ಪತ್ನಿಯನ್ನು ಪತಿಯೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದ ಘಟನೆ ಮಸ್ಕಿ ತಾಲ್ಲೂಕಿನ ದೇಸಾಯಿ ಬೋಗಾಪುರ ಗ್ರಾಮದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಗಂಗಮ್ಮ (31) ಎಂದು ಗುರುತಿಸಲಾಗಿದೆ. ಪತಿ ಯಲ್ಲಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. 2012ರಲ್ಲಿ ಮದುವೆಯಾದ ದಂಪತಿಗೆ ಮೂರು ಮಕ್ಕಳಿದ್ದು, ಕುಟುಂಬದಲ್ಲಿ ಆಗಾಗ ಸಣ್ಣಪುಟ್ಟ ವಿಚಾರಗಳಿಗೆ ಜಗಳ ನಡೆಯುತ್ತಿತ್ತು ಎಂದು ತಿಳಿದುಬಂದಿದೆ.
ರಾತ್ರಿ ನಡೆದ ಗಲಾಟೆಯಲ್ಲಿ ಕೋಪಗೊಂಡ ಯಲ್ಲಪ್ಪನು ಪತ್ನಿ ಗಂಗಮ್ಮಳ ಕುತ್ತಿಗೆ ಮೇಲೆ ಕುಡುಗೋಲಿನಿಂದ ಹಲ್ಲೆ ನಡೆಸಿ ಕೊಲೆಗೈದಿದ್ದಾನೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಪಹಣಿ ತಿದ್ದುಪಡಿ ವಿಳಂಬ : ರೈತರಿಂದ ಪ್ರತಿಭಟನೆ
ಘಟನೆಯ ನಂತರ ಸ್ಥಳಕ್ಕೆ ಭೇಟಿ ನೀಡಿದ ಮಸ್ಕಿ ಠಾಣೆ ಪೊಲೀಸರು ಆರೋಪಿ ಯಲ್ಲಪ್ಪನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
