ರಾಯಚೂರು | ಅಭ್ಯರ್ಥಿ ಘೋಷಣೆ ಬಳಿಕ ಪ್ರತ್ಯೇಕ ಸಭೆ, ಪ್ರತಿಭಟನೆ ನಡೆಸುವದು ಪಕ್ಷ ವಿರೋಧಿ ಚಟುವಟಿಕೆ: ರಾಜಾ ಅಮರೇಶ್ವರ ನಾಯಕ

Date:

Advertisements

ಲೋಕಸಭಾ ಚುನಾವಣೆಗೆ ಬಿಜೆಪಿಯ ಅಧಿಕೃತ ಅಭ್ಯರ್ಥಿ ಎಂದು ಘೋಷಣೆ ಆದ ನಂತರವೂ ಪ್ರತ್ಯೇಕ ಸಭೆ, ಪ್ರತಿಭಟನೆ ನಡೆಸುವುದು ಪಕ್ಷ ವಿರೋಧಿ ಚಟುವಟಿಕೆಯಾಗುತ್ತದೆ. ಎಲ್ಲರಿಗೂ ಆಸೆ ಇರುವುದು ಸಹಜ. ಪಕ್ಷದ ಹಿರಿಯರು ಎಲ್ಲವನ್ನು ಪರಿಶೀಲಿಸಲಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಹೇಳಿದರು.

ರಾಯಚೂರಿನಲ್ಲಿ ಅವರೆನ್ನು ಭೇಟಿಯಾದ ಮಾಧ್ಯಮಗಳೊಂದಿಗೆ ಮಾತನಾಡಿ, “ಚುನಾವಣೆಯಲ್ಲಿ ಸ್ಪರ್ಧಿಸಲು ಅನೇಕರು ಪ್ರಯತ್ನಗಳನ್ನು ನಡೆಸಿದ್ದರು. ಪಕ್ಷ ಮತ್ತೆ ಅವಕಾಶವನ್ನು ನನಗೆ ನೀಡಿ ಅಭ್ಯರ್ಥಿಯೆಂದು ಘೋಷಿಸಿದೆ. ಮಾಜಿ ಸಂಸದ ಬಿ ವಿ ನಾಯಕರೊಂದಿಗೆ ಮಾತನಾಡಲು ಸಿದ್ದವಿದ್ದು ಅವರೊಂದಿಗೆ ಸೇರಿ ಚುನಾವಣೆ ಪ್ರಚಾರ ನಡೆಸಲಾಗುವುದು” ಎಂದು ಹೇಳಿದರು.

“ಮಾಜಿ ಶಾಸಕ ತಿಪ್ಪರಾಜ ಹವಲ್ದಾರ್‌ ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದು‌, ಅವರು ಸಭೆ ಕರೆದಿರುವುದು ಪಕ್ಷದ ಪರವಾಗಿ ಹೊರತು ವಿರೋಧಿಸಿ ಅಲ್ಲ. ಪಕ್ಷದ ಪ್ರಮುಖರೊಂದಿಗೆ ಚರ್ಚಿಸಲು ಸಭೆ ಕರೆದಿರುವುದಾಗಿ ಹೇಳಿದ್ದಾರೆ” ಎಂದರು.

Advertisements

“ಪ್ರಧಾನಿ ನರೇಂದ್ರ ಮೋದಿಯವರ ವಿಕಸಿತ ಭಾರತ ಪರಿಕಲ್ಪನೆಯಲ್ಲಿ ದೇಶವನ್ನು ಜಗತ್ತಿನಲ್ಲಿಯೇ ಮೂರನೇ ಸ್ಥಾನಕ್ಕೆ ತರಲು ಬೇಕಾದ ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ. 2047  ವೇಳೆಗೆ ದೇಶಕ್ಕೆ ಸ್ವಾತಂತ್ರ್ಯ ದೊರಕಿ ನೂರು ವರ್ಷ ಪೂರೈಸುವ ವೇಳೆಯಲ್ಲಿ ದೇಶ ಜಗತ್ತಿನಲ್ಲಿಯೇ ಮೊದಲ ಸ್ಥಾನಕ್ಕೆ ತರಲು ದೂರದೃಷ್ಟಿಯ ಯೋಜನೆಗಳನ್ನು ರೂಪಿಸಿ ಕಾರ್ಯನಿರ್ವಹಿಸಲಾಗುತ್ತದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | 2 ದಿನದಲ್ಲಿ ತೀರ್ಮಾನ ಕೈಗೊಳ್ಳದಿದ್ದರೆ ಜನರ ತೀರ್ಮಾನಕ್ಕೆ ಬದ್ಧ; ಬಿಜೆಪಿ ಟಿಕೆಟ್ ಆಕಾಂಕ್ಷಿ ಬಿ ವಿ ನಾಯಕ

“ಮಹತ್ವಾಂಕ್ಷೆ ಜಿಲ್ಲೆಗಳೆಂದು ಗುರುತಿಸಿಕೊಂಡಿರುವ ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. 12 ಸಾವಿರ ಕೋಟಿ ರೂ. ವೆಚ್ಚದ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ ಪ್ರಗತಿಯಲ್ಲಿದೆ. ಯಾದಗಿರಿ ವೈದ್ಯಕೀಯ ಕಾಲೇಜು ಮಂಜೂರಾಗಿದೆ. ಐಎಸ್‌ಐ ಆಸ್ಪತ್ರೆಗಳು ಸೇರಿದಂತೆ ನೀರಾವರಿ ಯೋಜನೆಗಳಿಗೆ ಅನುದಾನ ನೀಡಲಾಗಿದೆ. 3800 ಕೋಟಿ ರೂ. ವೆಚ್ಚದಲ್ಲಿ ನಾರಾಯಣಪುರ ಕಾಲುವೆ ಬಲಗೊಳಿಸುವ ಕಾಮಗಾರಿ ನಡೆಯುತ್ತಿದೆ. ಇನ್ನಷ್ಟು ಪ್ರಗತಿಯ ಪಥದಲ್ಲಿ ಮುನ್ನಡೆಯಲು ಬಿಜೆಪಿಗೆ ಜನರು ಬೆಂಬಲಿಸಬೇಕು” ಎಂದರು.

ವರದಿ : ಹಫೀಜುಲ್ಲ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X