ರಾಯಚೂರು | ಮಹಿಳೆಯರ ಮೇಲಿನ ಹಲ್ಲೆ, ದೌರ್ಜನ್ಯ ಹೆಚ್ಚಳ: ಜನರಲ್ಲಿ ಆತಂಕ

Date:

ಮಹಿಳೆಯರ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸಲು ಪೊಲೀಸ್ ಇಲಾಖೆ, ಆಡಳಿತ ಹಾಗೂ ಸಮಾಜದ ಎಲ್ಲ ವರ್ಗಗಳು ಸಮನ್ವಯದಿಂದ ಕಾರ್ಯನಿರ್ವಹಿಸುವ ಅಗತ್ಯವಿದೆ. ಅಪರಾಧ ತಡೆಗೆ ಕಟ್ಟುನಿಟ್ಟಿನ ಕಾನೂನು ಜಾರಿ, ಸಾರ್ವಜನಿಕ ಜಾಗೃತಿ ಮತ್ತು ತ್ವರಿತ ನ್ಯಾಯ ಪ್ರಕ್ರಿಯೆಗೆ ಆದ್ಯತೆ ನೀಡವುದರಿಂದ ಮಾತ್ರ ಮಹಿಳೆಯರಲ್ಲಿ ಭದ್ರತೆಯ ಭಾವನೆ ಮೂಡಿಸಲು ಸಾಧ್ಯ

ರಾಯಚೂರು ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಏರುತ್ತಿರುವ ಅತ್ಯಾಚಾರ ಪ್ರಕರಣಗಳು ಜಿಲ್ಲೆಯ ಕಾನೂನು-ಸುವ್ಯವಸ್ಥೆ ಹಾಗೂ ಮಹಿಳೆಯರ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕುತ್ತಿವೆ. ಗೃಹ ಇಲಾಖೆಯ ಕಳೆದ ಮೂರು ವರ್ಷದ ಅಂಕಿ-ಅಂಶಗಳನ್ನು ಅವಲೋಕಿಸಿದರೆ, ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಏರಿಕೆ ಕಂಡುಬಂದಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

- Advertisement -

ಲಭ್ಯವಿರುವ ಅಂಕಿ-ಅಂಶಗಳ ಪ್ರಕಾರ, 2023ರಲ್ಲಿ ಜಿಲ್ಲಾದ್ಯಂತ 18 ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದರೆ, 2024ರಲ್ಲಿ ಈ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. 2025ರಲ್ಲಿ ದಾಖಲಾದ ಪ್ರಕರಣಗಳ ಸಂಖ್ಯೆ 32ಕ್ಕೆ ತಲುಪಿದ್ದು, ಮೂರು ವರ್ಷಗಳಲ್ಲಿ ಅತ್ಯಧಿಕವಾಗಿದೆ. ಈ ಅಂಕಿ-ಅಂಶಗಳು ಮಹಿಳೆಯರು ಮತ್ತು ಬಾಲಕಿಯರ ಸುರಕ್ಷತೆ ಕುರಿತು ಗಂಭೀರ ಚರ್ಚೆಗೆ ಕಾರಣವಾಗಿವೆ. ಒಂಟಿಯಾಗಿ ಸಂಚರಿಸುವ ಅಥವಾ ವಾಸಿಸುವ ಮಹಿಳೆಯರಲ್ಲಿ ಆತಂಕ ಹೆಚ್ಚಾಗಿದ್ದು, ಸಾರ್ವಜನಿಕ ವಲಯದಲ್ಲಿಯೂ ಭದ್ರತೆ ಕುರಿತ ಕಳವಳ ವ್ಯಕ್ತವಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮೂರು ವರ್ಷದ ಅಂಕಿ-ಅಂಶ (2023–2025):
ಅತ್ಯಾಚಾರ ಪ್ರಕರಣಗಳು: 18- 20- 32
ಕೊಲೆ ಪ್ರಕರಣಗಳು: 45- 38- 35
ಡಕಾಯಿತಿ ಪ್ರಕರಣಗಳು: 2- 5- 0
ಹಲ್ಲೆ ಪ್ರಕರಣಗಳು: 247- 269- 291

