ರಾಯಚೂರು | ವಸತಿನಿಲಯ ತೊರೆಯುವಂತೆ ಸೂಚನೆ; ಡಿಸಿ ಕಚೇರಿ ಎದುರು ವಿದ್ಯಾರ್ಥಿನಿಯರ ಪ್ರತಿಭಟನೆ

Date:

ಸಮಾಜ ಕಲ್ಯಾಣ ಇಲಾಖೆಯಿಂದ ನಡೆಸುವ ಡಾ ಬಿ ಆರ್ ಅಂಬೇಡ್ಕರ್ ವೃತ್ತಿಪರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿಯರನ್ನು ಏಕಾಏಕಿ ಹಾಸ್ಟೆಲ್‌ನಿಂದ ಹೊರಹಾಕುತ್ತಿರುವುದನ್ನು ಖಂಡಿಸಿ ಎಐಡಿಎಸ್‌ಒ ಸಂಘಟನೆ ನೇತೃತ್ವದಲ್ಲಿ ರಾಯಚೂರು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

“ಮೇ 25ರೊಳಗೆ ಎಲ್ಲ ವಿದ್ಯಾರ್ಥಿನಿಯರು ವಸತಿ ನಿಲಯವನ್ನು ತೊರೆಯಬೇಕೆಂದು ವಸತಿನಿಲಯದ ಮೇಲ್ವಿಚಾರಕಿ ಸುತ್ತೋಲೆ ಹೊರಡಿಸಿರುವುದು ವಿದ್ಯಾರ್ಥಿ ವಿರೋಧಿ ಕ್ರಮವಾಗಿದೆ. ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಒಂದು ವಾರದಲ್ಲಿ ಸಮಸ್ಯೆ ಪರಿಹರಿಸಲು ಪ್ರಯತ್ನಿಸುವುದಾಗಿ ಹೇಳಿದ್ದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸಮಸ್ಯೆ ಪರಿಹರಿಸಲು ಮುಂದಾಗಿಲ್ಲ” ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆರೋಪಿಸಿದರು.

ಕಳೆದ ಎರಡ್ಮೂರು ವರ್ಷಗಳ ಹಿಂದೆ ವಸತಿ ನಿಲಯಕ್ಕೆ ಅರ್ಜಿ ಹಾಕಿದ್ದ ಪ್ರತಿಯೊಬ್ಬ ವಿದ್ಯಾರ್ಥಿನಿಯರಿಗೆ ವಸತಿ ನಿಲಯದಲ್ಲಿ ಅವಕಾಶ ನೀಡಬೇಕೆಂಬ ಸರ್ಕಾರದ ನಿಯಮದಂತೆ ಅರ್ಜಿ ಹಾಕಿ ವಸತಿ ನಿಲಯಕ್ಕೆ ಸೇರ್ಪಡೆಯಾಗಿದ್ದಾರೆ. ಒಟ್ಟು 240 ಮಂದಿ ವಿದ್ಯಾರ್ಥಿನಿಯರಲ್ಲಿ 130 ಮಂದಿ ವಿದ್ಯಾರ್ಥಿನಿಯರನ್ನು ಮ್ಯಾನೇಜ್‌ಮೆಂಟ್‌ ಕೋಟಾದ ಅಡಿಯಲ್ಲಿ ವಿದ್ಯಾರ್ಥಿನಿಯರ ಶಿಷ್ಯ ವೇತನವನ್ನು ಬರಿಸಿಕೊಂಡು ಇವರನ್ನು ಹಾಸ್ಟೆಲ್‌ಗಳಲ್ಲಿ ಉಳಿಸಿಕೊಂಡಿದ್ದಾರೆ. ಆದರೆ ವಿದ್ಯಾರ್ಥಿ ವೇತನ ಬರುತ್ತಿಲ್ಲ ಎಂದು ಹೇಳಿ ಅವರನ್ನು ಈ ರೀತಿ ಏಕಾಏಕಿ ಹೊರಹಾಕುತ್ತಿರುವುದು ಅತ್ಯಂತ ಹೀನಾಯ ವಿದ್ಯಾರ್ಥಿವಿರೋಧಿ ಕ್ರಮವಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ವಿದ್ಯಾರ್ಥಿಯರು ಬಡ, ಹಿಂದುಳಿದ, ಕೂಲಿ ಕಾರ್ಮಿಕರ ಮಕ್ಕಳಾಗಿದ್ದು, ದೂರದ ತಾಲೂಕುಗಳಿಂದ ಹಾಗೂ ಜಿಲ್ಲೆಗಳಿಂದ ಬಂದು ಇಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಈ ರೀತಿಯಾಗಿ ಹೊರ ಹಾಕುತ್ತಿರುವುದು ಅವರ ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸಿದಂತಾಗುತ್ತದೆ. ಕೂಡಲೇ ವಿದ್ಯಾರ್ಥಿನಿಯರ ಸಮಸ್ಯೆಯನ್ನು ಪರಿಹರಿಸಲು ತುರ್ತುಕ್ರಮ ವಹಿಸಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಹೋರಾಟದ ಚಿಂತನೆಯಿಲ್ಲದ ಸಾಹಿತ್ಯ ಉಳಿಯದು : ಗಂಧರ್ವ ಸೇನಾ

