ರಾಯಚೂರು | ಸರ್ಕಾರ ಭೂಮಿಯಲ್ಲಿ ಅಕ್ರಮ; ಭೂ ಮಂಜೂರಾತಿಗೆ ಆಗ್ರಹ

Date:

ಸರ್ಕಾರದ ಜಮೀನನ್ನು ಅಕ್ರಮವಾಗಿ ಉಳುಮೆ ಮಾಡುತ್ತಿರುವುದರಿಂದ ನಾಡಗೌಡರ ಕುಟುಂಬದ ಸದಸ್ಯರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ರಾಯಚೂರು ಜಿಲ್ಲೆ ಸಿಂಧನೂರಿನ ಮಿನಿ ವಿಧಾನಸೌಧ ಕಚೇರಿ ಎದುರು ರೈತ ಸಂಘ ಹಾಗೂ ಸಿಪಿಐಎಂಎಲ್ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

“ಕರ್ನಾಟಕ ಸರ್ಕಾರದ ಭೂಮಿಯನ್ನು ಅಕ್ರಮವಾಗಿ ಕಬಳಿಕೆ ಮಾಡಿದ ಜವಳಗೇರಾ ನಾಡಗೌಡರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಜೈಲಿಗೆ ತಳ್ಳಿ, ಅಕ್ರಮ ಸಾಗುವಳಿ ಭೂ ಕಂದಾಯ ವಸೂಲಿ ಮಾಡಿ ತಾಲೂಕಿನಾದ್ಯಂತ ಸರ್ಕಾರಿ ಭೂ ಕಬಳಿಕೆದಾರರಿಂದ ತೆರವುಗೊಳಿಸಿ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಎಲ್ಲ ಜಾತಿಯ ಭೂಹೀನ ಬಡವರಿಗೆ ಹಂಚಬೇಕು” ಎಂದು ಸಿಪಿಐ(ಎಂಎಲ್) ರೆಡ್ ಸ್ಟಾರ್ ಸಂಘಟನೆ ಕಾರ್ಯಕರ್ತರು ಆಗ್ರಹಿಸಿದರು.

ಸಿಪಿಐ ರಾಜ್ಯಾಧ್ಯಕ್ಷ ಮಾತನಾಡಿ, “ಸಿಂಧನೂರು ಕಂದಾಯ ಗ್ರಾಮದ ಸರ್ಕಾರಿ ಸರ್ವೆ ನಂಬರ್ 419/ಪಿ1 32.11 ಎಕರೆ ಹಾಗೂ ಸುಲ್ತಾನಪೂರ ಸರ್ಕಾರಿ ಸರ್ವೆ ನಂಬರ್ 186, 29.31 ಎಕರೆ ಭೂಮಿಯನ್ನು ಕಳೆದ 43 ವರ್ಷಗಳಿಂದ ಕೋಟಿಗಟ್ಟಲೆ ಬೆಲೆಬಾಳುವ‌ 61 ಎಕರೆ ಸರ್ಕಾರಿ ಭೂಮಿಯಲ್ಲಿ ಅಕ್ರಮವಾಗಿ ಸಾಗುವಳಿ ಮಾಡಿ‌, ಹಾಡುಹಗಲೇ ಸರ್ಕಾರಕ್ಕೆ ವಂಚನೆ ಮಾಡಿದ ಜವಳಗೇರಾ ನಾಡಗೌಡರ ಕುಟುಂಬದ ವಿರುದ್ಧ ಸರ್ಕಾರ ಕ್ರಿಮಿನಲ್ ಕೇಸ್ ದಾಖಲಿಸಬೇಕು” ಎಂದು ಒತ್ತಾಯಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಪಿಎಂಶ್ರೀ ಯೋಜನೆಯಡಿ 7 ಶಾಲೆಗಳ ಉನ್ನತೀಕರಣಕ್ಕೆ 3.71ಕೋಟಿ ಅನುದಾನ: ಸಂಸದ ಸಿದ್ದೇಶ್ವರ

