ಸಮಾಜ ಕಲ್ಯಾಣ ಇಲಾಖೆಯಿಂದ ನಡೆಸುವ ಡಾ ಬಿ ಆರ್ ಅಂಬೇಡ್ಕರ್ ವೃತ್ತಿಪರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿಯರನ್ನು ಏಕಾಏಕಿ ಹಾಸ್ಟೆಲ್‌ನಿಂದ ಹೊರಹಾಕುತ್ತಿರುವುದನ್ನು ಖಂಡಿಸಿ ಎಐಡಿಎಸ್‌ಒ ಸಂಘಟನೆ ನೇತೃತ್ವದಲ್ಲಿ ರಾಯಚೂರು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
“ಮೇ 25ರೊಳಗೆ ಎಲ್ಲ ವಿದ್ಯಾರ್ಥಿನಿಯರು ವಸತಿ ನಿಲಯವನ್ನು ತೊರೆಯಬೇಕೆಂದು ವಸತಿನಿಲಯದ ಮೇಲ್ವಿಚಾರಕಿ ಸುತ್ತೋಲೆ ಹೊರಡಿಸಿರುವುದು ವಿದ್ಯಾರ್ಥಿ ವಿರೋಧಿ ಕ್ರಮವಾಗಿದೆ. ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಒಂದು ವಾರದಲ್ಲಿ ಸಮಸ್ಯೆ ಪರಿಹರಿಸಲು ಪ್ರಯತ್ನಿಸುವುದಾಗಿ ಹೇಳಿದ್ದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸಮಸ್ಯೆ ಪರಿಹರಿಸಲು ಮುಂದಾಗಿಲ್ಲ” ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆರೋಪಿಸಿದರು.
ಕಳೆದ ಎರಡ್ಮೂರು ವರ್ಷಗಳ ಹಿಂದೆ ವಸತಿ ನಿಲಯಕ್ಕೆ ಅರ್ಜಿ ಹಾಕಿದ್ದ ಪ್ರತಿಯೊಬ್ಬ ವಿದ್ಯಾರ್ಥಿನಿಯರಿಗೆ ವಸತಿ ನಿಲಯದಲ್ಲಿ ಅವಕಾಶ ನೀಡಬೇಕೆಂಬ ಸರ್ಕಾರದ ನಿಯಮದಂತೆ ಅರ್ಜಿ ಹಾಕಿ ವಸತಿ ನಿಲಯಕ್ಕೆ ಸೇರ್ಪಡೆಯಾಗಿದ್ದಾರೆ. ಒಟ್ಟು 240 ಮಂದಿ ವಿದ್ಯಾರ್ಥಿನಿಯರಲ್ಲಿ 130 ಮಂದಿ ವಿದ್ಯಾರ್ಥಿನಿಯರನ್ನು ಮ್ಯಾನೇಜ್‌ಮೆಂಟ್ ಕೋಟಾದ ಅಡಿಯಲ್ಲಿ ವಿದ್ಯಾರ್ಥಿನಿಯರ ಶಿಷ್ಯ ವೇತನವನ್ನು ಬರಿಸಿಕೊಂಡು ಇವರನ್ನು ಹಾಸ್ಟೆಲ್‌ಗಳಲ್ಲಿ ಉಳಿಸಿಕೊಂಡಿದ್ದಾರೆ. ಆದರೆ ವಿದ್ಯಾರ್ಥಿ ವೇತನ ಬರುತ್ತಿಲ್ಲ ಎಂದು ಹೇಳಿ ಅವರನ್ನು ಈ ರೀತಿ ಏಕಾಏಕಿ ಹೊರಹಾಕುತ್ತಿರುವುದು ಅತ್ಯಂತ ಹೀನಾಯ ವಿದ್ಯಾರ್ಥಿವಿರೋಧಿ ಕ್ರಮವಾಗಿದೆ.
ವಿದ್ಯಾರ್ಥಿಯರು ಬಡ, ಹಿಂದುಳಿದ, ಕೂಲಿ ಕಾರ್ಮಿಕರ ಮಕ್ಕಳಾಗಿದ್ದು, ದೂರದ ತಾಲೂಕುಗಳಿಂದ ಹಾಗೂ ಜಿಲ್ಲೆಗಳಿಂದ ಬಂದು ಇಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಈ ರೀತಿಯಾಗಿ ಹೊರ ಹಾಕುತ್ತಿರುವುದು ಅವರ ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸಿದಂತಾಗುತ್ತದೆ. ಕೂಡಲೇ ವಿದ್ಯಾರ್ಥಿನಿಯರ ಸಮಸ್ಯೆಯನ್ನು ಪರಿಹರಿಸಲು ತುರ್ತುಕ್ರಮ ವಹಿಸಬೇಕು” ಎಂದು ಮನವಿ ಮಾಡಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ಹೋರಾಟದ ಚಿಂತನೆಯಿಲ್ಲದ ಸಾಹಿತ್ಯ ಉಳಿಯದು : ಗಂಧರ್ವ ಸೇನಾ
ಈ ಸಂದರ್ಭದಲ್ಲಿ ಸಂಘಟನೆ ಅಧ್ಯಕ್ಷ ಹಯ್ಯಾಳಪ್ಪ ಸೇರಿದಂತೆ ಬಹುತೇಕ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ವರದಿ : ಹಫೀಜುಲ್ಲ
