ರಾಯಚೂರು | ಗೋಡ್ಸೆ ಗಾಂಧೀಜಿಯನ್ನು ಕೊಂದರೆ, ಬಿಜೆಪಿ ಗಾಂಧೀಜಿ ವಿಚಾರಧಾರೆಯನ್ನು ಕೊಂದಿದೆ; ಸಲೀಂ ಅಹ್ಮದ್ ಕಿಡಿ

Date:

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು 12 ವರ್ಷವಾಗಿದೆ. ರಾಜ್ಯಕ್ಕೆ ಶೂನ್ಯ ಕೊಡುಗೆಯಿದೆ. ನರೇಗಾ ಯೋಜನೆಯಲ್ಲಿ ಭ್ರಷ್ಟಾಚಾರ ಆಗಿದೆ ಅಂತ ಯೋಜನೆ ಬದಲಾಯಿಸಿದ್ದಾರೆ. ಗೋಡ್ಸೆ ಗಾಂಧೀಜಿ ಗೆ ಕೊಂದರೆ, ಬಿಜೆಪಿ ಅವರು ಮಹಾತ್ಮ ಗಾಂಧಿಯ ವಿಚಾರಧಾರೆ ಕೊಂದಿದೆ ಎಂದು ಕರ್ನಾಟಕ ವಿಧಾನ ಪರಿಷತ್ತಿನ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್ ಕಿಡಿಕಾರಿದರು.

ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ನರೇಗಾ ಯೋಜನೆಯಲ್ಲಿ ಬಿಜೆಪಿ ಸರ್ಕಾರ, 12 ವರ್ಷ ಆದಮೇಲೆ ನರೇಗಾ ಯೋಜನೆಯ ಭ್ರಷ್ಟಾಚಾರ ನಡೆದಿದೆ ಎಂದು ಗೊತ್ತಾಗಿದೆಯಾ, ಇದೊಂದು ರಾಜಕೀಯ ಶಡ್ಯಂತ್ರ, ಬಿಜೆಪಿಯ ವೈಫಲ್ಯ ತಿಳಿಸಿ ಜನರಿಗೆ ಜಾಗೃತಿ ಮೂಡಿಸಿ‌ ನಮ್ಮ‌ಸಾಧನೆಯನ್ನು ಜನರ ಬಳಿ ಒಯ್ದು ಮತ‌ ಕೇಳುತ್ತೇವೆ ಎಂದರು.

ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದ್ದು ಮೋದಿ ಅವರಿಗೆ ಸುಳ್ಳು ಹೇಳುವುದರಲ್ಲಿ ಆಸ್ಕರ್ ಅವಾರ್ಡ್ ಕೊಡಬಹುದು. ಬಿಜೆಪಿ ಸುಳ್ಳು‌ಹೇಳುವ ಸರ್ಕಾರ, ಅಧಿಕಾರಕ್ಕೆ ಬರುವ ಮೊದಲು ಸ್ವಿಸ್ ಬ್ಯಾಂಕ್ ನಿಂದ ಕಪ್ಪು ಹಣ ತಂದು ಜನರ‌ ಬ್ಯಾಂಕ್ ಖಾತೆಗೆ 15 ಲಕ್ಷ ರೂ. ಹಣ‌ಹಾಕುತ್ತೇವೆ, ಯುವಕರಿಗೆ 2ಕೋಟಿ, ರೈತರ ಆದಾಯ ದ್ವಿಗುಣ ಭರವಸೆ ಈಡೇರಿಸಿಲ್ಲ, ಪೆಟ್ರೋಲ್, ಡೀಸೆಲ್ , ಅಡುಗೆ ಅನಿಲ ದರ ಹೆಚ್ಚು ಮಾಡಿದೆ.‌ಬೆಲೆ‌ ಏರಿಕೆಯಿಂದ ದೇಶದ ಜನರು ನೊಂದಿದ್ದಾರೆ. ಸ್ವರ್ಗ ತೋರುಸುತ್ತೇವೆ ಎಂದು ನರಕ ತೋರಿಸುತ್ತಿದ್ದಾರೆ ಎಂದು ದೂರಿದರು.

