ರಾಯಚೂರು | ಕುಡುಕರ ಅಡ್ಡವಾದ ಇಂದಿರಾ ಕ್ಯಾಂಟಿನ್; ದೊರೆಯುವುದೇ ಉದ್ಘಾಟನೆ ಭಾಗ್ಯ?

Date:

ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದ ಪಿಡಿಬ್ಲ್ಯೂಡಿ ಕಚೇರಿ ಆವರಣದಲ್ಲಿರುವ ಇಂದಿರಾ ಕ್ಯಾಂಟಿನ್ ನಿರ್ವಹಣೆಯಿಲ್ಲದೆ ಕೆಟ್ಟುನಿಂತಿದ್ದು, ಮಲಮೂತ್ರ ವಿಸರ್ಜನೆಗೆ ಹಾಗೂ ಕುಡುಕರ ತಾಣವಾಗಿ ಮಾರ್ಪಟ್ಟಿದೆ ಎಂದು ಹೇಳುತ್ತಾರೆ ಸ್ಥಳೀಯರು.

- Advertisement -

ಒಂದು ಹೊತ್ತಿನ ಊಟಕ್ಕೆ ಪರದಾಡುವ ಬಡವರನ್ನು ದೃಷ್ಟಿಯಲ್ಲಿರಿಸಿಕೊಂಡು ಕಾಂಗ್ರೆಸ್ ಸರ್ಕಾರ ಇಂದಿರಾ ಕ್ಯಾಂಟಿನ್ ಜಾರಿಗೆ ತಂದ ಐತಿಹಾಸಿಕ ಯೋಜನೆಯಾಗಿದೆ. ಆದರೆ ಕೆಲವು ಕಡೆ ಅರ್ಧ ಕಾಮಗಾರಿಗೆ ಕುಂಠಿತಗೊಂಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಕ್ಯಾಂಟಿನ್ ಕಟ್ಟಡ ಕಾಮಗಾರಿಯು ಬಹುತೇಕ ಪೂರ್ಣಗೊಂಡಿದೆ. ಆದರೆ, ಇತರೆ ಕಾಮಗಾರಿಗಳು ನಿಧಾನಗತಿಯಲ್ಲಿ ನಡೆಯುತ್ತಿರುವುದರಿಂದ ಇಂದಿರಾ ಕ್ಯಾಂಟಿನ್ ಯಾವಾಗ ತಮ್ಮ ಹೊಟ್ಟೆ ತುಂಬಿಸುತ್ತದೆಂಬ ಕಾತುರತೆಯಲ್ಲಿದ್ದಾರೆ ಇಲ್ಲಿನ ಜನಸಾಮಾನ್ಯರು.

1000074869

ಸ್ಥಳೀಯ ಹೋರಾಟಗಾರ ಮೇಷಕ್ ದೊಡ್ಮನಿ ಮಾತನಾಡಿ, “ಸುಮಾರು ದಿನಗಳಿಂದ ಕಾಮಗಾರಿ ಅರ್ಧಕ್ಕೆ ನಿಂತಿದೆ. ಇಂದಿರಾ ಕ್ಯಾಂಟಿನ್ ನಿರ್ವಹಣೆಯಿಲ್ಲದೆ ಸ್ಥಗಿತಗೊಂಡಿದ್ದು, ಈ ಇಂದಿರಾ ಕ್ಯಾಂಟಿನ್ ಕುರಿತು ಯಾರೂ ಕೇಳುವವರು, ಹೇಳುವವರೇ ಇಲ್ಲದಂತಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

“ತಾಲೂಕಿನ ಕಾಂಗ್ರೆಸ್ ಪಕ್ಷದ ಶಾಸಕ ಹಂಪಯ್ಯ ನಾಯಕ ಅವರು ಇಂದಿರಾ ಕ್ಯಾಂಟಿನ್ ಪ್ರಾರಂಭಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತಿರಾಗಿದ್ದರು. ಏಕಾಏಕಿ ಕಾಮಗಾರಿ ಮೊಟಕುಗೊಂಡಿದೆ. ಸಂಬಂಧಪಟ್ಟ ಇಲಾಖೆ ಎಚ್ಚೆತ್ತುಕೊಂಡು ಆದಷ್ಟು ಬೇಗ ಪ್ರಾರಂಭಿಸಬೇಕು” ಎಂದರು.

