ರಾಯಚೂರು | ನೀರು ಉಳಿಸಲು ‘ಸೆಕ್ಷನ್ 144’ ಜಾರಿ

Date:

ತುಂಗಾಭದ್ರ ಜಲಾಶಯದಿಂದ ರಾಯಚೂರಿಗೆ ನೀರು ಹರಿಸಲು ರಾಯಚೂರು ಜಿಲ್ಲಾಡಳಿತವು ಕಾಲುವೆಗಳ ಆಸುಪಾಸಿನಲ್ಲಿ ಐಪಿಸಿ ಸೆಕ್ಷನ್ 144ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ.

- Advertisement -

ಜೂನ್ ಮೂರನೇ ವಾರ ಕಳೆದರೂ ರಾಜ್ಯದಲ್ಲಿ ಮಾನ್ಸೂನ್ ಮಳೆಯ ಸುಳಿವಿಲ್ಲ. ರಾಜ್ಯದ ನದಿಗಳು ಬತ್ತುತ್ತಿದ್ದು, ಹಲವೆಡೆ ನೀರಿನ ಅಭಾವ ಸೃಷ್ಠಿಯಾಗಿದೆ. ಜಲಾಶಯಗಳಲ್ಲಿ ಇರುವ ನೀರನ್ನು ಕುಡಿಯುವ ಉದ್ದೇಶಕ್ಕಷ್ಟೇ ಬಳಸಲು ನಿರ್ಧರಿದ್ದು, ಕೃಷಿಗೆ ನೀರಿಗೆ ಪೂರೈಕೆ ಇಲ್ಲವೆಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ಈ ಹಿನ್ನೆಲೆಯಲ್ಲಿ, ರಾಯಚೂರಿನ ಕುಡಿಯುವ ನೀರು ಪೂರೈಸಲು ತುಂಗಭದ್ರ ಎಡದಂಡೆ ಕಾಲುವೆಗೆ (ಟಿಎಲ್‌ಬಿಸಿ) ಜಲಾಶಯದಿಂದ ನೀರು ಹರಿಸಲಾಗುತ್ತಿದೆ. ಕಾಲುವೆ ಉದ್ದಕ್ಕೂ ನೀರನ್ನು ಬೇರೆಡೆಗೆ ತಿರುಗಿಸದಂತೆ ತಡೆಯುವ ಉದ್ದೇಶದಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜಿಷೇಧಾಜ್ಞೆಯು ಜೂನ್ 27ರವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಡಳಿತ ಹೇಳಿದೆ.

ತುಂಗಾಭದ್ರ ಅಣೆಕಟ್ಟೆಯಿಂದ ನೀರು ಪೂರೈಸುವುದರ ಜೊತೆಗೆ, ಕೃಷ್ಣಾ ನದಿಯಿಂದಲೂ ಐದು ದಿನಕ್ಕೊಮ್ಮೆ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.

“ತುಂಗಾಭದ್ರ ಅಣೆಕಟ್ಟಿನಿಂದ ಹರಿಸುವ ನೀರು ಟಿಎಲ್‌ಬಿಸಿ ಮೂಲಕ ಸುಮಾರು 130 ಮೈಲುಗಳವರೆಗೆ ಹರಿಯುತ್ತದೆ. ಮೊದಲು ಬಂಗಾರಪ್ಪ ಕೆರೆಯಲ್ಲಿರುವ ಬ್ಯಾಲೆನ್ಸಿಂಗ್ ಜಲಾಶಯದಲ್ಲಿ ನೀರು ಸಂಗ್ರಹಗೊಂಡು ನಂತರ ರಾಂಪುರ ಕೆರೆ ಜಲಾಶಯಕ್ಕೆ ಹರಿಸಲಾಗುವುದು. ನಂತರ ರಾಯಚೂರು ನಗರಕ್ಕೆ ಕುಡಿಯುವ ಉದ್ದೇಶಕ್ಕೆ ನೀರು ಪೂರೈಕೆ ಮಾಡಲಾಗುವುದು” ಎಂದು ಜಿಲ್ಲಾಡಳಿತ ಹೇಳಿದೆ.

“ಕಾಲುವೆಯುದ್ದಕ್ಕೂ ನಿಷೇಧಾಜ್ಞೆ ಜಾರಿಯಲ್ಲಿದೆ. ಗಸ್ತು ತಿರುಗಲು ಎಂಜಿನಿಯರ್‌ಗಳನ್ನು ನಿಯೋಜಿಸಲಾಗಿದೆ. ಆದರೂ, ಜನರು ಗೇಜ್‌ಗಳನ್ನು ಬಳಸಿ ನೀರು ತಿರುಗಿಸುವ ಸಾಧ್ಯತೆಗಳಿವೆ” ಎಂದು ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯ್ಕ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...

ರಾಯಚೂರು | ಕಾರು ಪಲ್ಟಿ: ಕೃಷ್ಣಾ ಭಾಗ್ಯ ಜಲನಿಗಮದ ಸಹಾಯಕ ಎಂಜಿನಿಯರ್ ಸಾವು

ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕೃಷ್ಣಾ ಭಾಗ್ಯ ಜಲನಿಗಮದ ನಾರಾಯಣಪುರ ವಲಯದ...

ರಾಯಚೂರು | ಯರಮರಸ್ ವಿದ್ಯುತ್ ಘಟಕ ಭೂ ಸಂತ್ರಸ್ಥರಿಗೆ ಉದ್ಯೋಗ ನೀಡಲು ಆಗ್ರಹ

ಯರಮರಸ್ ವಿದ್ಯುತ್ ಘಟಕಕ್ಕೆ ಭೂಮಿ ಕಳೆದುಕೊಂಡ ಭೂ ಸಂತ್ರಸ್ಥರಿಗೆ ಉದ್ಯೋಗ ನೀಡದೇ...