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು 12 ವರ್ಷವಾಗಿದೆ. ರಾಜ್ಯಕ್ಕೆ ಶೂನ್ಯ ಕೊಡುಗೆ. ಮಹಾದಾಯಿ, ಮೇಕೆ ದಾಟು ಯೋಜನೆ ಸಮಸ್ಯೆ ಬಗೆಹರಿಸಿಲ್ಲ, ಬಿಜೆಪಿಯಿಂದ ಗೆದ್ದ ರಾಜ್ಯದ ಮಂತ್ರಿಗಳು ಯಾವುದೇ ನ್ಯಾಯ ಕೊಡಿಸುವ ಕೆಲಸ ಮಾಡುತ್ತಿಲ್ಲ, ನಿರ್ಮಲಾ ಸೀತಾರಾಮನ್ ಸೇರಿ ರಾಜ್ಯದಿಂದ ಗೆದ್ದ ಕೇಂದ್ರ ಸಚಿವರು ಪ್ರಧಾನಿ ಬಳಿ ಮಾತನಾಡುವ ಧೈರ್ಯವಿಲ್ಲ, ರಾಜ್ಯಕ್ಕೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಸಚಿವ ಸಂಪುಟ ಬದಲಾವಣೆ ವರಿಷ್ಠರ ತೀರ್ಮಾನ ಬಜೆಟ್ ನಲ್ಲಿ ಅನೇಕ ಕೆಲಸ, ಜನಪರ ಆಡಳಿತ ಮಾಡುತ್ತೇವೆ. ನಮ್ಮ ಪಕ್ಷದಲ್ಲಿ ಸಣ್ಣಪುಟ್ಟ ಗೊಂದಲವಿದೆ. ಸರಿಪಡಿಸಿಕೊಳ್ಳುವ ಕೆಲಸ‌ಮಾಡುತ್ತೇವೆ. ಶೇ 50 ರಷ್ಟು ಹಳೆಯ ಸಚಿವವರಿಗೆ ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಬೇಕು ಎಂದು ಪಕ್ಷದ ವರಿಷ್ಠರಿಗೆ ತಿಳಿಸಿದ್ದೇವೆ, ಅವರಿಗೆ ಪಕ್ಷದ ಬೇರೆ ಜವಾಬ್ದಾರಿ ನೀಡಿ ಚುನಾವಣೆಗೆ ಬಳಸಿಕೊಳ್ಳಬಹುದು, ಸಂಪುಟ ಬದಲಾವಣೆ ಅಂತಿಮವಾಗಿ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ ಎಂದರು

ಗ್ಯಾರಂಟಿಗಳೇ ನಮಗೆ ಶ್ರೀ ರಕ್ಷೆ ನಾವು ನುಡಿದಂತೆ ನಡೆದಿದ್ದೇವೆ. ಚುನಾವಣೆಯಲ್ಲಿ ನೀಡಿದ ಭರವಸೆ ಈಡೇರಿಸಿದ್ದೇವೆ. ಮುಂದೆ ಬರುವ ಜಿ.ಪಂ, ತಾಪಂ ಸ್ಥಳೀಯ ಚುನಾವಣೆಗೆ ಗ್ಯಾರಂಟಿ ಯೋಜನೆ ನಮಗೆ ಶ್ರೀ ರಕ್ಷೆಯಾಗಲಿದೆ.ಮುಂದಿನ ವರ್ಷ ಎಪ್ರಿಲ್, ಮೇನಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಲಿದ್ದು ನಮ್ಮ‌ಸಂಘಟನೆ, ಬೂತ್ ಮಟ್ಟದಲ್ಲಿ ಸಕ್ರಿಯವಾಗಿ ಚುನಾವಣೆಗೆ ತಯಾರಿ ಮಾಡುತ್ತಿದೆ ನಮ್ಮ ಕೆಲಸಗಳು ಜನ‌ಮೆಚ್ಚಿದ್ದಾರೆ.ಹೂಗಾಗಿ ನಾವು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ, ನುಡಿದಂತೆ ನಡೆಯುತ್ತೇವೆ.

*ಸಚಿವ ಸಂಪುಟ ಬದಲಾವಣೆ ವರಿಷ್ಠರ ತೀರ್ಮಾನ*: ಬಜೆಟ್ ನಲ್ಲಿ ಅನೇಕ ಕೆಲಸ, ಜನಪರ ಆಡಳಿತ ಮಾಡುತ್ತೇವೆ. ನಮ್ಮ ಪಕ್ಷದಲ್ಲಿ ಸಣ್ಣಪುಟ್ಟ ಗೊಂದಲವಿದೆ. ಸರಿಪಡಿಸಿಕೊಳ್ಳುವ ಕೆಲಸ‌ಮಾಡುತ್ತೇವೆ. ಶೇ 50 ರಷ್ಟು ಹಳೆಯ ಸಚಿವವರಿಗೆ ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಬೇಕು ಎಂದು ಪಕ್ಷದ ವರಿಷ್ಠರಿಗೆ ತಿಳಿಸಿದ್ದೇವೆ, ಅವರಿಗೆ ಪಕ್ಷದ ಬೇರೆ ಜವಾಬ್ದಾರಿ ನೀಡಿ ಚುನಾವಣೆಗೆ ಬಳಸಿಕೊಳ್ಳಬಹುದು, ಸಂಪುಟ ಬದಲಾವಣೆ ಅಂತಿಮವಾಗಿ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ ಎಂದರು.

- Advertisement -

ಈ ಸುದ್ದಿ ಓದಿದ್ದೀರಾ? ಸಿಂಧನೂರು | ಕಳ್ಳತನ ಪ್ರಕರಣ; ಇಬ್ಬರ ಬಂಧನ, 3 ತೊಲೆ ಚಿನ್ನ, 15 ತೊಲೆ ಬೆಳ್ಳಿ ಜಪ್ತಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಈ ವೇಳೆ ಕಾಂಗ್ರೆಸ್ ಮುಖಂಡ ರಜಾಕ್ ಉಸ್ತಾದ, ಅಸ್ಲಾಂ ಪಾಷಾ, ಮಹ್ಮದ್ ಶಾಲಂ, ಬಸವರಾಜ್ ಇಟಗಿ, ಶ್ರೀದೇವಿ ನಾಯಕ, ನಿರ್ಮಲಾ ಬೆಣ್ಣೆ ಇನ್ನಿತರರು ಇದ್ದರು.

237f7ffccb444279d008bf3b9996085b28ea2ee502b53dcd4b516808491f04d0?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...