ರಾಯಚೂರು | ಪ್ರವಾದಿ ಮಹಮ್ಮದ್‌ರಿಗೆ ಅವಹೇಳನ; ಶಾಸಕ ಯತ್ನಾಳ್‌ ಬಂಧನಕ್ಕೆ ಒತ್ತಾಯ

Date:

ಪ್ರವಾದಿ ಮಹಮ್ಮದ್‌ ಪೈಗಂಬರ್ ಅವರ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಕೂಡಲೇ ಬಂಧಿಸಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ‌ (ಎಸ್‌ಡಿಪಿಐ) ಪಕ್ಷ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿತು.

- Advertisement -

ಬಿಜೆಪಿ ಶಾಸಕ ಯತ್ನಾಳ್, ಮುಸ್ಲಿಂ ಸಮುದಾಯದ ವಿರುದ್ಧ ಅನೇಕ ಬಾರಿ ಅವಹೇಳನಕಾರಿ ಹೇಳಿಕೆ ನೀಡಿ, ಪ್ರವಾದಿ ಅವರನ್ನು ನಿಂದಿಸುತ್ತಿದ್ದಾರೆ. ನಾವು ಗೌರವಿಸುವ ಪ್ರವಾದಿ ಅವರ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿ ಸಮುದಾಯದ ಭಾವನೆಗೆ ಧಕ್ಕೆ ತಂದಿದ್ದಾರೆ. ಯತ್ನಾಳ್ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಕೂಡಲೇ ಅವರನ್ನು ಬಂಧಿಸಬೇಕೆಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಯತ್ನಾಳ ಅವರು ಒಂದು ಸಮುದಾಯದ ವಿರುದ್ಧ ಪದೇ ಪದೇ ನಾಲಿಗೆ ಹರಿಬಿಟ್ಟು ಕೋಮು ದ್ವೇಷಕ್ಕೆ ಪ್ರಚೋದನೆ ನೀಡುತ್ತಿದ್ದಾರೆ. ಏಪ್ರಿಲ್ 13 ರಂದು ಲಿಂಗಸುಗೂರು ತಾಲೂಕಿನಲ್ಲಿ ಬಜರಂಗದಳ ಹಾಗೂ ಶ್ರೀರಾಮಸೇನೆ ಆಯೋಜಿಸಿರುವ ಶ್ರೀ ರಾಮನವಮಿಗೆ ಆಗಮಿಸುತ್ತಿರುವ ಶಾಸಕ ಯತ್ನಾಳ ಹಾಗೂ ಪ್ರಮೋದ್ ಮುತಾಲಿಕ್ ಅವರ ಅನುಮತಿ ರದ್ದುಪಡಿಸಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ನಾಗ ಮೋಹನ್‌ದಾಸ್ ಏಕ ಸದಸ್ಯ ವಿಚಾರಣಾ ಸಮಿತಿ ಸಂವಿಧಾನ ಬಾಹಿರ: ಮಹೇಂದ್ರ ಕುಮಾರ್

ಶಾಂತಿ ಸೌಹಾರ್ದತೆಗೆ ಹೆಸರುವಾಗಿರುವ ಲಿಂಗಸುಗೂರು ತಾಲೂಕಿನಲ್ಲಿ ಪ್ರಚೋದನಾತ್ಮಕ ಹೇಳಿಕೆ ನೀಡಿ ಕೋಮುಗಲಭೆ ಏನಾದರೂ ಸಂಭವಿಸಿದಲ್ಲಿ ಪೊಲೀಸ್ ಇಲಾಖೆಯೇ ನೇರ ಹೊಣೆ ಎಂದು ಪಕ್ಷ ಎಚ್ಚರಿಕೆ ನೀಡಿದೆ.

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಮುಖಂಡ ತೌಸೀಫ್ ಅಹ್ಮದ್, ಸೈಯದ್ ಇರ್ಫಾನ್ ಮತ್ತು ಶೇಕ್ ದಾವೂದ್ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...