ರಾಯಚೂರು | ಜಿಲ್ಲಾ ಉತ್ಸವ ಅಂಗವಾಗಿ ಜ್ಯೋತಿ ರಥಯಾತ್ರೆಗೆ ಚಾಲನೆ

Date:

ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ಅಂಗವಾಗಿ ಜಿಲ್ಲಾಡಳಿತ ರೂಪಿಸಿರುವ ಜ್ಯೋತಿ ರಥಯಾತ್ರೆಗೆ ಜಿಲ್ಲಾಧಿಕಾರಿ ನಿತೀಶ್ ಕೆ ಅವರು ಚಾಲನೆ ನೀಡಿದರು. ನಗರದ ಐತಿಹಾಸಿಕ ಕರ್ನಾಟಕ ಸಂಘದ ಆವರಣದಿಂದ ರಥಯಾತ್ರೆ ಅಧಿಕೃತವಾಗಿ ಆರಂಭವಾಯಿತು.

- Advertisement -

ಹೂವುಗಳು ಹಾಗೂ ತಳಿರು ತೋರಣಗಳಿಂದ ಶೃಂಗರಿಸಲ್ಪಟ್ಟ ರಥವು ಸಾರ್ವಜನಿಕರ ಗಮನ ಸೆಳೆಯಿತು. ರಥಯಾತ್ರೆಯು ನಗರದ ಬಂಗಾರ ಬಜಾರ್, ಸದರ್ ಬಜಾರ್, ಹಳೆ ನಗರಸಭೆ ಕಚೇರಿ ಮುಂಭಾಗ, ಕೇಂದ್ರ ಬಸ್ ನಿಲ್ದಾಣ, ಅಂಬೇಡ್ಕರ್ ವೃತ್ತ ಮಾರ್ಗವಾಗಿ ಬಸವೇಶ್ವರ ವೃತ್ತದ ಮೂಲಕ ತಾಲ್ಲೂಕು ಕಡೆಗೆ ಸಂಚರಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಮುಂದಿನ ದಿನಗಳಲ್ಲಿ ಮಾನ್ವಿ, ಸಿಂಧನೂರು, ಮಸ್ಕಿ, ಲಿಂಗಸೂರು, ಕವಿತಾಳ, ದೇವದುರ್ಗ, ಗಬ್ಬೂರ, ಅರಕೇರಾ, ಸಿರವಾರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಫೆಬ್ರವರಿ 5ರವರೆಗೆ ಜ್ಯೋತಿ ರಥಯಾತ್ರೆ ಸಂಚರಿಸಲಿದೆ. ಜಿಲ್ಲಾಡಳಿತದ ಸೂಚನೆ ಹಿನ್ನೆಲೆ, ರಜೆ ದಿನವಾದ ಭಾನುವಾರವೂ ಬೇರೆ ಬೇರೆ ಇಲಾಖೆಗಳ ಅಧಿಕಾರಿಗಳು ತಮ್ಮತಮ್ಮ ಕಚೇರಿಯ ಸಿಬ್ಬಂದಿಯೊಂದಿಗೆ ಜ್ಯೋತಿ ರಥಯಾತ್ರೆ ಕಾರ್ಯಕ್ರಮದಲ್ಲಿ ಶಾಲಾ-ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಥಯಾತ್ರೆಯನ್ನು ಯಶಸ್ವಿಗೊಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸ್ವ-ಸಹಾಯ ಗುಂಪುಗಳಿಂದ ತರಕಾರಿ-ಮೊಟ್ಟೆ ಸರಬರಾಜು ಖಂಡಿಸಿ ಬಿಸಿಯೂಟ ನೌಕರರಿಂದ ಪ್ರತಿಭಟನೆ

ಇದೇ ಸಂದರ್ಭದಲ್ಲಿ ರಾಯಚೂರು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪವನ್ ಕಿಶೋರ್ ಪಾಟೀಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕುಮಾರ್ ಕಾಂದೂ, ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ, ಅಪರ ಜಿಲ್ಲಾಧಿಕಾರಿ ಶಿವಾನಂದ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಕೃಷ್ಣ ಶಾವಂತಗೇರಿ, ಉಪ ಆಯುಕ್ತರಾದ ಸಂತೋಷ ರಾಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಜಯಪ್ರಕಾಶ್ ಚವ್ಹಾಣ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಸಿಂಧು ಆರ್. ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಮತ್ತು ರಾಯಚೂರು ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.
ಮುಖಂಡರಾದ ರವಿ ಭೋಸರಾಜು, ಜಯವಂತರಾವ್ ಪತಂಗೆ, ಕೆ.ಶಾಂತಪ್ಪ, ರವಿ ಜಲ್ದಾರ್ ಸೇರಿದಂತೆ ವಿವಿಧ ದಿನಾಚರಣೆಗಳ ಆಚರಣಾ ಸಮಿತಿಯ ಸದಸ್ಯರು ಕೂಡ ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಶೇಕ್ರಾ ನಾಯ್ಕ ಅವರಿಗೆ ವಿಭಾ ಸಾಹಿತ್ಯ ಪ್ರಶಸ್ತಿ

2026ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಗೆ ವಿಜಯನಗರ ಜಿಲ್ಲೆ ಹರಪನಹಳ್ಳಿಯ ಶೇಕ್ರಾನಾಯ್ಕ...

ರಾಯಚೂರು | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಗುಡಿಸಲು ಸಂಪೂರ್ಣ ಭಸ್ಮ

ಮಸ್ಕಿ ತಾಲ್ಲೂಕಿನ ಬಳಗಾನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬಸವೇಶ್ವರ ನಗರದಲ್ಲಿ ಶನಿವಾರ...

ಹಾಸನ | ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ, SIR ನಿಲ್ಲಿಸಿ; ಸಿಪಿಐಎಂ-ಸಿಪಿಐ ಪ್ರತಿಭಟನೆ 

ತಪ್ಪಾಗಿ ಹೊರಗಿಡಲಾದವರ ಮತದಾನ ಹಕ್ಕುಗಳನ್ನು ಮರುಸ್ಥಾಪಿಸಿ. ಭಾರತ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು...

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...