ರಾಯಚೂರು | ಸಮರ್ಪಕ ವಿದ್ಯುತ್‌ ಪೂರೈಕೆಗೆ ಜೆಡಿಎಸ್ ಆಗ್ರಹ

Date:

ಕಳೆದ ಒಂದು ವಾರದಿಂದ ಗ್ರಾಮೀಣ ಪ್ರದೇಶದಲ್ಲಿ ಅನಿಯಮಿತ ಲೋಡ್ ಶೆಡ್ಡಿಂಗ್ ಜಾರಿಗೊಳಿಸಲಾಗುತ್ತಿದ್ದು, ಕೃಷಿ ಪಂಪಸೆಟ್ ಅವಲಂಬಿತ ಕೃಷಿಕರು ಸೇರಿದಂತೆ ವಿದ್ಯಾರ್ಥಿಗಳಿಗೂ ತೀವ್ರ ತೊಂದರೆಯಾಗುತ್ತಿದೆ. ಒಂದು ವಾರದಲ್ಲಿ ಯಾವುದೇ ಕ್ರಮ ಕೈಗೊಳ್ಳದೇ ಹೋದಲ್ಲಿ ರೈತರು, ವಿದ್ಯಾರ್ಥಿಗಳೊಂದಿಗೆ ತೀವ್ರ ಸ್ವರೂಪದ ಹೋರಾಟ ನಡೆಸುವುದಾಗಿ ರಾಯಚೂರು ಗ್ರಾಮೀಣ ಜೆಡಿಎಸ್ ಘಟಕದ ಅಧ್ಯಕ್ಷ ನಿಜಾಮುದ್ದೀನ್ ಎಚ್ಚರಿಸಿದರು.

ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, “ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತವೆಂದು ಘೋಷಿಸಲಾಗಿದೆ. ಮುಂಗಾರು ಬೆಳೆ ಕೆಳೆದುಕೊಂಡ ರೈತರು ಆತಂಕದಲ್ಲಿದ್ದಾರೆ. ಇಂಧನ ಸಚಿವರು ಲೋಡ್ ಶೆಡ್ಡಿಂಗ್ ಇಲ್ಲವೆಂದು ಹೇಳುತ್ತಿದ್ದಾರೆ. ಜೆಸ್ಕಾಂ ಅಧಿಕಾರಿಗಳು ವಿದ್ಯುತ್ ಕಡಿತಕ್ಕೆ ಕೆಪಿಟಿಸಿಎಲ್ ಕೇಳಬೇಕೆಂದು ಹೇಳುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಗ್ರಾಮೀಣ ಪ್ರದೇಶದಲ್ಲಿ ಕನಿಷ್ಟ ಐದು ಗಂಟೆಯೂ ವಿದ್ಯುತ್ ದೊರೆಯುತ್ತಿಲ್ಲ. ಮಧ್ಯರಾತ್ರಿ 12 ಗಂಟೆಯಿಂದ ಬೆಳಿಗಿನ ಜಾವ 5 ಗಂಟೆವರೆಗೆ ವಿದ್ಯುತ್ ನೀಡಿದರೆ ಕೃಷಿಗೆ ರಾತ್ರಿ ವೇಳೆ ನೀರು ಬಳಿಸಿಕೊಳ್ಳಲು ಆಗುವದಿಲ್ಲ. ಜೆಸ್ಕಾಂ ಅಧಿಕಾರಿಗಳು ಸುಳ್ಳು ಹೇಳಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಸರ್ಕಾರ ವಿದ್ಯುತ್ ಪೂರೈಕೆಯಲ್ಲಿ ಸಂಪೂರ್ಣ ವಿಫಲವಾಗಿದೆ” ಎಂದು ಆರೋಪಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ನಾಲ್ಕರಿಂದ ಐದು ಸಾವಿರ ಮೆ.ವ್ಯಾ ವಿದ್ಯುತ್ ಬೇರೆ ಮೂಲಗಳಿಂದ ರಾಜ್ಯ ಸರ್ಕಾರ ಖರೀದಿ ಮಾಡುತ್ತಿದೆ. ಆದರೆ ಖರೀದಿಸಿದ ವಿದ್ಯುತ್ ಬೆಂಗಳೂರಿಗೆ ಸೀಮಿತವಾಗಿ ಗ್ರಾಮೀಣ ಜನರಿಗೆ ವಂಚಿಸಲಾಗುತ್ತಿದೆ. 24 ಗಂಟೆ ವಿದ್ಯುತ್ ಒದಗಿಸುವದಾಗಿ ಹೇಳುತ್ತಲೇ ಬಂದಿರುವ ಸರ್ಕಾರಗಳು ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲೆಗೆ ತಳ್ಳುವ ಪ್ರಯತ್ನ ಮಾಡುತ್ತಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ವಿದ್ಯುತ್ ಕಡಿತಗೊಳಿಸಿ ಅಭ್ಯಾಸ ಮಾಡಲು ಸಾಧ್ಯವಾಗದ ಸ್ಥಿತಿಯನ್ನು ನಿರ್ಮಾಣ ಮಾಡಿದೆ” ಎಂದರು.

