ರಾಯಚೂರು | ಧೂಳಿನ ಸಮಸ್ಯೆ ನಿವಾರಣೆಗೆ ಜಯ ಕರವೇ ಮನವಿ

Date:

Advertisements

ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಧೂಳಿನ ಸಮಸ್ಯೆ‌ ಅತಿಯಾಗಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ ಎಂದು ಆರೋಪಿಸಿ ಜಯ ಕರ್ನಾಟಕ ರಕ್ಷಣಾ ಸೇನೆಯಿಂದ ಪುರಸಭೆಯ ಮುಖ್ಯಾಧಿಕಾರಿ ಪರಶುರಾಮ ಅವರಿಗೆ ಮನವಿ ಸಲ್ಲಿಸಿದರು.

“ಮಾನ್ವಿ ಪಟ್ಟಣದ ಪ್ರವಾಸಿ ಮಂದಿರದಿಂದ ಕೋನಾಪುರಪೇಟೆ ಮುಖ್ಯರಸ್ತೆಯ ಚರಂಡಿ ಕಾಮಗಾರಿ ನಡೆದಿದೆ. ಕಾಮಗಾರಿ ನಡೆಯುತ್ತಿರುವ ರಸ್ತೆಯಲ್ಲಿ ವಿಪರೀತ ಮಣ್ಣು ತುಂಬಿಕೊಂಡಿದ್ದು, ಎಲ್ಲೆಡೆ ಹರಡಿಕೊಂಡಿದೆ” ಎಂದು‌ ದೂರಿದರು.

“ಮರಳು ಸಾಗಿಸುವ ಭಾರೀ ವಾಹನಗಳು, ಲಘು ವಾಹನಗಳು, ಟ್ರ್ಯಾಕ್ಟರ್‌ಗಳು ಹೆಚ್ಚಿನ ಸಂಖ್ಯೆಯಲ್ಲಿ ಓಡಾಡುತ್ತಿರುವುದರಿಂದ ಧೂಳಿನ ಕಣಗಳು ವಾಹನ‌ ಸವಾರರ ಕಣ್ಣಲ್ಲಿ ಹೋಗಿ ಅಪಘಾತಕ್ಕೆ ಕಾರಣವಾಗುತ್ತಿದೆ. ಧೂಳಿನ ಸಮಸ್ಯೆಯಿಂದ ಜನರಿಗೆ ಉಸಿರಾಟ, ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ” ಎಂದು ಆಳಲು ತೋಡಿಕೊಂಡರು.

Advertisements

“ಪ್ರವಾಸಿ ಮಂದಿರದಿಂದ ಕೋನಾಪುರಪೇಟೆ ಹಾಗೂ ಸಾರ್ವಜನಿಕರ ಸರ್ಕಾರಿ ಆಸ್ಪತ್ರೆವರೆಗೆ ವಿದ್ಯುತ್ ಕಂಬಗಳಿಗೆ ದೀಪಗಳನ್ನು ಅಳವಡಿಸಬೇಕು. ಮುಖ್ಯರಸ್ತೆಗಳಲ್ಲಿನ ಧೂಳಿನ ಸಮಸ್ಯೆಯನ್ನು ನಿವಾರಿಸಬೇಕು” ಎಂದು ಸಂಘಟನೆಯ ಪದಾಧಿಕಾರಿಗಳು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಶಾಸಕ ಚೆನ್ನಿ, ನೀವೆಷ್ಟು ಗೋಶಾಲೆಗಳಿಗೆ ಅನುದಾನ ನೀಡಿದ್ದೀರೆಂದು ಗಂಡಸ್ತನದಿಂದ ಹೇಳಿ: ಎಚ್‌ ಸಿ ಯೋಗೇಶ್

ಸಂಘಟನೆಯ ಅಧ್ಯಕ್ಷ ರಾಜಾ ವಿಜಯಕುಮಾರ ನಾಯಕ, ಪದಾಧಿಕಾರಿಗಳಾದ ಶರಣಯ್ಯಸ್ವಾಮಿ, ನಾಗರಾಜ ಶೆಟ್ಟಿ, ಶೇಖ್ ಮುಸ್ತಫಾ, ಗುರುರಾಜ ಕುಲಕರ್ಣಿ, ಈರೇಶ ಮಳ್ಳಿ, ಮಲ್ಲನಗೌಡ ಬೈಲಮಾರ್ಚೆಡ್, ಬಸವರಾಜ ಮೈಲಾರಿ, ಬಸವರಾಜ ಮೇಟಿ, ಜಲಾಲ್ ಶಾಸ್ತ್ರಿ ಕ್ಯಾಂಪ್ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X