ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ವಾಹನವನ್ನು ತಡೆಯಲು ಮುಂದಾದ ಪೊಲೀಸ್ ಒಬ್ಬರ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಚಿಕ್ಕಲಪರ್ವಿ ಗ್ರಾಮದಲ್ಲಿ ನಡೆದಿದೆ.
ಹಲ್ಲೆಗೊಳಗಾದವರನ್ನು ಪೊಲೀಸ್ ಕಾನ್ಸ್‌ಟೇಬಲ್ ಲಕ್ಷ್ಮಣ ಎಂದು ಗುರುತಿಸಲಾಗಿದೆ. ಚಿಕಲಪರ್ವಿ ಗ್ರಾಮದಲ್ಲಿ ಮರಳು ತನಿಖಾ ಕರ್ತವ್ಯಕ್ಕೆ ಲಕ್ಷ್ಮಣ್ ಅವರು ಎಂದಿನಂತೆ ತೆರಳಿದ್ದರು. ಕರ್ತವ್ಯ ಸಮಯದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ತುಂಬಿದ ಟ್ರ್ಯಾಕ್ಟರ್ ಕಂಡ ಲಕ್ಷ್ಮಣ ವಾಹನ ನಿಲ್ಲಿಸಲು ಸೂಚಿಸಿದ್ದಾರೆ.

ಕೋಪಗೊಂಡ ಚಾಲಕ ದೇವರಾಜ್ ನೇರವಾಗಿ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಘಟನಾ ಸ್ಥಳದಲ್ಲಿ ಗಾಯಗೊಂಡ ಲಕ್ಷ್ಮಣ್ ಅವರನ್ನು ಚಿಕಿತ್ಸೆಗಾಗಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ತಾಲೂಕು ವೈದ್ಯಾಧಿಕಾರಿ ಶರಣಬಸವ ಭೇಟಿ ನೀಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ರಾಯಚೂರು | ನಾಲೆಗಳಿಗೆ ಏ.20ವರಗೆ ನೀರು ಹರಿಸಲು ರೈತರ ಅಹೋರಾತ್ರಿ ಧರಣಿ
