ಕಾರ್ಮಿಕನೊಬ್ಬ ಮೃತಪಟ್ಟಿದ್ದು ಮತ್ತೊಬ್ಬ ಕಾರ್ಮಿಕನಿಗೆ ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆ ಲಿಂಗಸುಗೂರು ತಾಲ್ಲೂಕು ಮಾಕಾಪುರದ ಗಣಿಯಲ್ಲಿ ನಡೆದಿದೆ.
ವೆಂಕಟೇಶ (38) ಮೃತಪಟ್ಟ ಕಾರ್ಮಿಕ ಎಂದು ಗುರುತಿಸಲಾಗಿದೆ.ಇತನು ಮೂಲತ ಬಾಗಲಕೋಟೆ ಜಿಲ್ಲೆ ಮೆಣಸಗಿರಿ ಗ್ರಾಮದವರು ಎನ್ನಲಾಗಿದೆ.ಮತ್ತೊಬ್ಬ ಗಂಭೀರ ಗಾಯಗೊಂಡ ಕಾರ್ಮಿಕ ಮಹಾಲಿಂಗಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಮದುವೆ ಮಂಟಪವೇ ಬಾಲವಾಡಿ; ಅಧಿಕಾರಿಗಳಿಗೆ ಬೇಡವಾದ ಚಿಣ್ಣರ ಕೇಂದ್ರ
ಗ್ರಾನೈಟ್ ಗಣಿಯು ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಗಣಿ ನಡೆಸುತ್ತಿದ್ದರು.ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಅನುಮತಿ ಪಡೆಯದೇ ರಾಜಾರೋಷವಾಗಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.
ಘಟನೆಯ ಬಳಿಕ ಎಚ್ಚೆತ್ತುಕೊಂಡು ಲಿಂಗಸುಗೂರು ಠಾಣೆಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.