ಬಸವಸಾಗರ ಜಲಾಶಯದಿಂದ ಕೃಷ್ಣಾನದಿಗೆ ಶುಕ್ರವಾರ 1,78,760 ಕ್ಯೂಸೆಕ್ಸ್ ನೀರು ಹರಿಸಲಾಗಿದ್ದು, ನದಿ ತುಂಬಿ ಹರಿಯುತ್ತಿದೆ. ಪರಿಣಾಮ, ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಶೀಲಹಳ್ಳಿ ಸೇತುವೆ ಜಲಾವೃತವಾಗಿದ್ದು, ಸೇತುವೆ ಮೇಲೆ ಸಂಚಾರ ಸ್ಥಗಿತಗೊಂಡಿದೆ.
ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದ್ದು, ಬಸವಸಾಗ ಜಲಾಶಯವು ಬಹುತೇಕ ತುಂಬಿದೆ. 490.020 ಮೀಟರ್ ನೀರು ಸಂಗ್ರಹವಾಗಿದೆ. ಇನ್ನೂ ಒಳಹರಿವು ಹೆಚ್ಚಾಗಿರುವ ಹಿನ್ನೆಲೆ 20 ಗೇಟ್‌ಗಳನ್ನು ತೆಗೆದು, 1.7 ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ.
ಮುನ್ನೆಚ್ಚರಿಕೆಯ ಕ್ರಮವಾಗಿ ತಾಲೂಕಿನ ಶೀಲಹಳ್ಳಿ ಸೇತುವೆ ಬಳಿ ಪೊಲೀಸ್ ಕಾವಲು ಹಾಕಲಾಗಿದೆ. ಪ್ರತಿವರ್ಷವೂ ಮುಳುಗಡೆ ಎದುರಿಸುತ್ತಿರುವ ಗ್ರಾಮಗಳಲ್ಲಿ ಎತ್ತರದ ಹೊಸ ಸೇತುವೆ ನಿರ್ಮಾಣ ಮಾಡಲು ಸರ್ಕಾರಗಳು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿವೆ. ಪ್ರತಿ ವರ್ಷವೂ ಮಳೆಗಾಲದಲ್ಲಿ ಜನರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಸ್ಥಳೀಯರು ಕಿಡಿಕಾರಿದ್ದಾರೆ.