ಹೃದಯಾಘಾತದಿಂದ ಪೊಲೀಸ್ ಪೇದೆಯೊಬ್ಬರು ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನಲ್ಲಿ ನಡೆದಿದೆ.
ಮೂಲತಃ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಆಗೋಲಿ ಗ್ರಾಮದ ನಿವಾಸಿಯಾಗಿದ್ದ ಬಸನಗೌಡ (34) ಎಂಬ ಪೊಲೀಸ್ ಕಾನ್ಸ್ಟೇಬಲ್ ಮಸ್ಕಿ ಪೊಲೀಸ್ ಠಾಣೆಯಲ್ಲಿ ರೈಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.
ಈ ಸುದ್ದಿ ಓದಿದ್ದೀರಾ? ಕವಾಡಿಗರಹಟ್ಟಿಗೆ ಲೋಕಾಯುಕ್ತ ನ್ಯಾ. ಬಿ ಎಸ್ ಪಾಟೀಲ್ ದಿಢೀರ್ ಭೇಟಿ, ಅಧಿಕಾರಿಗಳಿಗೆ ತರಾಟೆ
ಪೊಲೀಸ್ ಕಾನ್ಸ್ಟೇಬಲ್ ಅವರು ಕೆಲಸ ಮುಗಿಸಿಕೊಂಡು ಮನೆಗೆ ಹೋದ ಬಸನಗೌಡ ರಾತ್ರಿ ಮಲಗಿದ್ದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಬಸನಗೌಡ ಅವರ ಸಾವಿಗೆ ರಾಯಚೂರು ಜಿಲ್ಲಾ ಪೊಲೀಸ್ ಇಲಾಖೆ ಸಂತಾಪ ಸೂಚಿಸಿದೆ.