ರಾಯಚೂರು | ವಿವಿಧ ಮೂಲಭೂತ ಸೌಕರ್ಯಗಳನ್ನು ಈಡೇರಿಸಲು ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ

Date:

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕು ಹಟ್ಟಿ ಚಿನ್ನದ ಗಣಿ ಪಟ್ಟಣಕ್ಕೆ ರಸ್ತೆ, ನೀರು, ನೈರ್ಮಲ್ಯ ವಿದ್ಯುತ್ ದೀಪಗಳು ಸೇರಿದಂತೆ ವಿವಿಧ ಹಕ್ಕೊತ್ತಾಯಗಳನ್ನು ಈಡೇರಿಸಲು ಆಗ್ರಹಿಸಿ ಜಂಟಿ ಸಂಘಟನೆಗಳ ಮುಖಂಡರು, ಬುಡ್ಡೇಕಲ್ ಚೌಕ್‌ನಿಂದ ಪಟ್ಟಣ ಪಂಚಾಯತಿವರೆಗೆ ಪ್ರತಿಭಟನಾ ರ್‍ಯಾಲಿ ಮಾಡಿ, ಅನಿರ್ದಿಷ್ಟಾವಧಿ ಧರಣಿ ನಡೆಸಿದರು.

- Advertisement -

ಪಟ್ಟಣಕ್ಕೆ ಕುಡಿಯಲು ನೀರು, ಹೈಟೆಕ್ ಶೌಚಾಲಯ, ಪಟ್ಟಣದ ಜತ್ತಿ ಕಾಲೋನಿ ರಸ್ತೆ ದುರಸ್ಥಿ, ಪದವಿ, ಐಟಿಐ, ಡಿಪ್ಲೊಮೊ ಕಾಲೇಜು ಮಂಜೂರು, ಕಾಮ್ರೇಡ್ ಅಮರಗುಂಡಪ್ಪ ಬಸ್ ನಿಲ್ದಾಣದ ಜಾಗ ಒತ್ತುವರಿ, ಸರಿಯಾದ ಕಸ ವಿಲೇವಾರಿ, ಪಟ್ಟಣಕ್ಕೆ ರುದ್ರಭೂಮಿ, ಗ್ರಂಥಾಲಯ, ಪಾರ್ಕ್ ಮಂಜೂರು ಮಾಡಲು ಪ್ರತಿಭಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ನಗರದಲ್ಲಿ ನಡೆದ ಬ್ರಿಡ್ಜ್ ಕಾಮಗಾರಿ ಎಸ್ಟಿಮೇಟ್‌ನಲ್ಲಿ ಈ ರಸ್ತೆಯನ್ನು ನಿರ್ಮಾಣ ಮಾಡಬೇಕೆಂದು ಇದ್ದರೂ ಸಹ ರಸ್ತೆ ನಿರ್ಮಾಣವಾಗಿಲ್ಲ. ಈ ಕೂಡಲೇ ರಸ್ತೆಯನ್ನು ಸಹ ಮಾಡಿ ಜನರ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು. ಪ್ಲಾಸ್ಟಿಕ್, ಇತರೆ ವಸ್ತುಗಳಿಂದ ಮಲಿನವಾಗಿದ್ದು, ಕೂಡಲೇ ಈ ಕಸ ವಿಲೇವಾರಿ ಘಟಕ ನಿರ್ಮಿಸಿ ಸರಿಯಾದ ಸಮಯಕ್ಕೆ ಕಸ ವಿಲೇವಾರಿ ಮಾಡಬೇಕು ಎಂದು ಆಗ್ರಹಿಸಿದರು.

ಪಟ್ಟಣದ ಕಾಮ್ರೇಡ್ ಅಮರಗುಂಡಪ್ಪ ಬಸ್ ನಿಲ್ದಾಣ(ವಿಲೇಜ್ ಬಸ್ ಸ್ಟ್ಯಾಂಡ್) ದ ಜಾಗ ಒತ್ತುವರಿಯಾಗಿ ಬಸ್‌ಗಳು ನಿಲ್ಲಿಸಲು ಮತ್ತು ಸಾರ್ವಜನಿಕರು ನಿಲ್ಲಲು ಜಾಗವಿಲ್ಲದಂತಾಗಿದೆ. ಈಗಾಗಲೇ ಕೋರ್ಟ್ ಒತ್ತುವರಿ ಜಾಗ ತೆರವುಗೊಳಿಸಲು ಆದೇಶ ನೀಡಿ ದಶಕಗಳು ಕಳೆದರೂ ತೆರವುಗೊಳಿಸಿಲ್ಲ. ಆದ್ದರಿಂಲೇ ಈ ಕೂಡಲೇ ಒತ್ತುವರಿಯಾದ ಜಾಗ ತೆರವುಗೊಳಿಸಬೇಕು. ದೇಶಕ್ಕೆ ಸ್ವಾತಂತ್ರ್ಯ ಬಂದು 76 ವರ್ಷಗಳು ಕಳೆದರೂ ಪಟ್ಟಿಯಲ್ಲಿ ಸತ್ತ ಹೆಣಗಳನ್ನು ಹೂಳಲು ರುದ್ರಭೂಮಿಯೂ ಇಲ್ಲದಂತಾಗಿದೆ. ಕೂಡಲೇ ರುದ್ರಭೂಮಿ ಮಂಜೂರು ಮಾಡಬೇಕು. ಹಟ್ಟಿ ಪಟ್ಟಣಕ್ಕೆ ಪದವಿ ಕಾಲೇಜು ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.