ಇನ್ನೊಂದೆಡೆ, ಜಿಲ್ಲೆಯಲ್ಲಿನ ಕೊಲೆ ಪ್ರಕರಣಗಳ ಸಂಖ್ಯೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಸ್ವಲ್ಪ ಮಟ್ಟಿನ ಇಳಿಕೆ ಕಂಡುಬಂದಿದೆ. 2023ರಲ್ಲಿ 45 ಕೊಲೆ ಪ್ರಕರಣಗಳು ದಾಖಲಾಗಿದ್ದರೆ, 2024ರಲ್ಲಿ 38 ಮತ್ತು 2025ರಲ್ಲಿ 35 ಪ್ರಕರಣಗಳು ವರದಿಯಾಗಿವೆ. ಕೊಲೆ ಪ್ರಕರಣಗಳಲ್ಲಿ ಇಳಿಕೆ ಕಂಡುಬಂದಿರುವುದು ಸಮಾಧಾನಕರ ಸಂಗತಿಯಾದರೂ, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಏರಿಕೆ ಆ ನೆಮ್ಮದಿಯನ್ನು ಮಸುಕಾಗಿಸಿದೆ.

ದರೋಡೆ ಪ್ರಕರಣಗಳಲ್ಲಿಯೂ ಗಮನಾರ್ಹ ಬದಲಾವಣೆ ಕಂಡುಬಂದಿದ್ದು, 2023ರಲ್ಲಿ 2 ಡಕಾಯಿತಿ ಪ್ರಕರಣಗಳು ದಾಖಲಾಗಿದ್ದರೆ, 2024ರಲ್ಲಿ 5 ಪ್ರಕರಣಗಳು ವರದಿಯಾಗಿವೆ. ಆದರೆ 2025ರಲ್ಲಿ ಯಾವುದೇ ಡಕಾಯಿತಿ ಪ್ರಕರಣ ದಾಖಲಾಗಿಲ್ಲ. ಈ ಬೆಳವಣಿಗೆಗೆ ಪೊಲೀಸ್ ಇಲಾಖೆಯ ಕಟ್ಟುನಿಟ್ಟಿನ ಕ್ರಮಗಳು ಕಾರಣವೆಂದು ಹೇಳಲಾಗುತ್ತಿದ್ದು, ಸಾರ್ವಜನಿಕರಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ.

ಹಲ್ಲೆ ಪ್ರಕರಣಗಳ ಸಂಖ್ಯೆ ಮಾತ್ರ ನಿರಂತರ ಏರಿಕೆಯಾಗುತ್ತಿದೆ. 2023ರಲ್ಲಿ 247 ಹಲ್ಲೆ ಪ್ರಕರಣಗಳು ದಾಖಲಾಗಿದ್ದರೆ, 2024ರಲ್ಲಿ ಅದು 269ಕ್ಕೆ ಏರಿಕೆಯಾಗಿದೆ. 2025ರಲ್ಲಿ 291 ಪ್ರಕರಣಗಳು ದಾಖಲಾಗಿದ್ದು, ಜಿಲ್ಲೆಯಲ್ಲಿ ಹಿಂಸಾತ್ಮಕ ಅಪರಾಧಗಳು ಹೆಚ್ಚುತ್ತಿರುವ ಸೂಚನೆ ನೀಡುತ್ತಿದೆ.

ಈ ಬಗ್ಗೆ ರಾಜ್ಯ ಮಹಿಳಾ ಒಕ್ಕೂಟ ಸಂಚಾಲಕಿ ಮೌಕ್ಷಮ್ಮ ಈ ದಿನ.ಕಾಮ್‌ ಜತೆಗೆ ಮಾತನಾಡಿ, “ಪ್ರತಿ ವರ್ಷ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಹಲವು ದಿನಗಳಿಂದ ಅತ್ಯಾಚಾರ ಪ್ರಕರಣಗಳ ವಿರುದ್ಧ ಹೋರಾಟ, ಪ್ರತಿಭಟನೆ, ಪತ್ರಿಕಾಗೋಷ್ಠಿ ನಡೆಸುವುದರ ಜತೆಗೆ ಮೇಲಧಿಕಾರಿಗಳಿಗೆ ಮನವಿ ಪತ್ರಗಳನ್ನು ಸಲ್ಲಿಸಿದ್ದರೂ, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಲ್ಲಿ ನಿರ್ಲಕ್ಷ್ಯ ಹಾಗೂ ವಿಳಂಬ ಕಂಡುಬರುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದರು.

“ಅತ್ಯಾಚಾರ ಘಟನೆ ನಡೆದ ನಂತರ ಎರಡ್ಮೂರು ದಿನಗಳವರೆಗೆ ಮಾತ್ರ ಅದು ಬಿಸಿ ಸುದ್ದಿಯಾಗಿ ಉಳಿಯುತ್ತದೆ. ಆ ಸಂದರ್ಭದಲ್ಲಿ ಅಧಿಕಾರಿಗಳು ತುರ್ತಾಗಿ ಕ್ರಮ ಕೈಗೊಳ್ಳುವಂತೆ ಕಾಣಿಸುತ್ತಾರೆ. ಬಳಿಕ ನೊಂದ ಕುಟುಂಬವನ್ನು ಭೇಟಿ ಮಾಡಿ ಧೈರ್ಯ ತುಂಬುವುದು ಹಾಗೂ ಪ್ರಕರಣದ ನ್ಯಾಯಯುತ ತನಿಖೆಗೆ ಅಗತ್ಯ ಬೆಂಬಲ ನೀಡುವಲ್ಲಿ ವಿಫಲರಾಗುತ್ತಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬದಲು, ಕೆಲವೊಮ್ಮೆ ನೊಂದ ಕುಟುಂಬಗಳ ಮೇಲೆಯೇ ಒತ್ತಡ ಹೇರುವ ಪ್ರಯತ್ನಗಳು ನಡೆಯುತ್ತವೆ. ಇದರಿಂದ ಕುಟುಂಬಸ್ಥರು ನ್ಯಾಯಕ್ಕಾಗಿ ಕೋರ್ಟ್ ಮತ್ತು ಸರ್ಕಾರಿ ಕಚೇರಿಗಳಿಗೆ ಅಲೆದಾಡಲು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ” ಎಂದು ಆರೋಪಿಸಿದರು.

ಮರಕ್ಕೆ ಕಟ್ಟಿ ಹಲ್ಲೆ: 2025 ಜನವರಿಯಲ್ಲಿ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಒಬ್ಬ ವ್ಯಕ್ತಿಯ ಸಾವಿಗೆ ಶಂಕಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಸಾರ್ವಜನಿಕವಾಗಿ ಥಳಿಸಿದ ಅಮಾನವೀಯ ಘಟನೆ ನಡೆದಿತ್ತು. ನೂರಾರು ಜನರ ಮುಂದೆ ಈ ರೀತಿ ಘಟನೆ ನಡೆದರೂ ಯಾರೂ ರಕ್ಷಿಸಲು ಮುಂದಾಗಿಲ್ಲ. ಇದೇ ರೀತಿ 2024 ಅಕ್ಟೋಬರ್‌ನಲ್ಲಿ ಮಾನಸಿಕ ಅಸ್ವಸ್ಥ ಮಹಿಳೆಯನ್ನು ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ ಘಟನೆ ವರದಿಯಾಗಿದೆ.

ಸಾಮೂಹಿಕ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ: 2023ರಲ್ಲಿ ಸಿಂಧನೂರು ತಾಲೂಕಿನಲ್ಲಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದು ಆಕೆ ಸಾವನ್ನಪ್ಪಿದಳು. 2025ರಲ್ಲಿ ಸಿಂಧನೂರಿನಲ್ಲಿ ಕಂದಾಯ ಇಲಾಖೆಯ ಐವರು ಸರ್ಕಾರಿ ನೌಕರರು ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪ್ರಕರಣ ದಾಖಲಾಗಿದೆ. ಇತ್ತೀಚೆಗೆ (2026 ಜೂನ್) ಸಿಂಧನೂರು ತಾಲೂಕಿನಲ್ಲಿ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಒಬ್ಬನನ್ನು ಬಂಧಿಸಲಾಗಿದೆ. ರಾಯಚೂರಿನಲ್ಲಿ 2026ರ ಮೇ ವೇಳೆ ಮಹಿಳಾ ಕಾನ್‌ಸ್ಟೆಬಲ್ ಮೇಲೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆತನ ವಿರುದ್ಧ ಪ್ರಕರಣ ದಾಖಲಾಗಿತ್ತು.

ನಾಪತ್ತೆ ಪ್ರಕರಣಗಳು: 2023ರಿಂದ 2025ರವರೆಗೆ ಜಿಲ್ಲೆಯಲ್ಲಿ 679 ಮಹಿಳೆ ಮತ್ತು ಬಾಲಕಿಯರ ನಾಪತ್ತೆ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಕೆಲವು ಇನ್ನೂ ಪತ್ತೆಯಾಗಿಲ್ಲ. ಇದು ಟ್ರಾಫಿಕಿಂಗ್ ಅಥವಾ ಇತರ ದೌರ್ಜನ್ಯಗಳ ಭಯವನ್ನು ಹೆಚ್ಚಿಸುತ್ತಿದೆ.

ಇತರ ಘಟನೆಗಳು: ಡೌರಿ ಹಿಂಸೆ, ಪತಿ/ಅತ್ತೆ-ಮಾವನಿಂದ ಕೊಲೆ ಆರೋಪಗಳು, ಪೊಲೀಸ್ ಅಧಿಕಾರಿಯಿಂದಲೇ ದೌರ್ಜನ್ಯದ ಆರೋಪಗಳು (ಉದಾ. 2026ರಲ್ಲಿ ಒಂದು ಕೇಸ್) ಮತ್ತು ಬಸ್ ನಿಲ್ದಾಣದಂತಹ ಸಾರ್ವಜನಿಕ ಸ್ಥಳಗಳಲ್ಲಿ ಹರಾಸ್‌ಮೆಂಟ್ ಪ್ರಕರಣಗಳು ಸಾಮಾನ್ಯವಾಗಿವೆ.

ಈ ಕುರಿತು ಈ ದಿನ.ಕಾಮ್‌ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರನ್ನು ಸಂಪರ್ಕಿಸಲಾಗಿದೆಯಾದರೂ ಅವರು ಯಾವುದೇ ವಿಷಯಗಳ ಬಗ್ಗೆ ತಿಳಿಸಿಲ್ಲ.

ಇದನ್ನೂ ಓದಿದ್ದೀರಾ? ಧಾರವಾಡ | ವೈದ್ಯನ ಬರ್ಬರ ಹತ್ಯೆ: ಪತ್ನಿಯೇ ಕೊಂದಿರುವ ಆರೋಪ

ಒಟ್ಟಾರೆ, ಕೊಲೆ ಮತ್ತು ಡಕಾಯಿತಿ ಪ್ರಕರಣಗಳಲ್ಲಿ ಕೆಲವು ಸುಧಾರಣೆ ಕಂಡುಬಂದಿದ್ದರೂ, ಅತ್ಯಾಚಾರ ಹಾಗೂ ಹಲ್ಲೆ ಪ್ರಕರಣಗಳ ಏರಿಕೆ ಸಮಾಜದಲ್ಲಿ ಆತಂಕದ ವಾತಾವರಣ ನಿರ್ಮಿಸಿದೆ. ಮಹಿಳೆಯರ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸಲು ಪೊಲೀಸ್ ಇಲಾಖೆ, ಆಡಳಿತ ಹಾಗೂ ಸಮಾಜದ ಎಲ್ಲ ವರ್ಗಗಳು ಸಮನ್ವಯದಿಂದ ಕಾರ್ಯನಿರ್ವಹಿಸುವ ಅಗತ್ಯವಿದೆ. ಅಪರಾಧ ತಡೆಗೆ ಕಟ್ಟುನಿಟ್ಟಿನ ಕಾನೂನು ಜಾರಿ, ಸಾರ್ವಜನಿಕ ಜಾಗೃತಿ ಮತ್ತು ತ್ವರಿತ ನ್ಯಾಯ ಪ್ರಕ್ರಿಯೆಗೆ ಆದ್ಯತೆ ನೀಡವುದರಿಂದ ಮಾತ್ರ ಮಹಿಳೆಯರಲ್ಲಿ ಭದ್ರತೆಯ ಭಾವನೆ ಮೂಡಿಸಲು ಸಾಧ್ಯ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

Rafi
ರಫಿ ಗುರುಗುಂಟ
+ posts

ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ರಫಿ ಗುರುಗುಂಟ
ರಫಿ ಗುರುಗುಂಟ
ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ದೆಹಲಿಯಲ್ಲಿ ‘ತಿರಂಗಾ’ ಪ್ರತಿಭಟನೆಗೆ ತಡೆ: ದೀಪ್ಕೆ, ನೇಹಾ ಬೋರಾ ಸೇರಿ ಸುಮಾರು 150 ಮಂದಿ ವಶಕ್ಕೆ

‘ಲೆಹರಾ ದೋ ತಿರಂಗಾ’ ಪ್ರತಿಭಟನೆ ಮತ್ತು ಸಂಬಂಧಿತ ಪ್ರದರ್ಶನಗಳ ಸಂದರ್ಭದಲ್ಲಿ ಅಭಿಜೀತ್...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...