ರಾಯಚೂರು | ಶೈಕ್ಷಣಿಕ ಗುಣಮಟ್ಟದ ಸುಧಾರಣೆ ಶಿಕ್ಷಕರಿಂದ ಮಾತ್ರ ಸಾಧ್ಯ: ಡಿಸಿ ನಿತೀಶ್

Date:

ಶೈಕ್ಷಣಿಕ ಗುಣಮಟ್ಟದಲ್ಲಿ ಸುಧಾರಣೆ ತರುವುದು ಶಾಲಾ ಹಂತದಲ್ಲಿ ಶಿಕ್ಷಕರಿಂದ ಮಾತ್ರ ಸಾಧ್ಯ ಎಂದು ರಾಯಚೂರು ಜಿಲ್ಲಾಧಿಕಾರಿ ನಿತೀಶ್‌ ಕೆ. ಅಭಿಪ್ರಾಯಪಟ್ಟರು.

- Advertisement -

ನಗರದ ಕೃಷಿ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಶಾಲಾ ಶಿಕ್ಷಣ ಇಲಾಖೆ ಆಯುಕ್ತಾಲಯ, ಶಾಲಾ ಶಿಕ್ಷಣ ಇಲಾಖೆ ಹಾಗೂ ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ ಸಂಯುಕ್ತಾಶ್ರಯದಲ್ಲಿ ಶಿಕ್ಷಣ ಭಾಗಿದಾರರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಬೇರೆ ಜಿಲ್ಲೆಗೆ ಹೋಲಿಸಿದರೆ ರಾಯಚೂರು ಶಿಕ್ಷಣದಲ್ಲಿ ಹೆಚ್ಚಿನದಾಗಿ ಸುಧಾರಣೆಯಾಗಬೇಕಿದೆ. ಜಿಲ್ಲೆಯಲ್ಲಿ ಶೇ.50 ರಷ್ಟು ಶಿಕ್ಷಕರ ಕೊರತೆ ಇದೆ, ಅದನ್ನು ನೀಗಿಸಲು ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಸಮಾವೇಶದಲ್ಲಿ ಪಾಲ್ಗೊಂಡ ಶಿಕ್ಷಣ ಭಾಗೀದಾರರು ಎನ್‌ಜಿಒಗಳು ಮುಂದಿನ 5 ವರ್ಷಕ್ಕೆ ಕ್ರಿಯಾ ಯೋಜನೆ ತಯಾರಿಸಿಕೊಂಡು ಶಾಲೆಗಳಲ್ಲಿ ಶಿಕ್ಷಕರಿಂದಲೇ ಕಲಿಕಾ ಸಾಮರ್ಥ್ಯಕ್ಕೆ ಮಕ್ಕಳಿಗೆ ಪ್ರೇರಣೆ ನೀಡಲು ಕ್ರಮವಹಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕಲ್ಯಾಣ ಕರ್ನಾಟಕಕ್ಕೆ 371 ಜೆ ಕಲಂ ಈ ಭಾಗಕ್ಕೆ ಉತ್ತಮ ಅವಕಾಶ ನೀಡಿದೆ. ಪ್ರತಿ ತಾಲೂಕಿನ ಶೈಕ್ಷಣಿಕ ಗುಣಮಟ್ಟ ಸಾಧನೆ ಮಾಡಲು, ಬೇರೆ ಜಿಲ್ಲೆಯ ಮಕ್ಕಳೊಂದಿಗಿನ ಸ್ಪರ್ಧೆಗೆ ಕ್ರಿಯಾಯೋಜನೆ ಅಗತ್ಯವಿದೆ. ಜತೆಗೆ ಸಾಕಷ್ಟು ಸಂಘಟನೆಗಳು ಜಿಲ್ಲೆಯಲ್ಲಿ ಶೈಕ್ಷಣಿಕ ಗುಣಮಟ್ಟ ಮತ್ತು ಅಪೌಷ್ಟಿಕತೆ ನಿವಾರಣೆಗೆ ಒತ್ತು ನೀಡುತ್ತಿವೆ. ಸಾಕಷ್ಟು ಅನುದಾನವಿದ್ದು, ಅದರೊಟ್ಟಿಗೆ ಮಾನವ ಸಂಪನ್ಮೂಲದ ಅಗತ್ಯವಿದೆ. ಎಲ್ಲಾ ವಿಷಯವಾರು ಒಳಗೊಂಡಂತೆ ಮಕ್ಕಳ ಕಲಿಕಾ ಸಾಮರ್ಥ್ಯ ಹೆಚ್ಚಿಸುವುದಕ್ಕೆ ಮಾಡಬಹುದಾದ ಎಲ್ಲಾ ರೀತಿಯ ಕ್ರಮ, ಸಲಹೆ, ಸಹಕಾರ ನೀಡಿದಲ್ಲಿ ಶೈಕ್ಷಣಿಕವಾಗಿ ಮುಂದುವರೆಯಲು ಸಾಧ್ಯವೆಂದರು.

ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ. ಆಕಾಶ ಎಸ್ ಮಾತನಾಡಿ, “ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಗುಣಮಟ್ಟದ ಸುಧಾರಣೆಗೆ ಕಳೆದ ಎರಡು ವರ್ಷಗಳಿಂದ ಶಿಕ್ಷಣ ಭಾಗೀದಾರರ ಸಮಾವೇಶ ನಡೆಸುತ್ತಿದ್ದು, ಇದರಿಂದ ಮಕ್ಕಳ ಕಲಿಕೆಗೆ ಬೇಕಾಗಿರುವ ಪೂರ್ವ ತಯಾರಿಗೆ ಕ್ರಿಯಾ ಯೋಜನೆ ರೂಪಿಸಲಾಗುತ್ತಿದೆ. ಕಳೆದ ಎರಡು ವರ್ಷದಲ್ಲಿ ಕಲಬುರಗಿ ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ಸಮಾವೇಶ ನಡೆಸಲಾಗಿದೆ” ಎಂದರು.

ರಾಜ್ಯದಲ್ಲಿ 57 ಸಾವಿರ ಶಿಕ್ಷಕರ ಕೊರತೆ ಇದೆ. ಈ ಭಾಗದಲ್ಲಿ 15 ಸಾವಿರ ಕೊರತೆ ಇದೆ. ಶಾಲಾ ಕಟ್ಟಡ, ನೀರಿನ ಸೌಲಭ್ಯ, ಶೌಚಾಲಯ ಸೇರಿ ಹಲವು ಸೌಲಭ್ಯಗಳ ಕೊರತೆ ಎದುರಿಸುತ್ತಿದ್ದೇವೆ, ಎಸ್‌ಎಸ್‌ಎಲ್‌ಸಿಯಲ್ಲಿ ಈ ಭಾಗದಲ್ಲಿ ಹೆಚ್ಚು ಫಲಿತಾಂಶ ಮಾಡಲು ಮೊದಲ ಕಾಪಿ ಮಾಡುವುದನ್ನು ತಡೆಗಟ್ಟಲು ವೆಬ್ ಕಾಸ್ಟಿಂಗ್ ಮಾಡಲಾಯಿತು. ನಂತರ ರಾಜ್ಯದೆಲ್ಲೆಡೆ ವಿಸ್ತರಿಸಲಾಯಿತು. ಆರಂಭದಲ್ಲಿ 65 ಶಾಲೆಗಳನ್ನು ಸೇರ್ಪಡೆ ಮಾಡಲಾಯಿತು. 3-6 ವರ್ಷದ ಮಕ್ಕಳ ಕಲಿಕೆ ಹಂತವನ್ನು ಮತ್ತಷ್ಟು ಹೆಚ್ಚಿಸಲು ಕಲ್ಯಾಣ ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲಾಗಿದೆ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ?: ರಾಯಚೂರು | ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಐಯುಟಿಯುಸಿ ಪ್ರತಿಭಟನೆ

ಸಮಾವೇಶದಲ್ಲಿ ಮಹಾ ನಗರ ಪಾಲಿಕೆ ಅಧ್ಯಕ್ಷೆ ನರಸಮ್ಮ ನರಸಿಂಹಲು ಮಾಡಗಿರಿ, ಕೃಷಿ ವಿವಿ ಆಡಳಿತ ಮಂಡಳಿ ಸದಸ್ಯ ಮಲ್ಲಿಕಾರ್ಜುನ, ಕೃಷಿ ವಿವಿ ಕುಲ ಸಚಿವ ಗುರುರಾಜ ಸುಂಕದ್, ಡಯಟ್ ಪ್ರಾಚಾರ್ಯ ಆರ್. ಇಂದಿರಾ, ಪ್ರಥಮ ಫೌಂಡೇಶನ್ ಮುಖ್ಯಸ್ಥೆ ಸುಮನ್, ಲತಾ ಕೋಟೆ ಸೇರಿದಂತೆ ಅನೇಕರು ಇದ್ದರು

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...