ರಾಯಚೂರು | ಗ್ಯಾರಂಟಿ ಯೋಜನೆಗಳು ಬಿಟ್ಟಿ ಅಲ್ಲ, ನಮ್ಮ ಹಕ್ಕು; ಎಚ್‌.ಎಂ.ರೇವಣ್ಣ

Date:

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಬಿಟ್ಟಿ ಅಲ್ಲ ನಮ್ಮ ಹಕ್ಕು. ಐದು ಯೋಜನೆಗಳು ಜನಪರ ಯೋಜನೆಗಳಾಗಿದ್ದು ನುಡಿದಂತೆ ನಡೆದಿದ್ದೇವೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ. ರೇವಣ್ಣ ಹೇಳಿದರು.

- Advertisement -

ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಮೈದಾನದಲ್ಲಿ ಹಮ್ಮಿಕೊಂಡಿದ್ದ ಪಂಚ ಗ್ಯಾರಂಟಿ ಮೇಳ ಯೋಜನೆಗಳ ಸಮಾವೇಶವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಮಾರ್ಗದರ್ಶನದಲ್ಲಿ ಈ ಯೋಜನೆಗಳನ್ನು ಮೊದಲ ಸಂಪುಟದಲ್ಲಿಯೇ ಜಾರಿಗೆ ತರಲಾಗಿದ್ದು, ಐದು ಗ್ಯಾರಂಟಿ ಯೋಜನೆಗಳಿಗೆ ಒಟ್ಟಾರೆ ೧ ಲಕ್ಷ ೧೨ ಸಾವಿರ ಕೋಟಿ ವೆಚ್ಚವಾಗಿದೆ. ಶಕ್ತಿ ಯೋಜನೆ ೧೧-೦೬-೨೦೨೩ ರಂದು ಪ್ರಾರಂಭವಾಗಿದ್ದು, ಇದುವರೆಗೆ ಮಹಿಳೆಯರು ಬಸ್‌ಗಳಲ್ಲಿ ೬೬೫ ಕೋಟಿ ಜನರು ಪ್ರಯಾಣ ಮಾಡಿದ್ದಾರೆ. ಇದು ಪ್ರಪಂಚದಲ್ಲೇ ದಾಖಲೆಯ ಸಾಧನೆಯಾಗಿದೆ ಎಂದು ಹೇಳಿದರು.

ಈ ಯೋಜನೆಯಿಂದ ಮಹಿಳೆಯರ ಜೀವನದಲ್ಲಿ ಸಂತೋಷ ಮತ್ತು ಸ್ವಾತಂತ್ರ‍್ಯ ಹೆಚ್ಚಾಗಿದೆ. ಮನೆಮಧ್ಯೆ ಸೀಮಿತವಾಗಿದ್ದ ಮಹಿಳೆಯರು ಇದೀಗ ದೇವಸ್ಥಾನಗಳು, ಬಂಧು-ಬಳಗದ ಮನೆಗಳಿಗೆ ಮುಕ್ತವಾಗಿ ಸಂಚರಿಸುತ್ತಿರುವುದು ಕಾಣಸಿಗುತ್ತಿದೆ ಎಂದು ವಿವರಿಸಿದರು. ಶಕ್ತಿ ಯೋಜನೆಗೆ ರಾಜ್ಯದಲ್ಲಿ ಇದುವರೆಗೆ ೧೭,೨೫೮ ಕೋಟಿ ವೆಚ್ಚವಾಗಿದ್ದು, ರಾಯಚೂರು ಜಿಲ್ಲೆಯಲ್ಲಿ ಮಾತ್ರವೇ ೧೧ ಕೋಟಿ ೩೮ ಲಕ್ಷ ಜನರು ಉಚಿತವಾಗಿ ಪ್ರಯಾಣಿಸಿದ್ದಾರೆ. ಇದಕ್ಕೆ ೪೬೫ ಕೋಟಿ ವೆಚ್ಚವಾಗಿದೆ ಎಂದು ಮಾಹಿತಿ ನೀಡಿದರು.