“ಆರ್‌ಟಿಪಿಎಸ್ ಮತ್ತು ವೈಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕಗಳು ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಟ್ಟಿವೆ. ರಾಜ್ಯಕ್ಕೆ ವಿದ್ಯುತ್ ನೀಡುವ ಘಟಕಗಳಿದ್ದರೂ ಗ್ರಾಮೀಣ ಜನರಿಗೆ ಮಾತ್ರ ವಿದ್ಯುತ್ ಇಲ್ಲದಂತಾಗಿದೆ ಎಂದರು. ಈ ಮಧ್ಯೆ ಕಾಂಗ್ರೆಸ್ ಸರ್ಕಾರ ವೈಟಿಪಿಎಸ್ ಘಟಕವನ್ನು ಖಾಸಗಿಯವರಿಗೆ ವಹಿಸಲು ಟೆಂಡರ್ ಪ್ರಕ್ರಿಯೆ ನಡೆಸಿದೆ. ಯಾಪಲದಿನ್ನಿ ಸೋಲಾರ ವಿದ್ಯುತ್ ಘಟಕವನ್ನೂ ಖಾಸಗಿಯವರಿಗೆ ನೀಡಲು ಹೊರಟಿದೆ. ಆದರೂ ಗ್ರಾಮೀಣ ಶಾಸಕ ಮೌನವಾಗಿರುವದು ಸಂಶಯಗಳಿಗೆ ಕಾರಣವಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಗದಗ | ಸಂವಿಧಾನ ನಮ್ಮ ಬದುಕು, ಹಕ್ಕು, ಬಲ ನೀಡುವ ಮಹಾನ ಶಕ್ತಿ: ಸಚಿವ ಎಚ್.ಕೆ ಪಾಟೀಲ

“ಗ್ರಾಮೀಣ ಶಾಸಕರು ತಮ್ಮದೇ ಸರ್ಕಾರವಿದ್ದರೂ ಖಾಸಗೀಕರಣವನ್ನು ವಿರೋಧಿಸುತ್ತಿಲ್ಲ. ಸಮರ್ಪಕ ವಿದ್ಯುತ್ ಪೂರೈಕೆ ಮೇಲೆ ಗಮನ ಹರಿಸುತ್ತಿಲ್ಲ. ಈಗಾಗಲೇ ರೈತರು ಶಾಸಕರ ಗಮನಕ್ಕೆ ತಂದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಕೂಡಲೇ ಇಚ್ಛಾಶಕ್ತಿ ಪ್ರದರ್ಶಿಸಿ ಸಮರ್ಪಕ ವಿದ್ಯುತ್ ಪೂರೈಕೆಗೆ ಮುಂದಾಗಬೇಕು. ಇಲ್ಲದೇ ಹೋದಲ್ಲಿ ರೈತರು, ವಿದ್ಯಾರ್ಥಿಗಳು,ಪಾಲಕರು ಸೇರಿದಂತೆ ಗ್ರಾಮೀಣ ಜನರು ಸೇರಿ ಪಕ್ಷಾತೀತವಾಗಿ ಹೋರಾಟ ನಡೆಸಬೇಕಾಗುತ್ತದೆ” ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ರಾಘವೇಂದ್ರ ನಾಯಕ, ಮಹ್ಮದ ರಫಿ, ಉಪ್ಪಳ ಬಡೇಸಾಬ, ಗುಜ್ಜಲ ತಾಯಪ್ಪ ಇದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟದಿಂದ ವಿದ್ಯಾರ್ಥಿ ಯುವಜನರ ಪ್ರಣಾಳಿಕೆ ಬಿಡುಗಡೆ 

ರಾಜ್ಯದಲ್ಲಿ ಒಟ್ಟು ಎಂಟು ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟದಿಂದ 2024ರ ಈ ಬಾರಿಯ...

ವಿಜಯಪುರ | ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಸಭೆ

ರಾಜ್ಯದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ‌ ಕೆ ಶಿವಕುಮಾರ್,...

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗೆಲುವು ಗ್ಯಾರಂಟಿ: ಸದಾಶಿವ ಉಳ್ಳಾಲ್ ವಿಶ್ವಾಸ

ಉಳುವವನೇ ಭೂಮಿಯೊಡೆಯ, ಲೋನ್ ಮೇಳ, ಬ್ಯಾಂಕ್ ರಾಷ್ಟ್ರೀಕರಣ, ಮಂಗಳೂರಿಗೆ ಎನ್‌ಎಂಪಿಟಿ, ವಿಮಾನ...

ವಿಜಯಪುರ ಲೋಕಸಭಾ ಕ್ಷೇತ್ರ; 21 ಅಭ್ಯರ್ಥಿಗಳಿಂದ 35 ನಾಮಪತ್ರ ಸಲ್ಲಿಕೆ

ಲೋಕಸಭಾ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ವಿಜಯಪುರ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಕ್ಕೆ ಏಪ್ರಿಲ್‌...