ರಾಯಚೂರು | ಹೈಕೋರ್ಟ್‌ ತಡೆಯಾಜ್ಞೆ: ಲಿಂಗಸುಗೂರು ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ಮುಂದೂಡಿಕೆ

Date:

Advertisements

ಲಿಂಗಸುಗೂರು ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಸೆಪ್ಟೆಂಬರ್ 18 ರಂದು ನಡೆಯಬೇಕಿದ್ದ ಚುನಾವಣೆ ಹೈಕೋರ್ಟ್‌ನ ತಡೆಯಾಜ್ಞೆಯಿಂದಾಗಿ ಚುನಾವಣೆಯನ್ನು ಮುಂದೂಡಲಾಗಿದೆ.

ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಬಿಸಿಎ ಮೀಸಲಾತಿ ಗೊತ್ತುಪಡಿಸಲಾಗಿತ್ತು. ಅದರಂತೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಸೆಪ್ಟೆಂಬರ್ 18ರಂದು ಚುನಾವಣೆ ನಿಗದಿ ಮಾಡಿ ತಹಶೀಲ್ದಾರ ಶಂಶಾಲಂ ಪುರಸಭೆ ಸದಸ್ಯರಿಗೆ ನೋಟಿಸ್ ನೀಡಿದ್ದರು.

2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರಾದ ಫಾತಿಮಾ ಮೌಲಾ ಸಾಬ್, ಪ್ರಮೋದ್ ಕುಮಾರ್, ಮೌಲಾ ಸಾಬಾ ಛೋಟುಸಾಬ್, ಶರಣಪ್ಪ ಬಸಪ್ಪ ಈ ನಾಲ್ಕು ಜನರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡದೇ ಕೆಆರ್‌ಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆಂದು ಆರೋಪಿಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಪಕ್ಷಾಂತರ ಕಾಯ್ದೆಯ ಅಡಿಯಲ್ಲಿ ಈ ನಾಲ್ಕು ಜನ ಸದಸ್ಯರ ಸದಸ್ಯತ್ವ ಅನರ್ಹಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದರು.

Advertisements

ದೂರುಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಈ ನಾಲ್ಕು ಜನ ಸದಸ್ಯರ ಸದಸ್ಯತ್ವ ಅನರ್ಹಗೊಳಿಸಿ ಆದೇಶ ಹೊರಡಿಸಿದ್ದರು. ಜಿಲ್ಲಾಧಿಕಾರಿಗಳು ಏಕಪಕ್ಷೀಯವಾಗಿ ನಿರ್ಣಯ ಕೈಗೊಂಡು ಸದಸ್ಯತ್ವ ಅನರ್ಹಗೊಳಿಸಿದ್ದಾರೆಂದು ಜಿಲ್ಲಾಧಿಕಾರಿಗಳ ಆದೇಶ ವಿರುದ್ಧ ಈ ನಾಲ್ವರು ಸದಸ್ಯರು ಕಲುಬುರಗಿ ಹೈಕೋರ್ಟ್‌ನ ಮೊರೆ ಹೋಗಿದ್ದರು.

ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಲಯವು ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಗೆ ತಡೆಯಾಜ್ಞೆ ನೀಡಿ, ಸೆಪ್ಟೆಂಬರ್ 19ಕ್ಕೆ ವಿಚಾರಣೆ ಮುಂದೂಡಿದೆ.

ಈ ಸುದ್ದಿ ಓದಿದ್ದೀರಾ? ರಾಮನಗರ | ಹಾಲಿನ ದರ ಹೆಚ್ಚಿಸುವ ನಿರ್ಧಾರ ಸ್ವಾಗತಾರ್ಹ: ರೈತ ಸಂಘ

ಪ್ರವಾಸ ಮೊಟಕುಗೊಳಿಸಿ ಹಿಂದಿರುಗಿದ ಸದಸ್ಯರು:

ಪುರಸಭೆಯಲ್ಲಿ ಬಹುಮತ ಇರುವ ಕಾಂಗ್ರೆಸ್ ಪಕ್ಷವು ತನ್ನ ಸದಸ್ಯರನ್ನು ಬೇರೆ ಪಕ್ಷದವರು ತಮ್ಮತ್ತ ಸೆಳೆಯದಂತೆ ಕಾಂಗ್ರೆಸ್‌ನ ಸದಸ್ಯರನ್ನು ಕಳೆದ 15 ದಿನಗಳ ಹಿಂದೆಯೇ ಪ್ರವಾಸಕ್ಕೆ ಕಳಿಸಿತ್ತು. ಆದರೆ ಚುನಾವಣೆ ಮುಂದೂಡಿದ್ದರಿಂದ ಪ್ರವಾಸಕ್ಕೆ ತೆರಳಿದ್ದ ಕಾಂಗ್ರೆಸ್ ಪಕ್ಷದ ಸದಸ್ಯರು ತಮ್ಮ ಪ್ರವಾಸ ಮೊಟಕುಗೊಳಿಸಿ ಹಿಂದಿರುಗಿದ್ದಾರೆ.

ಮತ ಚಲಾವಣೆ ಅವಕಾಶ ನೀಡಲು ಮನವಿ:

ಜಿಲ್ಲಾಧಿಕಾರಿ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದ್ದರಿಂದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಸ್ಪರ್ದಿಸಲು ಹಾಗೂ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಮತ ಹಾಕಲು ಅವಕಾಶ ನೀಡಬೇಕೆಂದು ಅನರ್ಹಗೊಂಡಿದ್ದ ನಾಲ್ಕು ಜನ ಸದಸ್ಯರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಲಿಂಗಸುಗೂರು ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಸಲು ಸೆ.18ರಂದು ದಿನ ನಿಗದಿ ಮಾಡಲಾಗಿತ್ತು. ಆದರೆ ಕಲುಬುರಗಿ ಹೈಕೋರ್ಟ್‌ ಪೀಠ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ಸೆಪ್ಟೆಂಬರ್ 19ರವರಿಗೆ ತಡೆಯಾಜ್ಞೆ ನೀಡಿದ್ದರಿಂದ ಸೆ.19ರಂದು ವಿಚಾರಣೆ ನಂತರ ನ್ಯಾಯಾಲಯದ ಆದೇಶದಂತೆ ಮುಂದಿನ ದಿನಾಂಕ ನಿಗದಿ ಮಾಡಲಾಗುವುದು ಎಂದು ತಹಶೀಲ್ದಾರ್ ಶಂಶಾಲಂ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X