WhatsApp Image 2024 09 06 at 1.17.39 PM 1

ಹಟ್ಟಿ ಪಟ್ಟಣದಲ್ಲಿ ಮಟಕಾ, ಗಾಂಜಾ, ಇಸ್ಪೀಟ್, ಕ್ರಿಕೆಟ್ ಬೆಟ್ಟಿಂಗ್ ದಂಧೆ ಹೆಚ್ಚಾಗಿದ್ದು, ಹಾದಿ ಬೀದಿಯಲ್ಲಿ ಮಟಕಾ ದಂಧೆ ನಿರ್ಭಯವಾಗಿ ನಡೆಯುತ್ತಿದ್ದರೂ ಆಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಜಾಣ ಕುರುಡು ಪ್ರದರ್ಶನ ಮಾಡುತ್ತಿದ್ದಾರೆ. ಸಂಪೂರ್ಣವಾಗಿ ವಿದ್ಯಾರ್ಥಿ ಯುವಜನ ರೈತರು ಕಾರ್ಮಿಕರು ಸಂಪೂರ್ಣವಾಗಿ ಇದಕ್ಕೆ ಬಲಿಯಾಗಿ ಬದುಕನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಹಟ್ಟಿ ಪಟ್ಟಣದಲ್ಲಿ ಎಲ್ಲ ಸಿಎ ಸೈಟುಗಳನ್ನು ಒತ್ತುವರಿ ಮಾಡಿದ್ದು, ಕೂಡಲೇ ಅವುಗಳನ್ನು ತೆರವುಗೊಳಿಸಿ ನಾಗರಿಕ ಸೌಲಭ್ಯಕ್ಕೆ ಅನುಕೂಲವಾಗುವ ಗ್ರಂಥಾಲಯ ಪಾರ್ಕ್ ಭವನಗಳನ್ನು ನಿರ್ಮಿಸಬೇಕು. ಹಟ್ಟಿಯ ಸರ್ವಾಂಗೀಣ ಅಭಿವೃದ್ಧಿಗೆ ಮುಂದಾಗಬೇಕು ಎಂದು ಜಂಟಿ ಸಂಘಟನೆಗಳ ಮುಖಂಡರು ಒತ್ತಾಯಿಸಿದರು. ನಿರ್ಲಕ್ಷ್ಯ ತೋರಿದರೆ ಹಟ್ಟಿ ಪಟ್ಟಣದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆ ನಡೆಸಲಾಗುವುದೆಂದು ಎಚ್ಚರಿಸಿದರು.

ಇದನ್ನು ಓದಿದ್ದೀರಾ? ಮಂಗಳೂರು | ಹಿರಿಯ ತುಳು ಕಲಾವಿದ ದೇವದಾಸ್ ಕಾಪಿಕಾಡ್‌ರನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಜೆಪಿ!

ಈ ಸಂದರ್ಭದಲ್ಲಿ ಎಸ್ಎಫ್ಐ ಜಿಲ್ಲಾಧ್ಯಕ್ಷ ರಮೇಶ ವೀರಾಪೂರು, ಅಮರೇಶ ಗುರಿಕಾರ್, ನಿಂಗಪ್ಪ ಎಂ, ಕೆಪಿಆರ್ ಎಸ್ ಮುಖಂಡ ಹನುಮಂತ ಪಲಕನಮರಡಿ, ಮಹ್ಮದ್ ಹನೀಫ್, ಅಲ್ಲಾಭಕ್ಷ, ದಾವೂದ್, ಡಿವೈಎಫ್ಐ ಜಿಲ್ಲಾ ಮುಖಂಡ ಚೆನ್ನಬಸವ ಅಂಬೇಡ್ಕರ್ ನಗರ, 7ನೇ ವಾರ್ಡ್ ಅದ್ಯಕ್ಷ ಪಯಾಜ್ ಖುರೇಷಿ, ಅಬ್ದುಲ್ ರೌಫ್, ರಿಯಾಜ್ ಖುರೇಶಿ, ಜನವಾದಿ ಮಹಿಳಾ ಸಂಘಟನೆಯ ಮುಖಂಡರಾದ, ಅಂಬಮ್ಮ, ಅಮಿನಮ್ಮ, ರಾಜಬೀ, ನಿಂಗಮ್ಮ , ದಾದಾ ಬ್ಯಾಂಕ್, ಕಟ್ಟಡ ಕಾರ್ಮಿಕರ ಅಧ್ಯಕ್ಷ ಹಾಜಿಬಾಬಾ, ಬಂದೆನವಾಜ್, ಖಾಜಾ ಸಾಬ್, ಶಂಶು ಮೇಸನ್, ರಾಜಾಸಾಬ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...