ಶಾಲೆಯಲ್ಲಿ ಲೋ ಬಿಪಿಯಿಂದ ಶಾಲಾ ವಿದ್ಯಾರ್ಥಿ ಕುಸಿದು ಬಿದ್ದು ವಿದ್ಯಾರ್ಥಿಯೋರ್ವ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರು ಹೋಬಳಿಯ ವಿದ್ಯಾ ಜ್ಯೋತಿ ಶಾಲೆಯಲ್ಲಿ ನಡೆದಿದೆ.
ಶಿವ ಪ್ರಸಾದ್ ( 9) ಐದನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಶಾಲೆಯಲ್ಲಿ ವಿದ್ಯಾರ್ಥಿ ಕುಸಿದು ಬಿದ್ದು ಮೂರ್ಛೆ ಹೋದ ತಕ್ಷಣ ಶಾಲಾ ಶಿಕ್ಷಕರು ಸ್ಥಳೀಯ ಆಸ್ಪತ್ರೆಗೆ ಸೇರಿಸಲು ಹೋದಾಗ ಮಾರ್ಗ ಮಧ್ಯದಲ್ಲಿ ವಿದ್ಯಾರ್ಥಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ವಿದ್ಯಾರ್ಥಿ ಸಾವಿಗೆ ಶಾಲಾ ಶಿಕ್ಷಕರು ,ಮಕ್ಕಳು ಹಾಗೂ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಗಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ನೂತನವಾಗಿ ರಾಯಚೂರು ಯೂನಿವರ್ಸಿಟಿ ಸಿಂಡಿಕೇಟ್ ಸದಸ್ಯರಾದ ಶಿವಪ್ಪ ಕವಿತಾಳ ಅವರ ಮಗ ಎಂದು ತಿಳಿದುಬಂದಿದೆ.
ಇದನ್ನು ಓದಿದ್ದೀರಾ? ಬೆಂಗಳೂರಿನಲ್ಲಿ ಯುವತಿಯ ಬರ್ಬರ ಹತ್ಯೆ: ದೇಹ ತುಂಡರಿಸಿ ಫ್ರಿಡ್ಜ್‌ನಲ್ಲಿಟ್ಟ ಕೊಲೆಗಾರ
ಕಳೆದ ಕೆಲವು ದಿನಗಳ ಹಿಂದೆ ಜಿಲ್ಲೆಯ ಸಿರವಾರ ತಾಲೂಕಿನ ಖಾಸಗಿ ಶಾಲೆಯೊಂದರಲ್ಲಿ ಹೃದಯಾಘಾತದಿಂದ ವಿದ್ಯಾರ್ಥಿ ಸಾವನ್ನಪ್ಪಿದ್ದ. ಮತ್ತೆ ಇಂಥದ್ದೇ ಘಟನೆ ನಡೆದಿರುವುದು ಪೋಷಕರು ಹಾಗೂ ಶಿಕ್ಷಕರಲ್ಲಿ ಆತಂಕಕ್ಕೆ ಕಾರಣವಾಗಿದೆ.