ಕಾಲೇಜು ವಿದ್ಯಾರ್ಥಿ ಬಸವರಾಜ್ ಮಾತನಾಡಿ, “ನಿತ್ಯ ಹಳ್ಳಿಗಳಿಂದ ಬೆಳಿಗ್ಗೆಯೇ ಪಟ್ಟಣಕ್ಕೆ ಬಂದಿರುತ್ತೇವೆ ಸರಿಯಾಗಿ ಬಸ್ ವ್ಯವಸ್ಥೆಯೂ ಇಲ್ಲದ ಕಾರಣ ಖಾಸಗಿ ವಾಹನಗಳ ಮೂಲಕ ಪಟ್ಟಣ ಸೇರಿರುತ್ತೇವೆ. ಹೋಟೆಲ್‌ಗಳಲ್ಲಿ ಊಟ, ತಿಂಡಿ ಮಾಡಲು ಹೋದರೆ ನೂರಾರು ರೂಪಾಯಿ ಖರ್ಚಾಗುತ್ತದೆ. ಹಾಗಾಗಿ ಇಂದಿರಾ ಕ್ಯಾಂಟಿನ್ ಪ್ರಾರಂಭವಾದರೆ ಕಡಿಮೆ ಖರ್ಚಿನಲ್ಲಿ ಉತ್ತಮ ಊಟ ಸಿಗುತ್ತದೆ. ಸಾವಿರಾರು ಸಂಖ್ಯೆಯಲ್ಲಿ ಮಕ್ಕಳು, ಕಾರ್ಮಿಕರು, ಬೀದಿಬದಿ ವ್ಯಾಪಾರಸ್ಥರು ಊಟ ಮಾಡುತ್ತಾರೆ” ಎಂದರು.

ಸ್ಥಳೀಯ ಪತ್ರಕರ್ತ ಸುಂದರ ಮಾತನಾಡಿ, “ಇಂದಿರಾ ಕ್ಯಾಂಟಿನ್ ಕಟ್ಟಡ ನಿರ್ಮಾಣ ಪ್ರಾರಂಭ ಮಾಡುವ ಮಟ್ಟಿಗೆ ವೇಗ ಪಡೆದುಕೊಂಡಿತು. ಆದರೆ, ಕಾಮಗಾರಿ ಸ್ಥಗಿತಗೊಂಡು ಹಲವು ದಿನಗಳು ಕಳೆದರೂ ಕೂಡಾ ಕಾರಣ ಮಾತ್ರ ನಿಗೂಢವಾಗಿದೆ. ಕಟ್ಟಡ ಮಾತ್ರ ಪೂರ್ಣಗೊಂಡಿದೆ. ಅತೀ ಶೀಘ್ರದಲ್ಲಿ ಉದ್ಘಾಟನೆಯಾಗಬೇಕು. ಇಲ್ಲದಿದ್ದರೆ ಅದು ಸಾರ್ವಜನಿಕರ ಮಲ ಮೂತ್ರ ವಿಸರ್ಜನೆಗೆ ತಾಣವಾಗುತ್ತದೆ” ಇದರ ಬಗ್ಗೆ ಶಾಸಕರ ಗಮನಕ್ಕೆ ತಂದು ಆದಷ್ಟು ಬೇಗ ಚಾಲ್ತಿ ಮಾಡುವುದಕ್ಕೆ ಪ್ರಯತ್ನಿಸಬೇಕು” ಎಂದರು.

1000074899 1

“ಇಂದಿರಾ ಕ್ಯಾಂಟೀನ್ ಜಿಲ್ಲೆಯ ಮುಖ್ಯ ರಸ್ತೆಗೆ ಹೊಂದಿಕೊಂಡಿದ್ದು, ನಗರದ ಮುಖ್ಯ ಕೆಲವು ಕಚೇರಿಗಳು, ಖಾಸಗಿ ಕಾಲೇಜುಗಳು ಇರುವುದರಿಂದ ಸದಾ ಜನದಟ್ಟಣೆಯಿಂದ ಕೂಡಿರುತ್ತದೆ. ಕ್ಯಾಂಟಿನ್‌ ಬಹುತೇಕ ಜನರ ಆಹಾರದ ಬಯಕೆಯನ್ನು ತೀರಿಸಲು ಸೂಕ್ತ ಸ್ಥಳ ಇದಾಗಿದೆ. ಇಂದಿರಾ ಕ್ಯಾಂಟಿನ್ ಪ್ರಾರಂಭವಾದರೆ ತುಂಬಾ ಅನುಕೂಲವಾಗುತ್ತದೆ” ಎಂಬುದು ಸ್ಥಳೀಯರ ಆಶಯವಾಗಿದೆ.

Rafi
ರಫಿ ಗುರುಗುಂಟ
+ posts

ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ರಫಿ ಗುರುಗುಂಟ
ರಫಿ ಗುರುಗುಂಟ
ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...