ಈ ಸಂದರ್ಭದಲ್ಲಿ ಸಂಘಟನೆ ಅಧ್ಯಕ್ಷ ಹಯ್ಯಾಳಪ್ಪ ಸೇರಿದಂತೆ ಬಹುತೇಕ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

ವರದಿ : ಹಫೀಜುಲ್ಲ

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಫಲಿತಾಂಶಕ್ಕೂ ಪೆಟ್ರೋಲ್, ಡೀಸೆಲ್ ದರ ಏರಿಕೆಗೂ ಸಂಬಂಧವಿಲ್ಲ: ಸಿಎಂ ಸಿದ್ದರಾಮಯ್ಯ

“ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವು ಇದ್ದದ್ದೇ, ಪೆಟ್ರೋಲ್ ಬೆಲೆ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ...

ರಾಯಚೂರು | ಉತ್ತರ ಕರ್ನಾಟಕದ ಭಾಗದಲ್ಲಿ ಗಮಕ ಕಾವ್ಯವನ್ನು ಉಳಿಸಿ ಬೆಳೆಸುವ ಕಾರ್ಯವಾಗಬೇಕು: ಡಾ ಎ ವಿ ಪ್ರಸನ್ನ

ಉತ್ತರ ಕರ್ನಾಟಕದ ಭಾಗದಲ್ಲಿ ಹುಟ್ಟಿಕೊಂಡಿದ್ದ ಗಮಕ ಕಾವ್ಯ ಇಂದು ದಕ್ಷಿಣ ಕರ್ನಾಟಕದಲ್ಲಿ ಬೆಳೆಯುತ್ತಿದೆ....

ಬೆಂಗಳೂರು | ಸಮಸ್ಯೆಗಳ ಬಗ್ಗೆ ಮನಮುಟ್ಟುವಂತೆ ಬರೆದು ಜನರಿಗೆ ತಲುಪಿಸುವುದು ಅತ್ಯವಶ್ಯಕ; ಕೆ ಸೋಮಶೇಖರ್

"ಜನರ ಸಮಸ್ಯೆಗಳಿಗೆ ಧ್ವನಿಯಾಗುವ ಸತ್ವಯುತ ಲೇಖನಗಳು, ಬರಹಗಳು ಸಮಾಜದ ಬದಲಾವಣೆಯಲ್ಲಿ ಅತ್ಯಂತ...

ವಿಜಯಪುರ | ಪೆಟ್ರೋಲ್ ಡಿಸೇಲ್ ದರ ಹೆಚ್ಚಳ; ದರ ಇಳಿಕೆಗೆ ಡಿವೈಎಫ್‌ಐ ಆಗ್ರಹ

ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಗಳನ್ನು ಏರಿಕೆ ಮಾಡಿರುವುದು ಜನಸಾಮಾನ್ಯರಿಗೆ...