ರಾಯಚೂರು | ಗ್ಯಾರಂಟಿಗಳಿಗೆ ಪರಿಶಿಷ್ಟರ ಅನುದಾನ ಬಳಕೆ ಬೇಡ

Date:

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅನುದಾನವನ್ನು ದುರ್ಬಳಕೆ ಮಾಡುತ್ತಿರುವ ಸರ್ಕಾರದ ನಡೆ ಖಂಡನೀಯ. ಯಾವುದೇ ಕಾರಣಕ್ಕೂ ಎಸ್‌ಸಿ.ಎಸ್‌ಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಬಾರದು ಎಂದು ಮೂಲ ನಿವಾಸಿಗಳ ಅಂಬೇಡ್ಕರ್ ಸಂಘ ಆಗ್ರಹಿಸಿದೆ.

- Advertisement -

ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ ಕಾರ್ಯಕರ್ತರು ಜಿಲ್ಲಾಡಳಿತಕ್ಕೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ರಾಜ್ಯ ಕಾಂಗ್ರೆಸ್ ಸರ್ಕಾರ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಜನತೆಗೆ ನೀಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಟಾನಗೊಳಿಸಲು ಎಸ್‌ಸಿ/ಎಸ್‌ಟಿ ಸಮುದಾಯದ ಅಭಿವ್ರದ್ದಿಗಾಗಿ ಮೀಸಲಿರುವ ಗಿರಿಜನ ಉಪಯೋಜನೆಯ ಎಸ್‌ಇಎಸ್‌ಪಿ/ಟಿಎಸ್‌ಪಿ ಅನುದಾನದಲ್ಲಿ 11,000 ಕೋಟಿ ಮೊತ್ತವನ್ನು ಬಳಸಿಕೊಳ್ಳಲು ಮುಂದಾಗಿರುವುದು ದುರಂತ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಕಳೆದ ತಿಂಗಳಲ್ಲಿ ಸರ್ಕಾರವೇ ಎಲ್ಲ ಸಚಿವರ ಸಭೆ ಕರೆದು ಎಸ್‌ಸಿ/ಎಸ್‌ಟಿ ಸಮುದಾಯದ ಅಭಿವ್ರದ್ದಿಗಾಗಿ ಮೀಸಲಿರುವ ಗಿರಿಜನ ಉಪಯೋಜನೆಯ ಎಸ್‌ಇಎಸ್‌ಪಿ/ಟಿಎಸ್‌ಪಿ ಅನುದಾನ ಕೇವಲ ದಲಿತ ಜನಾಂಗದ ಅಭಿವ್ರದ್ದಿಗೆ ಮಾತ್ರ ಮೀಸಲಾಗಬೇಕು. ಬೇರೆ ಯೋಜನೆಗಳಿಗೆ ಬಳಕೆಯಾಗಬಾರದೆಂದು 7ಡಿ ಕಾಯ್ದೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಆದರೆ, ಆದೇಶ ಹೊರಡಿಸಿದ ತಿಂಗಳಲ್ಲಿಯೇ ತನ್ನದೇ ಆದೇಶವನ್ನು ಗಾಳಿಗೆ ತೂರಿ ದಲಿತರ ಹಣವನ್ನು ದುರುಪಯೋಗಕ್ಕೆ ಸರ್ಕಾರ ಮುಂದಾಗಿರುವುದು ಸರಿಯಲ್ಲ” ಎಂದು ಕಿಡಿಕಾರಿದ್ದಾರೆ.

“ಕಳೆದ 2018ರಲ್ಲಿಯೂ ಕೂಡಾ ಕಾಂಗ್ರೆಸ್ ರೈತರ ಸಾಲ ಮನ್ನಾ ಮಾಡಲು ಎಸ್‌ಇಎಸ್‌ಪಿ/ಟಿಎಸ್‌ಪಿ ಅನುದಾನದಲ್ಲಿ ಒಟ್ಟು 929.41 ಕೋಟಿ ರೂ. ಬಳಕೆ ಮಾಡಿಕೊಂಡಿದೆ. ಅದಲ್ಲದೇ, ಅದೇ 2018ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ರಾಜ್ಯಕೀಯ ಪರಸ್ಥಿತಿಗಳ ಬಗ್ಗೆ ಮಾಹಿತಿ ಕಲೆ ಹಾಕಲು ಪೂರಕ ಅಂದಾಜಿನಲ್ಲಿ 10 ಕೋಟಿ ಅನುದಾನವನ್ನು ಪೋಲೀಸ್ ಇಲಾಖೆಗೆ ವರ್ಗಾಯಿಸಿ ದಲಿತರ ಮೀಸಲು ಹಣವನ್ನ ದುರ್ಬಳಕೆ ಮಾಡಿಕೊಂಡಿದೆ. ಚುನಾವಣಾ ಕರ್ತವ್ಯಕ್ಕೆ ಪೋಲೀಸರನ್ನು ನಿಯೋಜಿಸುವದಕ್ಕಾಗಿ 10 ಕೋಟಿ ದಲಿತರ ಅನುದಾನವನ್ನು ದುರ್ಬಳಕೆ ಮಾಡಿಕೊಂಡು ದಲಿತರಿಗೆ ವಂಚಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕೂಡಲೇ ರಾಜ್ಯ ಸರ್ಕಾರ ದಲಿತರ ಅನುದಾನವನ್ನು ಬೇರೆ ಯೋಜನೆಗಳಿಗೆ ಬಳಸುವದನ್ನು ನಿಲ್ಲಿಸಬೇಕು. ದಲಿತರ ಅಭಿವ್ರದ್ದಿಗೆ ಆಧ್ಯತೆ ನೀಡಬೇಕು. ಇಲ್ಲದೇ ಹೋದಲ್ಲಿ ಸರ್ಕಾರದ ವಿರುದ್ದ ರಾಜ್ಯದಾದ್ಯಂತ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಭರತಕುಮಾರ, ಮುಖಂಡ ಬಸವರಾಜ ತಳವಾರ, ಹನುಮೇಶ, ಬಸವರಾಜ, ಶಿವಶಂಕರ, ಅಂಜಿನಯ್ಯ, ಮಲ್ಲೇಶ ಇದ್ದರು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...