ರಾಯಚೂರು | ಮರ್ಯಾದಾ ಹತ್ಯೆ; ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಒತ್ತಾಯ

Date:

ಹುಬ್ಬಳ್ಳಿ ತಾಲ್ಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಕಾರಣಕ್ಕೆ ಕುಟುಂಬವೊಂದು ತನ್ನ ಮಗಳನ್ನು ಹತ್ಯೆ ಮಾಡಿ, ಜೊತೆಗೆ ಯುವಕನ ಮನೆಯವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಅಮಾನುಷ ಘಟನೆಯನ್ನು ಖಂಡಿಸಿ ಮಾದಿಗ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿದರು.

- Advertisement -

ದೇವದುರ್ಗ ತಾಲ್ಲೂಕು ತಹಶೀಲ್ದಾರ್‌ ಕಚೇರಿ ಎದುರು ಘೋಷಣೆಗಳನ್ನು ಕೂಗಿ, ಪ್ರಕರಣದಲ್ಲಿ ಭಾಗಿಯಾದ ಎಲ್ಲಾ ಆರೋಪಿಗಳನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿದರು. ಇಂತಹ ಗೌರವ ಹತ್ಯೆ ಪ್ರಕರಣಗಳು ಸಮಾಜಕ್ಕೆ ಕಳಂಕವಾಗಿದ್ದು, ದಲಿತ ಸಮುದಾಯದ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕೆಂದು ಅವರು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಮೇ ತಿಂಗಳಲ್ಲಿ ಇಬ್ಬರು ಪರಸ್ಪರ ಪ್ರೀತಿಸಿ ಕಾನೂನು ಪ್ರಕಾರ ಉಪ ನೋಂದಣಿ ಇಲಾಖೆಯಲ್ಲಿ ಮದುವೆ ಆಗಿ ಜೀವನ ನಡೆಸುತ್ತಿದ್ದರು. ಇದನ್ನು ಸಹಿಸದೇ ಯುವತಿ ತಂದೆಯಾದ ಪ್ರಕಾಶಗೌಡ ಪಾಟೀಲ್ ಇವರು ನಮ್ಮ ಕುಲಕ್ಕೆ ಅವಮಾನವಾಗಿದೆ ಎಂದು ಕ್ರೋದಿತಗೊಂಡು ಮಗಳನ್ನೆ ಮಾರಾಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದ್ದಾನೆ ಮತ್ತು ಇತನ ಕುಟುಂಬಸ್ಥರು ಸೇರಿ ದಲಿತ ಯುವಕನ ಮನೆಗೆ ನುಗ್ಗಿ ಮೂವರಿಗೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಈಗಾಗಲೇ ಕೆಲವರ ಬಂಧನವಾಗಿದ್ದು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿದರು.

ಹಿಂದು ನಾವೆಲ್ಲ ಒಂದು ಅನ್ನುವವರು ಈ ಘಟನೆ ಬಗ್ಗೆ ಯಾಕೆ ಹೇಳಿಕೆ ಕೊಡುತ್ತಿಲ್ಲ, ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು ಸುಮಾರು 78 ವರ್ಷ ಗತಿಸಿದರೂ ಕೂಡಾ ಇನ್ನು ಜಾತಿವಾದ ತೊಲಗುತ್ತಿಲ್ಲ ಮತ್ತು ಇಂತಹ ಘಟನೆ ನಡೆದರೂ ಕೂಡ ಹುಬ್ಬಳ್ಳಿ- ಧಾರವಾಡ ಉಸ್ತುವಾರಿ ಸಚಿವರು ಕುಟುಂಬಕ್ಕೆ ಭೇಟಿ ನೀಡದೇ ಇರುವುದು ಖಂಡನೀಯ ಎಂದರು.

ಕೂಡಲೇ ಇಂತಹ ಘಟನೆಗಳು ಮರುಕಳಿಸದಂತೆ ಆರೋಪಿಗಳನ್ನು ಗಲ್ಲು ಶಿಕ್ಷೆಗೆ ಗುರಿ ಪಡಿಸಬೇಕು ಹಾಗೂ ಯುವಕನ ಕುಟುಂಬಸ್ಥರಿಗೆ ಸೂಕ್ತ ಭದ್ರತೆ ಒದಗಿಸಬೇಕು ಮತ್ತು ಸರಕಾರದಿಂದ ೨೦ ಲಕ್ಷ ಪರಿಹಾರ ನೀಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಬೃಹತ್‌ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ವಿಬಿಜಿ- ರಾಮಜಿ ಮಸೂದೆ ವಿರೋಧಿಸಿ ಸಂಸದರ ಕಚೇರಿ ಮುಂದೆ ಕೂಲಿಕಾರರ ಪ್ರತಿಭಟನೆ

ಪ್ರತಿಭಟನೆಯಲ್ಲಿ ಮಾದಿಗ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಹನುಮಂತಪ್ಪ ಮನ್ನಾಪುರಿ, ಭೀಮ್‌ ಆರ್ಮಿ ಅಧ್ಯಕ್ಷರು ವಿಶ್ವನಾಥ ಬಲ್ಲಿದೇವ್‌, ಲಿಂಗಪ್ಪ ಗೌಡುರ, ವೆಂಕಟೇಶ ಜಾಲಹಳ್ಳಿ, ಶಿವರಾಜ ಕೊಪ್ಪರ, ಹನುಮಂತ ಇರಬಗೇರಾ ಇನ್ನಿತರರು ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಶೇಕ್ರಾ ನಾಯ್ಕ ಅವರಿಗೆ ವಿಭಾ ಸಾಹಿತ್ಯ ಪ್ರಶಸ್ತಿ

2026ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಗೆ ವಿಜಯನಗರ ಜಿಲ್ಲೆ ಹರಪನಹಳ್ಳಿಯ ಶೇಕ್ರಾನಾಯ್ಕ...

ರಾಯಚೂರು | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಗುಡಿಸಲು ಸಂಪೂರ್ಣ ಭಸ್ಮ

ಮಸ್ಕಿ ತಾಲ್ಲೂಕಿನ ಬಳಗಾನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬಸವೇಶ್ವರ ನಗರದಲ್ಲಿ ಶನಿವಾರ...

ಹಾಸನ | ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ, SIR ನಿಲ್ಲಿಸಿ; ಸಿಪಿಐಎಂ-ಸಿಪಿಐ ಪ್ರತಿಭಟನೆ 

ತಪ್ಪಾಗಿ ಹೊರಗಿಡಲಾದವರ ಮತದಾನ ಹಕ್ಕುಗಳನ್ನು ಮರುಸ್ಥಾಪಿಸಿ. ಭಾರತ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು...

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...