ಶಾಲೆಯ ಪ್ರಾರ್ಥನೆಯ ಸಮಯದಲ್ಲ ಹೃದಯಾಘಾತದಿಂದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ನಡೆದಿದೆ.
ತರುಣ ಕುಮಾರ್(14) ಮೃತಪಟ್ಟಿರುವ ವಿದ್ಯಾರ್ಥಿ ಎಂದು ಗುರುತಿಸಿದ್ದು, ಸಿರವಾರ ಪಟ್ಟಣದ ವಿದ್ಯಾವಾಹಿನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಂಟನೇ ತರಗತಿಯಲ್ಲಿ ಓದುತ್ತಿದ್ದನು.
ಈ ಸುದ್ದಿ ಓದಿದ್ದೀರಾ? ಮಂಡ್ಯ | ಡೆತ್‌ನೋಟ್ ಬರೆದು ಮನೆಬಿಟ್ಟಿದ್ದ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಪತ್ತೆ
ವಿದ್ಯಾರ್ಥಿ ಶಾಲೆಗೆ ಹೋದಾಗ ಶಾಲೆಯಲ್ಲಿ ತರಗತಿ ನಡೆಯುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದು ಮೂರ್ಛೆ ಹೋಗಿದ್ದ. ಕೂಡಲೇ ಶಾಲಾ ಮಂಡಳಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಕೇಂದ್ರದ ಕಡೆಗೆ ತೆರಳುವಾಗ ಮಾರ್ಗ ಮಧ್ಯದಲ್ಲಿ ಬಾಲಕ ಸಾವನ್ನಪ್ಪಿದ್ದಾನೆ. ಶಾಲೆಗೆ ಹೋಗಿದ್ದ ಮಗನ ಸಾವನ್ನು ಕೇಳಿದ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.