ಇದೇ ವೇಳೆ ಫಲಾನುಭವಿ ವೃದ್ಧೆ ಬಾಳಮ್ಮ ಅವರು ಗ್ಯಾರಂಟಿ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡ ಅನುಭವವನ್ನು ಹಂಚಿಕೊAಡರು. ನಾಗರತ್ನ ಅವರು ಅನ್ನಭಾಗ್ಯ ಯೋಜನೆಯಿಂದ ತಮ್ಮ ಕುಟುಂಬಕ್ಕೆ ಆಗಿರುವ ಲಾಭದ ಕುರಿತು ಮಾತನಾಡಿದರು. ಈ ಎಲ್ಲಾ ಗ್ಯಾರಂಟಿ ಯೋಜನೆಗಳಲ್ಲಿ ಯಾವುದೇ ಮಧ್ಯವರ್ತಿಗಳಿಲ್ಲ, ಏಜೆಂಟ್ ವ್ಯವಸ್ಥೆಯಿಲ್ಲ. ನೇರವಾಗಿ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗುತ್ತಿದೆ. ಇದು ಇಡೀ ಭಾರತದಲ್ಲೇ ಮೊದಲ ಬಾರಿಗೆ ಜಾರಿಯಾದ ಪಾರದರ್ಶಕ ವ್ಯವಸ್ಥೆಯಾಗಿದೆ. ಮೊದಲು ಈ ಯೋಜನೆಗಳು ಸಾಧ್ಯವಿಲ್ಲ ಎಂದು ಟೀಕಿಸಿದವರೇ ಇಂದು ಬೇರೆ ರಾಜ್ಯಗಳಲ್ಲಿ ಅನುಸರಿಸುತ್ತಿದ್ದಾರೆ. ಆದರೆ ಚುನಾವಣೆ ಬಳಿಕ ಅನೇಕ ರಾಜ್ಯಗಳಲ್ಲಿ ಯೋಜನೆಗಳನ್ನು ನಿಲ್ಲಿಸಲಾಗಿದೆ. ಕರ್ನಾಟಕದಲ್ಲಿ ಮಾತ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ನೇತೃತ್ವದಲ್ಲಿ ನುಡಿದಂತೆ ನಡೆದು, ಮುಂದೆಯೂ ಈ ಯೋಜನೆಗಳನ್ನು ಮುಂದುವರಿಸಲಾಗುವುದು ಎಂಬ ಭರವಸೆಯನ್ನು ಸರ್ಕಾರ ನೀಡಿದೆ ಎಂದು ಎಚ್.ಎಂ. ರೇವಣ್ಣ ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಜೆಜೆಎಂ ಕಾಮಗಾರಿಗೆ ರಸ್ತೆಗಳನ್ನು ಅಗೆದು ಮುಚ್ಚದೆ ನಿರ್ಲಕ್ಷ್ಯ; ಸ್ಥಳೀಯರಲ್ಲಿ ಆತಂಕ

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಪ್ರಕಾಶ ಪಾಟೀಲ್, ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು, ಸಂಸದ ಜಿ. ಕುಮಾರ ನಾಯಕ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷೆ ಪುಷ್ಪ ಅಮರನಾಥ, ಶಾಸಕರಾದ ಬಸನಗೌಡ ದದ್ದಲ್, ಬಸನಗೌಡ ತುರ್ವಿಹಾಳ, ಎಂಎಲ್‌ಸಿಗಳಾದ ಎ. ವಸಂತಕುಮಾರ, ಬಸನಗೌಡ ಬಾದರ್ಲಿ, ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ, ಆರ್‌ಡಿಎ ಅಧ್ಯಕ್ಷ ರಾಜಶೇಖರ ರಾಮಸ್ವಾಮಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಪಾಮಯ್ಯ ಮುರಾರಿ, ಜಾಗೃತ ಕರ್ನಾಟಕದ ಸಂಚಾಲಕ ಪ್ರೊ. ಬಿ.ಸಿ. ಬಸವರಾಜ, ಪ್ರಮುಖರಾದ ನಾಗೇಂದ್ರಪ್ಪ ಮಟಮಾರಿ, ಬಷೀರ್ ಅಹ್ಮದ್ ಸೇರಿದಂತೆ ಅನೇಕರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...

ರಾಯಚೂರು | ಪೊತ್ನಾಳ ಗ್ರಂಥಾಲಯದಲ್ಲಿ ಮೂಲಸೌಕರ್ಯ ಕೊರತೆ: ಓದಲು ಬರುವ ವಿದ್ಯಾರ್ಥಿಗಳಿಗೆ ಪರದಾಟ

ಮಾನ್ವಿ ತಾಲ್ಲೂಕಿನ ಪೊತ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಯ ಮೈದಾನದಲ್ಲಿರುವ...

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ...

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...