ರಾಯಚೂರು | ಹಾಸ್ಟೆಲ್ ವಿದ್ಯಾರ್ಥಿಗಳಿಂದ ಮಧ್ಯರಾತ್ರಿ ಪ್ರತಿಭಟನೆ; ಮೂಲಸೌಲಭ್ಯ ಕಲ್ಪಿಸಲು ಒತ್ತಾಯ

Date:

ರಾಯಚೂರಿನ ನಗರದ ಬೀಜನಗೇರಾ ರಸ್ತೆಯ ತಿರುಮಲ ಲೇಔಟ್ ನಲ್ಲಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ವೃತ್ತಿಪರ ಬಾಲಕರ ವಸತಿ ನಿಲಯದಲ್ಲಿ ಮೂಲಸೌಕರ್ಯ ಕಲ್ಪಿಸಲು ಒತ್ತಾಯಿಸಿ ವಿದ್ಯಾರ್ಥಿಗಳು ಮಧ್ಯರಾತ್ರಿ ಪ್ರತಿಭಟನೆ ನಡೆಸಿದರು.

- Advertisement -

ವಸತಿನಿಯದಲ್ಲಿ ವಿದ್ಯಾರ್ಥಿಗಳಿಗೆ ಸರಿಯಾದ ಬೆಡ್ ಗಳಿಲ್ಲ, ಕುಡಿಯುವ ನೀರಿನಬಸಮಸ್ಯೆ, ಸ್ನಾನ ಮಾಡಲು‌ಬಿಸಿ ನೀರಿನ ವ್ಯವಸ್ಥೆ, ಬಕೇಟ್ ಗಳಿಲ್ಲದೇ ಸಮಸ್ಯೆಯಾಗಿದೆ. ಗಣಕಯಂತ್ರ, ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯವಾದ ಪುಸ್ತಕ, ದಿನ ಪತ್ರಿಕೆಗಳು, ಬಕೇಟ್, ಕ್ರೀಡಾ ಸಾಮಗ್ರಿಗಳು ನೀಡಬೇಕೆಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ವಸತಿ ನಿಲಯದಲ್ಲಿರುವ ಶೌಚಾಲಯಗಳನ್ನು ಸರಿಯಾದ ಸಮಯಕ್ಕೆ ಸ್ವಚ್ಛಗೊಳಿಸದೆ ಬೇಜವಾಬ್ದಾರಿ ತೋರುತ್ತಾರೆ. ಇದರಿಂದ ಹಾಸ್ಟೆಲ್‌ಗಳಲ್ಲಿ ವಾಸಿಸುವ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಪರಿಣಾಮ ಬೀರಿದೆ.ಈ ಬಗ್ಗೆ ಹಲವು ಬಾರಿ ಮನವಿ ಮಾಡಿದ್ದರೂ ಆಡಳಿತ ಮಂಡಳಿಗೆ ತಿಳಿಸಿದರೂ ಅಧಿಕಾರಿಗಳು ಗಂಭೀರವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ವಿಷಯ ತಿಳಿದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಿವಮಾನಪ್ಪ ಭೇಟಿ ನೀಡಿ ವಾರದೊಳಗೆ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು. ಬಳಿಕ ವಿದ್ಯಾರ್ಥಿಗಳು ಹೋರಾಟ ಹಿಂಪಡೆದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸ್ಮಶಾನದ ಬಳಿ ಅವಧಿ ಮುಗಿಯದ ಔಷಧಿ ತ್ಯಾಜ್ಯ; ಸ್ಥಳೀಯರ ಆಕ್ರೋಶ

ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳಾದ ಹನುಮೇಶ ನಾಯಕ, ಸ್ವಾಮಿ ನಾಯಕ, ಕೆ. ನಾಗರಾಜ ನಾಯಕ, ಮಹೇಶ ನಾಯಕ, ನರಸಪ್ಪ ನಾಯಕ, ವೆಂಕಟೇಶ, ಕೃಷ್ಣ, ರವಿಚಂದ್ರ, ಉರುಕುಂದ, ವಿನೋದ, ಶಿವು ಸೇರಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...