ರಾಯಚೂರು | ಪಡಿತರ, ಮನರೇಗಾ ಕಾರ್ಮಿಕರ ಸಾಮಾಜಿಕ ಭದ್ರತೆಗೆ ಒತ್ತಾಯ

Date:

ಪಡಿತರ ಆಹಾರ ಧಾನ್ಯ ಮತ್ತು ಮನರೇಗಾ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವಂತೆ ಗ್ರಾಮೀಣ ಕೂಲಿಕಾರರ ಸಂಘಟನೆ ಕಾರ್ಯಕರ್ತರು ಎರಡು ದಿನಗಳ ಅಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದು, ರಾಯಚೂರು ನಗರದ ಅಂಬೇಡ್ಕರ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

- Advertisement -

ರೈತರ ಮತ್ತು ಕಾರ್ಮಿಕರ ಹಿತದೃಷ್ಟಿಯಿಂದ, ಪೌಷ್ಟಿಕಾಂಶದ ಕೊರತೆ ನೀಗಿಸುವುದಕ್ಕಾಗಿ ಅನುಕೂಲಕರ ದರದಲ್ಲಿ ಪಡಿತರದಲ್ಲಿ ಆಯಾಯ ಪ್ರದೇಶಕ್ಕೆ ಅನುಗುಣವಾಗಿ ಅಕ್ಕಿಯೊಂದಿಗೆ ರಾಗಿ ಅಥವಾ ಜೋಳ ಮತ್ತು 1 ಕೆಜಿ ತೊಗರಿಬೇಳೆ, 1 ಕೆಜಿ ಅಡುಗೆ ಎಣ್ಣೆಯನ್ನು ವಿತರಿಸಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಜಿಲ್ಲಾ ಕಾರ್ಯಕರ್ತೆ ಮಾರೆಮ್ಮ ನೀರಮಾನ್ವಿ ಮಾತನಾಡಿ, “ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಯಲ್ಲಿ 10 ಕೆಜಿ ಅಕ್ಕಿ ಕೊಡುತ್ತೇವೆಂದು 5 ಕೆಜಿ ಅಕ್ಕಿ ಕೊಟ್ಟು ಇನ್ನು 5 ಕೆಜಿಯ ಹಣ ಜಮಾ ಮಾಡುತ್ತಿದ್ದಾರೆ. ಹಣದ ಬದಲು ಎಣ್ಣೆ, ಜೋಳ, ಸಜ್ಜೆ, ಸಕ್ಕರೆಯಂತಹ ದಿನನಿತ್ಯದ ಪದಾರ್ಥಗಳನ್ನು ವಿತರಿಸಬೇಕು” ಎಂದು ಹೇಳಿದರು.

ಗುರುರಾಜ್ ರಾಯಚೂರು ಮಾತನಾಡಿ, “ಸ್ವಾತಂತ್ರ್ಯ ದಿನಾಚರಣೆ ಮಹೋತ್ಸವದ ಅಂಗವಾಗಿ ಕೂಲಿಕಾರರು ಬಯಸಿದ ಸ್ವಾತಂತ್ರ್ಯ ಸಿಕ್ಕಿಲ್ಲ. ಸಾಮಾಜಿಕ ಭದ್ರತೆ, ಆರ್ಥಿಕ ವ್ಯವಸ್ಥೆಯಲ್ಲಿ ಹಿಂದುಳಿದ್ದೇವೆ” ಎಂದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಅಲೆಮಾರಿ, ಅರೆ ಅಲೆಮಾರಿಗಳಿಗೂ ಭೂಮಿ, ವಸತಿ ಸಿಗಬೇಕು: ಡಾ. ಸಿ ಎಸ್ ದ್ವಾರಕಾನಾಥ್

“ರೈತರ ಬೆಳೆಗೂ ಸ್ಥಳೀಯವಾಗಿ ಸೂಕ್ತ ಮಾರುಕಟ್ಟೆ ದೊರೆತರೆ ಕಾರ್ಮಿಕರಿಗೆ ಪೌಷ್ಟಿಕ ಆಹಾರ ಸಿಗುತ್ತದೆ. ಉದ್ಯೋಗ ಖಾತ್ರಿಯಲ್ಲಿ 90 ದಿನಗಳಿಗೂ ಹೆಚ್ಚಿನ ಮಾನವ ದಿನಗಳನ್ನು ಮುಗಿಸಿದ ಕಾರ್ಮಿಕರಿಗೆ ‌ಸಾಮಾಜಿಕ ಭದ್ರತೆಗಾಗಿ ಬಿಒಸಿಡಬ್ಲ್ಯೂ ಅಡಿಯಲ್ಲಿ ಕಾರ್ಮಿಕ ಚೀಟಿಗಳನ್ನು ನೀಡಬೇಕು” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹುಚ್ಚಪ್ಪ, ಕೊಂಡಯ್ಯ, ಬಸವರಾಜ್, ರಾಘವೇಂದ್ರ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...