ರಾಯಚೂರು | ಒಳಮೀಸಲಾತಿ ಜಾರಿಗೆ ಮತ್ತೊಂದು ಸಮಿತಿ ರಚನೆ ತರಾತುರಿಯ ತೀರ್ಮಾನ : ಎಸ್ ಮಾರೆಪ್ಪ

Date:

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವರ್ಗೀಕರಣದ ಕುರಿತಾಗಿ ರಾಜ್ಯ ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಂಡು ಮತ್ತೊಂದು ಸಮಿತಿ ರಚಿಸಲು ನಿರ್ಧರಿಸಿರುವುದು ತರಾತುರಿಯ ನಿರ್ಧಾರವಾಗಿದೆ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಜ್ಯ ಗೌರವಾಧ್ಯಕ್ಷ ಎಸ್.ಮಾರೆಪ್ಪ ಹೇಳಿದರು.

- Advertisement -

ರಾಯಚೂರು ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಬಳಿ ಪರಿಶಿಷ್ಟ ಜಾತಿಗಳ ದತ್ತಾಂಶವಿದ್ದರೂ ಉದ್ದೇಶಪೂರ್ವಕವಾಗಿ ವಿಳಂಬ ಮಾಡುವ ಉದ್ದೇಶದಿಂದ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಅಧ್ಯಕ್ಷತೆಯಲ್ಲಿ ಮತ್ತೊಂದು ಸಮಿತಿ ರಚಿಸಲು ನಿರ್ಧರಿಸಲಾಗಿದೆ. ಮೂರು ತಿಂಗಳೊಳಗೆ ಸಮುದಾಯ ಸಮೀಕ್ಷೆ ನಡೆಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಹಿಂದಿನ ಬಿಜೆಪಿ ಸರ್ಕಾರ ನ್ಯಾಯಮೂರ್ತಿ. ಎ.ಜೆ.ಸದಾಶಿವ ಆಯೋಗದ ವರದಿ ಅಂಕಿ-ಅಂಶಗಳ ಆಧಾರದ ಮೇಲೆ ಒಳ ಮೀಸಲಾತಿ ವರ್ಗಿಕರಣಕ್ಕೆ ಕೇಂದ್ರಕ್ಕೆ ಶಿಫಾರಸ್ಸು ಮಾಡಿತ್ತು. ಆಯೋಗದ ವರದಿಯಲ್ಲಿಯೇ ಆದಿ ಕರ್ನಾಟಕ, ಆದಿ ದ್ರಾವಿಡದ ಕುರಿತು ಪ್ರತ್ಯೇಕ ಕಲಂಗಳನ್ನು ಸಮೀಕ್ಷೆ ಫಾರಂನಲ್ಲಿ ಅಳವಡಿಸಲಾಗಿತ್ತು. ವೈಜ್ಞಾನಿಕವಾಗಿಯೇ ಸಮೀಕ್ಷೆ ನಡೆಸಲಾಗಿದೆ. ಆದರೆ ಕಾಂಗ್ರೆಸ್ ಸರ್ಕಾರದ ರಾಜ್ಯದಲ್ಲಿ ನಡೆಯುತ್ತಿರುವ ಮೂರು ಉಪ ಚುನಾವಣೆಯಲ್ಲಿ ಮಾದಿಗ ಸಮುದಾಯದ ಮತ ಪಡೆಯುವ ಉದ್ದೇಶದಿಂದ ತರಾತುರಿಯಲ್ಲಿ ನಿರ್ಧರಿಸಿರುವುದು ಸಮಾಧಾನ ತಂದಿಲ್ಲ ಎಂದು ಹೇಳಿದರು.

IMG 20241029 WA0003

ಒಳಮೀಸಲಾತಿ ಜಾರಿಗೆ ತರುವ ನಿರ್ದಾರ ಸ್ವಾಗತಾರ್ಹವಾಗಿದ್ದರೂ ಜನರನ್ನು ದಾರಿತಪ್ಪಿಸುವ ಕೆಲಸ ಸಚಿವ ಸಂಪುಟ ಕೈಗೊಂಡಿದೆ. ಹೊಸದಾಗಿ ಸಮಿತಿ ರಚಿಸುವ ಅವಶ್ಯಕತೆ ಇರಲಿಲ್ಲ. ಜಾರಿಗೊಳಿಸಲು ಮತ್ತಷ್ಟು ವಿಳಂಬ ಮಾಡುವ ಉದ್ದೇಶ ಸರ್ಕಾರ ಹೊಂದಿರುವ ಸಂಶಯಗಳಿವೆ. ಈಗಾಗಲೇ ಸಂಡೂರು, ಹಾವೇರಿ ಉಪ ಚುನಾವಣೆಯಲ್ಲಿ ಮಾದಿಗ ಸಮೂದಾಯ ಜನರು ಕಾಂಗ್ರೆಸ್ ಬೆಂಬಲಿಸಲು ಮುಂದಾಗಿಲ್ಲ. ಇನ್ನೆರಡು ದಿನಗಳಲ್ಲಿ ಹೋರಾಟ ಸಮಿತಿಯ ಸಭೆ ನಡೆಸಿ, ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಕೇರಳ ಮುಖ್ಯಮಂತ್ರಿ ತೆರಳುತ್ತಿದ್ದ ಕಾರು – ಬೆಂಗಾವಲು ವಾಹನಗಳ ಮಧ್ಯೆ ಸರಣಿ ಅಪಘಾತ

ಈಗಾಗಲೇ ಕಾಂಗ್ರೆಸ್ ಸೋಲಿಸಲು ಪ್ರಚಾರ ಕಾರ್ಯವನ್ನು ಹೋರಾಟ ಸಮಿತಿ ಕೈಗೊಂಡಿದೆ. ಸಚಿವ ಸಂಪುಟ ತೀರ್ಮಾನದಂತೆ ಮೇಲ್ನೋಟಕ್ಕೆ ಒಳಮೀಸಲಾತಿ ಜಾರಿಗೊಳಿಸುವುದಾಗಿ ಹೇಳಿದ್ದರೂ ವಿಳಂಬವಾಗುವ ಎಲ್ಲ ಲಕ್ಷಣಗಳಿವೆ. ಸಮುದಾಯದ ಜನರು ಯಾವುದೇ ಅವಸರದ ನಿರ್ಧಾರ ಕೈಗೊಳ್ಳದೇ ಹೋರಾಟ ತಾರ್ಕಿಕ ಅಂತ್ಯ ಕಾಣಿಸುವ ನಿರ್ಧಾರಕ್ಕೆ ಬೆಂಬಲಿಸಬೇಕೆಂದರು.

ಸುದ್ದಿಗೋಷ್ಠಿಯಲ್ಲಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಶಿವರಾಯ ಅಕ್ಕರಕಿ, ಉಪಾಧ್ಯಕ್ಷ ಹೇಮರಾಜ ಅಸ್ಕಿಹಾಳ, ನರಸಿಂಹ ಮರ್ಚಟ್ಹಾಳ, ಆಂಜಿನಯ್ಯ ಉಟ್ಕೂರು, ತಾಯಪ್ಪ ಗಧಾರ, ಆಂಜಿನೇಯ್ಯ ಕುರಬದೊಡ್ಡಿ, ನರಸಿಂಹಲು, ಶ್ರೀನಿವಾಸ ಕೊಪ್ಪರ, ಅಬ್ರಹಾಂ ಕಮಲಾಪುರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...