ರಾಯಚೂರು | ಭೂಸ್ವಾಧೀನ ಸಂಬಂಧ ವಿವಾದ: ರೈತರು–ಅಧಿಕಾರಿಗಳ ಮಧ್ಯೆ ವಾಗ್ವಾದ

Date:

ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ರೈತರು ನೀಡಿದ ಮೂಲ ಭೂಮಿಗೆ ದುಡ್ಡು ಕೊಡಬೇಕಿತ್ತು. ಹೆದ್ದಾರಿ ಪ್ರಾಧಿಕಾರ ರೈತರಿಗೆ ದುಡ್ಡು ನೀಡದೆ ಭೂಸ್ವಾಧೀನಪಡಿಸಿಕೊಂಡು ಕಾಮಗಾರಿ ನಡೆಸಲು ಬಿಡುವುದಿಲ್ಲ ಎಂದು ರೈತರ ಪಟ್ಟು ಹಿಡಿದಾಗ ರೈತರು ಹಾಗೂ ಪೊಲೀಸರ ಮಧ್ಯೆ ಕೆಲಕಾಲ ವಾಗ್ವಾದ ನಡೆದ ಘಟನೆ ಮಸ್ಕಿ ತಾಲ್ಲೂಕಿನ ಗೋನವಾರ ಗ್ರಾಮದ ಹೊರವಲಯದ ಜಮೀನಿನಲ್ಲಿ ನಡೆದಿದೆ.

- Advertisement -

ಭಾರತ ಮಾಲಾ ಯೋಜನೆ ಅಡಿಯಲ್ಲಿ ಬೆಳಗಾವಿ–ರಾಯಚೂರು ರಾಷ್ಟ್ರೀಯ ಹೆದ್ದಾರಿ–748ಎ ನಿರ್ಮಾಣಕ್ಕಾಗಿ ರೈತರಿಂದ ಭೂಸ್ವಾಧೀನ ಪಡಿಸಿಕೊಳ್ಳುತ್ತಿರುವ‌‌‌ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಕನಿಷ್ಠ ಕಾನೂನು ನಿಯಮಗಳನ್ನು ಪಾಲಿಸುತ್ತಿಲ್ಲ. ನಿಯಮ ಉಲ್ಲಂಘಿಸಿದ ಅಧಿಕಾರಿಗಳು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ರೈತರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಅವೈಜ್ಞಾನಿಕವಾಗಿ ಜಮೀನು ಸ್ವಾಧೀನ ಪ್ರಕ್ರಿಯೆ ನಡೆಸಲಾಗಿದೆ. ಭೂ ಸಂತ್ರಸ್ತರಿಗೆ ಆಕ್ಷೇಪಣೆ ಆಲಿಸದೇ ಅನ್ಯಾಯ ಮಾಡಲಾಗಿದೆ. ಸರಿಯಾಗಿ ಅಳತೆ ಹಾಗೂ ಖರೀದಿಸಿದ ಜಮೀನಿನ ದುಡ್ಡನ್ನು ಕೊಡದೆ ಕಾಲಹರಣ ಮಾಡುತ್ತಿದ್ದಾರೆ. ಯಾವುದೇ ಸುಳಿವು ನೀಡದೇ ಅಧಿಕಾರಿಗಳು ರೈತರು ಬೆಳೆದ ಬೆಳೆಗಳನ್ನು ನಾಶಪಡಿಸಿ ಕಾಮಗಾರಿ ನಡೆಸಲು ಮುಂದಾಗಿದ್ದಾರೆ. ಇದನ್ನು ರೈತರು ಪ್ರಶ್ನಿಸಿದ್ದಕ್ಕೆ ಪೊಲೀಸರ ಸಮ್ಮುಖದಲ್ಲಿ ದೌರ್ಜನ್ಯ ನಡೆಸಿದ್ದಾರೆ ಎಂದು ರೈತ ಮುಖಂಡ ಶರಣಪ್ಪ ಉದ್ಭಾಳ ಕಿಡಿಕಾರಿದರು.

ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳು ಕಾಮಗಾರಿ ನಡೆಸಲು ನ್ಯಾಯಾಲಯಕ್ಕೆ ದಾವೆ ಹೂಡಿದ್ದೇವೆಂದು ಹೇಳುತ್ತಿದ್ದಾರೆ. ನ್ಯಾಯಾಲಯದಿಂದ ಯಾವುದೇ ನೋಟಿಸ್ ರೈತರಿಗೆ ಹಿಂಬರಹ ಬಂದಿಲ್ಲವೆಂದು ರೈತರು ತಡೆದು ಪ್ರತಿಭಟಿಸಿದಾಗ ಅಧಿಕಾರಿಗಳು ಪೊಲೀಸರ ಸಮ್ಮುಖದಲ್ಲಿ ರೈತರನ್ನು ಒಕ್ಕಲೆಬ್ಬಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ‘ಕೆಸರಲ್ಲಿ ಶಾಲೆಯೋ, ಶಾಲೆಯಲ್ಲಿ ಕೇಸರೋʼ

ಲಿಂಗಸೂಗೂರು ಸಹಾಯಕ ಆಯುಕ್ತರ ಜೊತೆ ಎರಡು ಬಾರಿ ಸಭೆ ನಡೆದಾಗ ರೈತರ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ ಕಾಮಗಾರಿ ಆರಂಭಿಸುತ್ತೇವೆ ಅಲ್ಲಿಯವರೆಗೂ ಯಾವುದೇ ಕಾಮಗಾರಿಗೆ ಮುಂದಾಗಲ್ಲ ಎಂದು ಲಿಖಿತ ರೂಪದಲ್ಲಿ ನೀಡಿದರು. ಅದನ್ನು ಲೆಕ್ಕಿಸದೆ ಇಂದು ಏಕಾಏಕಿ ರೈತರ ಜಮೀನುಗಳಿಗೆ ನುಗ್ಗಿ ಕೆಲಸ ಪ್ರಾರಂಭಿಸಲು ಮುಂದಾಗಿದ್ದಾರೆ ಎಂದು ರೈತರು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...

ಉಡುಪಿ | ಜನರ ಬಳಿಗೇ ಅಧಿಕಾರಿಗಳು ತೆರಳಿ ಸಮಸ್ಯೆ ಪರಿಹರಿಸಬೇಕು: ಗುರುರಾಜ್ ಶೆಟ್ಟಿ ಗಂಟಿಹೊಳೆ

ಪ್ರಜಾಸೇವಾ ಆಂದೋಲನ ಸಭೆಯು ಜನಪರ ಕಾಳಜಿಯ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ...