ರಾಯಚೂರು | ತುಂಗಭದ್ರಾ ಎಡದಂಡೆ ಕಾಲುವೆ ನೀರಿನ ಅಸಮರ್ಪಕ ಬಳಕೆ; ಕ್ರಮಕ್ಕೆ ಆಗ್ರಹ

Date:

ತುಂಗಭದ್ರಾ ಎಡದಂಡೆ ಕಾಲುವೆಯ 104 ಮೈಲ್ ಕೆಳಭಾಗದ ರೈತರಿಗೆ ನೀರು ಒದಗಿಸುವುದು, ಅಕ್ರಮವಾಗಿ ನೀರು ಕಳ್ಳತನ ಮಾಡುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಸಮರ್ಪಕವಾಗಿ ಗೇಜ್ ನಿರ್ವಹಣೆ ಮಾಡಬೇಕು ಎಂದು ಆಗ್ರಹಿಸಿ ರೈತರು ರಸ್ತೆ ತಡೆ ಪ್ರತಿಭಟನೆ ನಡೆಸಿದರು.

- Advertisement -

ರೈತರು ರಾಯಚೂರಿನ ಸಾತ್ ಮೈಲ್ ಹತ್ತಿರ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಪರದಾಡುವಂತಾಯಿತು. ಕುರ್ಡಿ ಮಾರ್ಗದಿಂದ ಸಂಚರಿಸಿದ ವಾಹನಗಳನ್ನು ದಿನ್ನಿಯಲ್ಲಿ ತಡೆದು ಪ್ರತಿಭಟನೆ ನಡೆಸಿದರು. ಈ ಹಿನ್ನೆಲೆಯಲ್ಲಿ ವಾಹನಗಳು ರಸ್ತೆಯಲ್ಲಿ ಸಾಲುಗಟ್ಟಿ ನಿಲ್ಲುವಂತಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಕಾಲುವೆ ನೀರು ಹರಿಸಿದಾಗಿನಿಂದ ನಿಗದಿತ ಗೇಜ್‌ನಲ್ಲಿ ನೀರು ಪೂರೈಕೆಯಾಗಿದೆ. ನೀರಾವರಿ ಸಲಹಾ ಸಮಿತಿ ತೀರ್ಮಾನದಂತೆ ನೀರು ಹರಿಸುವಲ್ಲಿ ನೀರಾವರಿ ನಿಗಮದ ಅಧಿಕಾರಿಗಳು ನಿರ್ಲಕ್ಷ್ಯ ತೊರಿದ್ದಾರೆ” ಎಂದು ರೈತರು ಆರೋಪಿಸಿದರು.

“ತುಂಗಭದ್ರಾ ಎಡದಂಡೆ ಕಾಲುವೆಯಿಂದ ಹರಿಸಿದ ನೀರನ್ನು ಅಕ್ರಮವಾಗಿ ಬಳಕೆ ಮಾಡುತ್ತಿರುವುದು ಎಗ್ಗಿಲ್ಲದೆ ನಡೆಯುತ್ತಿದೆ. ಈ ಬಗ್ಗೆ ನೀರಾವರಿ ಇಲಾಖೆಯ ಅಧಿಕಾರಿಗಳು ಮತ್ತು ಈ ಭಾಗದ ಜನಪ್ರತಿನಿಧಿಗಳಿಗೆ ಮಾಹಿತಿ ಇದ್ದರೂ ಕೂಡ ಕ್ರಮಕ್ಕೆ ಮುಂದಾಗದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

2010ಕ್ಕಿಂತ ಮೊದಲು ಎಡದಂಡೆ ಕಾಲುವೆಗೆ 3300ರಿಂದ 3400 ಕ್ಯೂಸೆಕ್‌ ನೀರು ಬಿಡುಗಡೆ ಮಾಡುತ್ತಿದ್ದ‌ ವೇಳೆ ಮೈಲ್ ಸಂಖ್ಯೆ 104ಕ್ಕೆ 6 ಅಡಿ ನೀರು ಬರುತ್ತಿತ್ತು. ಆದರೆ, ಈಗ 4100 ಕ್ಯೂಸೆಕ್ ನೀರು ಬಿಟ್ಟರೂ ಮಾನ್ವಿ, ಸಿರವಾರ ಮತ್ತು ರಾಯಚೂರು ತಾಲೂಕಿಗೆ ನೀರು ತಲುಪುತ್ತಿಲ್ಲ. ಕಾರಣ,  ಮೇಲ್ಭಾಗದ ಕೆಲವು ರೈತರು ಅನಧಿಕೃತವಾಗಿ ನೀರಾವರಿ ಮಾಡಿಕೊಳ್ಳುತ್ತಿದ್ದಾರೆ” ಎಂದು ದೂರಿದರು.

2008ರಿಂದ 2012ರವರೆಗೆ ಕಾಲುವೆ ದುರಸ್ಥಿ ಮತ್ತು ಆಧುನೀಕರಣಕ್ಕೆ ಸರ್ಕಾರ ಸುಮಾರು 10 ಸಾವಿರ ಕೋಟಿ ಹಣ ಖರ್ಚು ಮಾಡಿದೆ. ಯಾವುದೇ ಪ್ರಯೋಜನವಾಗಿಲ್ಲ. ಈ ಕುರಿತು ಸೆಪ್ಟಂಬರ್‌ 25ರಂದು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಿಗೆ ಜನತಾ ದರ್ಶನ ಕಾರ್ಯಕ್ರಮದಲ್ಲಿ ಮನವಿ ಸಲ್ಲಿಸಲಾ ಗಿದೆ. ಅದರೂ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಕಿಡಿಕಾರಿದರು.

