ರಾಯಚೂರು | ದರ್ಗಾ ಕಮಾನ್ ನಿರ್ಮಾಣ ವಿವಾದ; ಎರಡು ಗುಂಪುಗಳ ನಡುವೆ ಘರ್ಷಣೆ

Date:

Advertisements

ರಾಯಚೂರು ನಗರದ ಕಾಟೆದರವಾಜ್‌ ಬಳಿಯ ಹಜರತ್ ಅಲ್ಲಾವುದ್ದೀನ್ ಬಾಬಾ ದರ್ಗಾದ ಬಳಿ ನಿರ್ಮಾಣ ಮಾಡುತ್ತಿರುವ ದ್ವಾರ ನಿರ್ಮಾಣ ಮಾಡುವದನ್ನು ವಿರೋಧಿಸಿ ನಗರ ಶಾಸಕ ಡಾ.ಶಿವರಾಜ ಪಾಟೀಲ್ ಹಾಗೂ ಮಾಜಿ ಶಾಸಕ ಎ.ಪಾಪಾರೆಡ್ಡಿ ನೇತೃತ್ವದಲ್ಲಿ ಸ್ಥಳಕ್ಕೆ ತೆರಳಿದಾಗ ಎರಡು ಗುಂಪುಗಳ ಮಧ್ಯೆ ವಾಗ್ವಾದ ನೂಕು ನುಗ್ಗಲು ನಡೆದಿದೆ.

ಕನಕದಾಸ ಜಯಂತಿಯಲ್ಲಿ ಭಾಗವಹಿಸಿದ್ದ ಬಿಜೆಪಿ ಕಾರ್ಯಕರ್ತರು ತೆರಳುತ್ತಿದ್ದಾಗ ಸೂಪರ್ ಮಾರ್ಕೆಟ್‌ಗೆ ಆಗಮಿಸಿದರು. ಪೂರ್ವಭಾವಿಯಾಗಿ ಅನೇಕ ಯುವಕರು ದರ್ಗಾ ಬಳಿ ಜಮಾವಣೆಗೊಂಡಿದ್ದರು. ಎರಡು ಗುಂಪುಗಳ ಮಧ್ಯೆ ಪರ ವಿರೋಧ ಘೋಷಣೆಗಳು ಕೇಳಿಬಂದವು. ಪೊಲೀಸರು ಎರಡು ಗುಂಪುಗಳನ್ನು ತಹಬಂದಿಗೆ ತರಲು ಹರಸಾಹಸ ಪಡಬೇಕಾಯಿತು.

ನಗರಸಭೆ ಅನುದಾನದಲ್ಲಿ ಕಮಾನ್ ನಿರ್ಮಾಣ ಮಾಡಲು ಕಾಮಗಾರಿ ಪ್ರಾರಂಭವಾಗಿದ್ದು, ಸಾರ್ವಜನಿಕರ ಸಂಚಾರ ಇರುವ ರಸ್ತೆಯನ್ನು ಬಂದ್ ಮಾಡಿ ಕಮಾನ್ ನಿರ್ಮಾಣ ಮಾಡಲು ಬಿಜೆಪಿ ಮುಖಂಡರು ವಿರೋಧಿಸಿದರು. ನಗರದ ಜನಸಂದಣಿ ಸ್ಥಳದಲ್ಲಿ ಕಮಾನ್ ನಿರ್ಮಿಸಿದರೆ ಸಂಚಾರಕ್ಕೆ ತೊಂದರೆಯಾಗುವುದಲ್ಲದೇ ರಸ್ತೆಯೇ ಇಲ್ಲದಂತಾಗುತ್ತದೆ ಎಂದು ಆರೋಪಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ರಾಯಚೂರು | 43.27 ಮಿಲಿಯನ್ ಯುನಿಟ್ ವಿದ್ಯುತ್ ಉತ್ಪಾದನೆ; ಆರ್‌ಟಿಪಿಎಸ್ ದಾಖಲೆ‌

ನಗರಸಭೆ ಸಭೆಯ ನಿರ್ಣಯದಂತೆ 15 ಲಕ್ಷ ರೂ ವೆಚ್ಚದ ಅನುದಾನದಲ್ಲಿ ಕಮಾನ್ ನಿರ್ಮಾಣ ಮಾಡಲು ನಗರಸಭೆ ಸಾಮಾನ್ಯಸಭೆ ಅನುಮೋದಿಸಿದೆ. ಕಮಾನ್ ನಿರ್ಮಾಣಕ್ಕೆ ನಗರಸಭೆಯೇ ಟೆಂಡರ್ ಕರೆದು ಕಾಮಗಾರಿ ಪ್ರಾರಂಭಿಸಿದ್ದು, ಈಗ ವಿರೋಧ ವ್ಯಕ್ತಪಡಿಸುತ್ತಿರುವ ವಿರುದ್ದ ಮುಸ್ಲಿಂ ಸಮುದಾಯದ ಯುವಕರೂ ಕೂಡ ಆಕ್ಷೇಪ ವ್ಯಕ್ತಪಡಿಸಿದರು.

ಪರ ವಿರೋಧದ ಮಧ್ಯೆ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಪೊಲೀಸರು ಎರಡು ಗುಂಪುಗಳನ್ನು ಸಮಜಾಯಿಷಿ ಕಳುಹಿಸಿದರು. ಸದ್ಯಕ್ಕೆ ಕಾಮಗಾರಿ ಸ್ಥಗಿತಗೊಂಡಿದೆ.

ವರದಿ : ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X