ರಾಯಚೂರು | ವಿಶೇಷಚೇತನರಿಗೆ ಅವಮಾನ; ಜಿಲ್ಲಾಧಿಕಾರಿ ಕ್ಷಮೆಯಾಚಿಸಲು ಒತ್ತಾಯ

Date:

ರಾಯಚೂರು ನಗರದ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನಡೆದ ವಿಶ್ವ ವಿಶೇಷಚೇತನರ ದಿನಾಚರಣೆ ಕಾರ್ಯಕ್ರಮದ ವೇದಿಕೆ ಹತ್ತಲು ಕೃತಕ ರ್‍ಯಾಂಪ್‌ ಅಳವಡಿಸದೇ ವೇದಿಕೆಯ ಕೆಳಭಾಗದಲ್ಲಿ ಸನ್ಮಾನ ಮಾಡುವ ಮೂಲಕ ವಿಶೇಷಚೇತನರಿಗೆ ಅವಮಾನ ಮಾಡಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನಿತೀಶ್ ಕೆ ಕೂಡಲೇ ವಿಶೇಷಚೇತನರ ಬಳಿ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಕರ್ನಾಟಕ ವಿಶೇಷಚೇತನರ ರಾಜ್ಯ ಒಕ್ಕೂಟದ ರಾಜ್ಯ ಉಪಾಧ್ಯಕ್ಷ ಶಿವಗ್ಯಾನಿ ಅತ್ತನೂರು ಒತ್ತಾಯಿಸಿದರು.

- Advertisement -

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, “ವಿಶ್ವ ವಿಶೇಷಚೇತನರ ದಿನಾಚರಣೆಯ ಅಂಗವಾಗಿ ನಡೆದಿದ್ದ ಪೂರ್ವಭಾವಿ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಹಾಗೂ ವಿಶೇಷಚೇತನರ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿತ್ತು. ವೇದಿಕೆ ಹತ್ತಲು ಆಗದವರಿಗೆ ರ್‍ಯಾಂಪ್‌, ಬ್ರೈಲ್ ಲಿಪಿ ಸೇರಿದಂತೆ ವಿವಿಧ ಸಲಕರಣೆ ಇಡಬೇಕೆಂದು ಮನವಿ ಮಾಡಲಾಗಿತ್ತು. ಆದರೂ ಕೃತಕ ರ್‍ಯಾಂಪ್‌ ಅಳವಡಿಸದೆ ಸಾಧಕರನ್ನು ವೇದಿಕೆಯ ಕೆಳಭಾಗದಲ್ಲಿ ಕೂರಿಸಿದ್ದರು. ಅಲ್ಲಿಯೇ ಸನ್ಮಾನ ಮಾಡಿದ್ದು, ವಿಶೇಷಚೇತನರ ಕಾಯ್ದೆಯ ಉಲ್ಲಂಘನೆ ಮಾಡಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ವಿಶೇಷಚೇತನರಿಗೆ ಆದ ಅವಮಾನವನ್ನು ಕಾರ್ಯಕ್ರಮದ ವೇಳೆ ಜಿಲ್ಲಾಧಿಕಾರಿಗೆ ಹೇಳಲು ಮುಂದಾದ ವೇಳೆ ಮತ್ತೊಂದು ದ್ವಾರದಿಂದ ಹೊರ ಹೋಗಿದ್ದರು. ವಿಶೇಷಚೇತನರ ಕಲ್ಯಾಣ ಅಧಿಕಾರಿ ಶ್ರೀದೇವಿಗೆ ಹೇಳಿದರೂ ಉಡಾಫೆಯ ಉತ್ತರ ನೀಡಿದ್ದಾರೆ” ಎಂದು ದೂರಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬಸವಣ್ಣನವರ ಕುರಿತು ಅವಹೇಳನ : ಶಾಸಕ ಯತ್ನಾಳ್ ಕ್ಷಮೆಗೆ ಜಾಗತಿಕ ಲಿಂಗಾಯತ ಮಹಾಸಭಾ ಆಗ್ರಹ

“ಕಾರ್ಯಕ್ರಮ ಆಯೋಜಿಸಿದ್ದ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಕೈಗೊಂಡು ಜಿಲ್ಲಾಧಿಕಾರಿ ಕ್ಷಮೆಯಾಚಿಸಬೇಕು” ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಮುಖಂಡ ಶಿವಶಂಕರ್ ಬಾಳೆ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...