“ಅಕ್ರಮವಾಗಿ ನೀರು ಬಳಕೆಗೆ ಸಂಬಂಧಿಸಿದಂತೆ ಮಸ್ಕಿ ಶಾಸಕ ಬಸನಗೌಡ ತುರ್ವಿಹಾಳ ಇವರು ತಮ್ಮ ಭಾಗದಲ್ಲಿ ಕಾಲುವೆಯ ನೀರನ್ನು ಅಕ್ರಮವಾಗಿ ಬಳಸಲು ಅನುಕೂಲ ಮಾಡಿಕೊಟ್ಟಿದ್ದು, ನೀರನ್ನು ಅಕ್ರಮವಾಗಿ ಬಳಕೆ ಮಾಡಿಕೊಳ್ಳುತ್ತಿರುವ ಎಲ್ಲ ರೈತರಿಂದ ಒಂದು ಬೆಳೆಗೆ 2000 ಚೀಲ ಭತ್ತವನ್ನು ಹಫ್ತಾ ಸಂಗ್ರಹಿಸುತ್ತಿದ್ದಾರೆ” ಎಂದು ಆರೋಪಿಸಿದರು.

“ವೋಟ್ ಬ್ಯಾಂಕ್‌ಗಾಗಿ ತಮ್ಮ ಭಾಗದ ರೈತರಿಗೆ ಸಹಾಯ ಮಾಡುವ ನೆಪದಲ್ಲಿ ಭತ್ತದ ಹಫ್ತಾ ವಸೂಲಿ ಮಾಡಿ, ಹಣ ಗಳಿಸುವ ಉದ್ದೇಶದಿಂದ ಜನಪ್ರತಿನಿಗಳೇ ಅಕ್ರಮ ನೀರು ಬಳಕೆಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಹೀಗಾದರೆ, ಕಾಲುವೆಯ ಕೆಳಭಾಗದ ರೈತರ ಗತಿ ಏನು” ಎಂದು ಪ್ರಶ್ನೆ ಮಾಡಿದರು.

“ಅಕ್ರಮ ನೀರು ಬಳಕೆ ಕುರಿತು ಕೂಡಲೇ ಗಂಭೀರವಾಗಿ ಪರಿಗಣಿಸಿ, ಸೂಕ್ತ ತನಿಖೆ ನಡೆಸಬೇಕು.  ಕಾಲುವೆಯ ನೀರನ್ನು ಅಕ್ರಮವಾಗಿ ಬಳಕೆ ಮಾಡಿಕೊಳ್ಳುತ್ತಿರುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಕೆಳಭಾಗದ ಮಾನ್ವಿ, ಸಿರವಾರ ಮತ್ತು ರಾಯಚೂರು ತಾಲೂಕುಗಳ ಎಲ್ಲ ರೈತರಿಗೂ ನಿಗದಿತ ಪ್ರಮಾಣದಲ್ಲಿ ಗೇಜ್ ನಿರ್ವಹಣೆ ಮಾಡಬೇಕು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಮೇಕೆದಾಟು ಯೋಜನೆ ಶೀಘ್ರದಲ್ಲೇ ಅನುಷ್ಠಾನಗೊಳಿಸಿ: ಮೋಹನ್‌ ದಾಸರಿ

ಪ್ರತಿಭಟನೆಯ ನೇತೃತ್ವವನ್ನು 104 ಮೈಲ್ ಕೆಳಭಾಗದ ರೈತರ ಹೋರಾಟ ಸಮಿತಿ ಅಧ್ಯಕ್ಷ ಮಹಾಂತೇಶ ಪಾಟೀಲ್ ಅತ್ತನೂರು, ಉಪಾಧ್ಯಕ್ಷ ಕೆ.ಶರಣಪ್ಪ ಕಲ್ಮಲಾ, ಸಿದ್ದನಗೌಡ ನೆಲಹಾಳ, ಶಾಸಕ ಡಾ.ಶಿವರಾಜ ಪಾಟಿಲ್, ಕರ್ನಾಟಕ ರೈತ ಸಂಘದ ಆಧ್ಯಕ್ಷ ಪ್ರಭಾಕರ ಪಾಟಿಲ್ ಇಂಗಳಧಾಳ, ಅನಿತಾ ಬಸವರಾಜ, ಬಸವರಾಜ ಕಲ್ಲೂರು, ಬಿ ರಾಮು ಸೇರಿದಂತೆ ಹಲವು ಗ್ರಾಮಗಳ ಮುಖಂಡರುಗಳು, ಹಲವು ರೈತ ಸಂಘಟನೆ ಪದಾಧಿಕಾರಿಗಳು ಒಳಗೊಂಡಂತೆ ನೂರಾರು ಜನರು ಇದ್ದರು.

ವರದಿ : ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...