“ಕಳೆದ 43 ವರ್ಷಗಳಿಂದ ಸಾಗುವಳಿ ಮಾಡಿದ ಭೂ ಕಂದಾಯವನ್ನು ಸರ್ಕಾರ ವಸೂಲು ಮಾಡಬೇಕು. ತಾಲೂಕಿನಲ್ಲಿ ಸರ್ಕಾರಿ ಭೂಮಿ ಅಕ್ರಮ ಸಾಗುವಳಿ ಮತ್ತು ಒತ್ತುವರಿ ಮಾಡಿದ ನಾಡಗೌಡರ ಕುಟುಂಬ ಸೇರಿದಂತೆ ಇತರೆ ಅಕ್ರಮ ಭೂಗಳ್ಳರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿ, ಎಲ್ಲ ಜಾತಿಯ ಭೂಹೀನ ಬಡವರಿಗೆ ವಿತರಿಸಬೇಕು. ಅಕ್ರಮ-ಸಕ್ರಮದಡಿ ಫಾರಂ 1, 57, 94ಸಿ, 94ಸಿಸಿ ಅರ್ಜಿ ಹಾಕಿದ ಅರ್ಜಿದಾರರಿಗೆ ಸರ್ಕಾರಿ ಭೂಮಿ ಮತ್ತು ವಸತಿಯನ್ನು ನೀಡಬೇಕು” ಎಂದರು.

ಸಿಪಿಐಎಂಎಲ್ ರಾಜ್ಯ ಸದಸ್ಯ ಗಂಗಾಧರ್, ಜಿಲ್ಲಾಧ್ಯಕ್ಷ ಮಲ್ಲಯ್ಯ ಕಟ್ಟಿಮನಿ, ಕರ್ನಾಟಕ ರೈತ ಸಂಘ ಜಿಲ್ಲಾ ಉಪಾಧ್ಯಕ್ಷ ಸಂತೋಷ ಹಿರೆದಿನ್ನಿ, ಸಿಪಿಐ(ಎಂಎಲ್) ತಾಲ್ಲೂಕು ಮುಖಂಡ ಹನುಮಂತಪ್ಪ ಗೊಡ್ಯಾಳ, ಹನುಮಂತಪ್ಪ ಗೋಡ್ಯಾಳ, ಅಜೀಜ್ ಜಾಗೀರದಾರ ಸೇರಿದಂತೆ ಬಹುತೇಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಪೆನ್‌ಡ್ರೈವ್‌ | ಬ್ಲಾಕ್‌ಮೇಲ್‌ಗಾಗಿ ವಿಡಿಯೋ ಮಾಡಿಕೊಂಡಿದ್ರಾ?; ನ್ಯಾಯಾಂಗ ತನಿಖೆಗೆ ಆಗ್ರಹ

ಹಾಸನ ಪೆನ್‌ಡ್ರೈವ್ ವಿಚಾರದಲ್ಲಿ ಸುಮೊಟೊ ಪ್ರಕರಣ ದಾಖಲಿಸಿಕೊಂಡು, ನ್ಯಾಯಾಂಗ ತನಿಖೆ ನಡೆಸಬೇಕು....

ಶಿವಮೊಗ್ಗ | ಮುಂದಿನ ದಿನದಲ್ಲಿ ಕ್ಷೇತ್ರದ ರಕ್ಷಣೆ ನನ್ನದು: ಗೀತಾ ಶಿವರಾಜ್‌ಕುಮಾರ್

ಶಿವಮೊಗ್ಗ ಜಿಲ್ಲೆಯಲ್ಲಿ ರಾಜಕಾರಣಿಗಳ ಬಳಿ ಅಧಿಕಾರವಿದ್ದು, ಪರಿಹರಿಸಬಹುದಾದ ಸಮಸ್ಯೆಗಳು ಸಾಕಷ್ಟಿವೆ. ಆದರೂ,...

ಫ್ರಿ ಬಸ್ | ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ; ಬಿಜೆಪಿ ಪ್ರಚಾರಕಿ, ನಟಿ ಶೃತಿ ವಿವಾದಾತ್ಮಕ ಹೇಳಿಕೆ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ...

ಚಾಮರಾಜನಗರ | ದೇಶದ ಪ್ರಜಾಪ್ರಭುತ್ವ, ಸಂವಿಧಾನ ರಕ್ಷಣೆಗೆ ಕಾಂಗ್ರೆಸ್‌ ಬೆಂಬಲಿಸಿ: ಮಾನವ ಬಂಧುತ್ವ ವೇದಿಕೆ

ದೇಶದ ಪ್ರಜಾಪ್ರಭುತ್ವ, ಸಂವಿಧಾನದ ರಕ್ಷಣೆಗಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಜನರು...