ರಾಯಚೂರು |ಭೂಮಿ ಮಂಜೂರಾತಿ, ಹಕ್ಕುಪತ್ರ ವಿತರಣೆಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಧರಣಿ

Date:

Advertisements
  • ʼಅರ್ಜಿ ಸಲ್ಲಿಸಿದ ಎಲ್ಲ ಬಡವರಿಗೆ ಭೂಮಿ ನೀಡಬೇಕುʼ
  • ʼಭೂಮಿ ವಸತಿ ನೀಡದಿದ್ದರೆ, ಮತದಾನ ಬಹಿಷ್ಕಾರʼ

ಸಾಗುವಳಿ ಮಾಡಿಕೊಂಡು ಅರ್ಜಿ ಸಲ್ಲಿಸಿರುವ ಎಲ್ಲರಿಗೂ ಭೂಮಿ ಮಂಜೂರಾತಿ ನೀಡಬೇಕು ಹಾಗೂ ಸರ್ಕಾರಿ ಜಾಗದಲ್ಲಿ ನಗರ ಪ್ರದೇಶವನ್ನೊಳಗೊಂಡಂತೆ ವಾಸಿಸುವವರಿಗೆ ಜಾಗಗಳಿಗೆ ಹಕ್ಕು ಪತ್ರ ನೀಡಬೇಕು ಎಂದು ಒತ್ತಾಯಿಸಿ ಭೂಮಿ ಮತ್ತು ವಸತಿ ಹೋರಾಟ ಸಮಿತಿ ಜಿಲ್ಲಾ ಘಟಕದ ಪದಾಧಿಕಾರಿಗಳು ಸೋಮವಾರ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದಾರೆ.

“ರಾಯಚೂರು ಜಿಲ್ಲೆಯಲ್ಲಿ ಭೂಹೀನ ರೈತರು ಸರ್ಕಾರಿ, ಇನಾಮ, ಗೈರಾಣ(ಗೋಮಾಳ), ಪರಂಪೋಕ್, ಗ್ರಾಮ್‌ಠಾಣ, ಖಾರೀಜ ಖಾತಾ, ಅರಣ್ಯದ ಹೆಸರಿನಲ್ಲಿರುವ ಜಾಗಗಳಲ್ಲಿ ಅನೇಕ ವರ್ಷಗಳಿಂದಲೂ ಸಾಗುಳಿ ಮಾಡುತ್ತಿದ್ದಾರೆ. ಭೂಮಿಯ ಹಕ್ಕು ಪತ್ರಕ್ಕಾಗಿ ಕಾಯುತ್ತಿದ್ದಾರೆ. ಈ ಬಗ್ಗೆ ಸರ್ಕಾರ ನಿರ್ಲಕ್ಷ್ಯವಹಿಸಿದೆ. ಅರ್ಜಿ ಸಲ್ಲಿಸಿದ ಎಲ್ಲ ಬಡವರಿಗೆ ಭೂಮಿ ನೀಡಬೇಕು. ಭೂಮಿ ವಸತಿ ನೀಡದೇ ಇದ್ದರೆ, ಮತದಾನ ಮಾಡುವುದಿಲ್ಲ” ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

“ಭೂಮಿಗಾಗಿ ಅರ್ಜಿ ಸಲ್ಲಿಸಿರುವ ಎಲ್ಲ ಭೂಮಿಗಳನ್ನು ಸರ್ವೆ, ಜಿಪಿಎಸ್ ಮಾಡಿದ ನಂತರ ಬಗರ್ ಹುಕುಂ ಸಮಿತಿ ಮುಂದೆ ಮಂಜೂರಾತಿಗಾಗಿ ಇಡಬೇಕು. ತಹಶೀಲ್ದಾರರು ಒಳಗೊಂಡಂತೆ ಭೂಮಿಯ ವಾಸ್ತವದ ಬಗ್ಗೆ ತಿಳಿದುಕೊಳ್ಳದೇ ಕಚೇರಿಯಿಂದಲೇ ಅಂದಾಜು ಮೇಲೆ ತೀರ್ಮಾನಿಸುತ್ತಿದ್ದಾರೆ. ಕೂಡಲೇ ಇದನ್ನು ಸರಿಪಡಿಸಬೇಕು” ಎಂದು ಒತ್ತಾಯಿಸಿದರು.

Advertisements
ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಶಾಲಾ ಬಸ್‌ನಲ್ಲಿ ಬೆಂಕಿ; 50ಕ್ಕೂ ಹೆಚ್ಚು ಮಕ್ಕಳು ಪಾರು

“ಈ ಪ್ರದೇಶಲ್ಲಿ ಸಾಗುವಳಿ ಮಾಡುತ್ತಿರುವವರು ಹಾಗೂ ವಾಸವಿರುವವರನ್ನು ಒಕ್ಕಲೆಬ್ಬಿಸಬಾರದು. ಭೂಮಿ, ವಸತಿ ಸಮಸ್ಯೆ ಪರಿಹರಿಸಲು ಜಿಲ್ಲಾ ಮಟ್ಟದ ಹೋರಾಟಗಾರರನ್ನು ಒಳಗೊಂಡಂತೆ ಅಧಿಕಾರಿಗಳ ಸಭೆ ನಡೆಸಬೇಕು” ಎಂದು ಆಗ್ರಹಿಸಿದರು.

ಸಮಿತಿಯ ಸಂಚಾಲಕ ಮಾರೆಪ್ಪ ಹರವಿ, ಆಂಜನೇಯ ಕುರಬದೊಡ್ಡಿ, ಖಾಜಾ ಅಸ್ಲಂ ಅಹಮ್ಮದ್, ಹನುಮಂತ ಗುಂಜಹಳ್ಳಿ, ನರಸಿಂಗ ಬಂಗಾರಿ, ರಂಗರೆಡ್ಡಿ ಜೇಗರಕಲ್ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X