ರಾಯಚೂರು | ಹಟ್ಟಿ ಚಿನ್ನದ ಗಣಿ: 4 ತಿಂಗಳಲ್ಲಿ ₹1,342.90 ಕೋಟಿ ವ್ಯವಹಾರ : ದಾಖಲೆ

Date:

ಲಿಂಗಸೂಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ಕಂಪನಿಯು ಪ್ರಸಕ್ತ ಹಣಕಾಸು ವರ್ಷದ ಮೊದಲ ನಾಲ್ಕು ತಿಂಗಳಲ್ಲಿ ₹1,342.90 ಕೋಟಿ ವ್ಯವಹಾರ ನಡೆಸಿ ಇತಿಹಾಸ ನಿರ್ಮಿಸಿದೆ. ರಾಜ್ಯದ ಏಕೈಕ ಚಿನ್ನದ ಗಣಿಯಾದ ಹಟ್ಟಿ ಚಿನ್ನದ ಗಣಿ ಕಂಪನಿ ನಿರಂತರ ಸಾಧನೆಯ ಮೂಲಕ ತನ್ನ ದಾಖಲೆಗೆ ಮತ್ತೊಂದು ಮೈಲುಗಲ್ಲು ಸೇರಿಸಿಕೊಂಡಿದೆ.

“ಕಳೆದ ವರ್ಷಕ್ಕೆ ಹೋಲಿಸಿದರೆ 300 ಕೋಟಿ ರೂ.ಗೂ ಅಧಿಕ ವಹಿವಾಟು ನಡೆಸಲಾಗಿದೆ. ತೆರಿಗೆ, ರಾಯಲ್ಟಿ ಪಾವತಿಸಿದ ನಂತರ 444 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಇದು ಗಣಿ ಕಂಪನಿಯ ಅತ್ಯಧಿಕ ಲಾಭವಾಗಿದೆ.

ವಾರ್ಷಿಕ 10 ರಿಂದ 11 ಲಕ್ಷ ಟನ್ ಅದಿರು ಉತ್ಪಾದಿಸಲಾಗುತ್ತದೆ. ಈ ವರ್ಷ 2.8 ಟನ್‌ನಿಂದ 3 ಟನ್ ಚಿನ್ನ ಉತ್ಪಾದಿಸುವ ಹಾಗೂ 3,000 ಕೋಟಿ ರೂ.ಗೂ ಅಧಿಕ ವಾರ್ಷಿಕ ವಹಿವಾಟು ಗುರಿಯಿದೆ. ಪ್ರಸಕ್ತ ವರ್ಷ 1700 ಕೆ.ಜಿ ಚಿನ್ನ ಉತ್ಪಾದಿಸುವ ಗುರಿ ಹೊಂದಲಾಗಿದೆ ಎಂದು ಹಟ್ಟಿಚಿನ್ನದಗಣಿ ಕಂಪನಿ ವ್ಯವಸ್ಥಾಪಕ ನಿರ್ದೇಶಕಿ ಶಿಲ್ಪಾ ಆರ್. ತಿಳಿಸಿದ್ದಾರೆ.

- Advertisement -

ಈ ಸುದ್ದಿ ಓದಿದ್ದೀರಾ? ರಾಯಚೂರು | ಅತ್ಯಾಚಾರ ಪ್ರಕರಣ : ಅಪರಾಧಿಗೆ ಜೀವಾವಧಿ ಶಿಕ್ಷೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಉತ್ಪಾದನೆ ಹೆಚ್ಚಳ: 6 ಮೀಟರ್ ಸುತ್ತಳತೆ ಹಾಗೂ 900 ಮೀಟರ್ ಆಳದ ನ್ಯೂ ಸರ್ಕ್ಯೂಲರ್ ಶಾಫ್ಟ್ ಹಾಗೂ ಪ್ರತಿ ಸಾಲಿನಲ್ಲಿ 6,83,701 ಟನ್ ಅದಿರು ಸಂಸ್ಕರಿಸಿ, 1606.30 ಕೆ.ಜಿ. ಚಿನ್ನ ಉತ್ಪಾದಿಸಲಾಗಿತ್ತು. ಹಿಂದಿನ ಆರ್ಥಿಕ ವರ್ಷಕ್ಕೆ ಹೊಲಿಸಿದರೆ ಶೇ.4.81ರಷ್ಟು ಕಡಿಮೆ ಅದಿರು ಉತ್ಪಾದಿಸಲಾಗಿದೆ. ಚಿನ್ನದ ಉತ್ಪಾದನೆಯಲ್ಲಿ ಶೇ.3.43ರಷ್ಟು ಹೆಚ್ಚಾಗಿದೆ. ಗಂಟೆಗೆ 50 ಟನ್ ಅದಿರು ಸಂಸ್ಕರಣೆಯ ಬಾಲ್ ಮಿಲ್‌ನಿಂದಾಗಿ ಅಧಿಕ ಚಿನ್ನ ಉತ್ಪಾದಿಸಲಾಗಿದೆ. 2024-25 ಹೆಚ್ಚಿನ ಉತ್ಪಾದನೆ ಜತೆಗೆ ಕಾರ್ಮಿಕರ ಕಲ್ಯಾಣಕ್ಕಾಗಿ ಅನೇಕ ಕಾರ್ಯಕ್ರಮ ರೂಪಿಸಲಾಗಿದ್ದು, ಅವೆಲ್ಲವೂ ಕಾರ್ಯರೂಪಕ್ಕೆ ಬರಲಿವೆ ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಉದ್ಯೋಗ ಖಾತ್ರಿ ಪೂರ್ಣ ಕೂಲಿ ಪಾವತಿಗೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿರುವ ಕೂಲಿಕಾರರಿಗೆ ಅವರ ಶ್ರಮಕ್ಕೆ ತಕ್ಕಂತೆ...

ಕೊಡಗು | ಫಾರಂ-7 ದುರುಪಯೋಗ: ಬಿಜೆಪಿ ಬೂತ್ ಅಧ್ಯಕ್ಷ ಸೇರಿ ಐವರ ವಿರುದ್ಧ ಎಫ್‌ಐಆರ್!

ಕೊಡಗು ಜಿಲ್ಲೆಯ ಬ್ಯಾಡಗೊಟ್ಟ ಗ್ರಾಮದಲ್ಲಿ ಮತದಾರರ ಹೆಸರುಗಳನ್ನು ಅಳಿಸಲು ಫಾರಂ-7 ಅರ್ಜಿಗಳನ್ನು...

ಬಾಗೇಪಲ್ಲಿ | ಗಿಡ ನೆಟ್ಟು ಪ್ರಕೃತಿಯ ಋಣ ತೀರಿಸಿ:- ಚೇತನ್ ನಾಯ್ಡು ಫೌಂಡೇಷನ್ ಅಧ್ಯಕ್ಷ ಬಿ.ಆರ್.ನರಸಿಂಹ ನಾಯ್ಡು

ಗಿಡ ನೆಟ್ಟು ಪ್ರಕೃತಿಯ ಋಣ ತೀರಿಸಿ ಪ್ರಕೃತಿಯಿಂದ ಹಲವು ರೀತಿಯ ಪ್ರಯೋಜನಗಳನ್ನು...